Friday, March 14, 2025

Latest Posts

ಮೈಸೂರಿಗೆ ತೆರಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ: ನಟ ಯಶ್ – ಬೊಮ್ಮಾಯಿ ಜೊತೆಪ್ರಯಾಣ

- Advertisement -

banglore:

ಹೆಚ್ಎಎಲ್ ವಿಮಾನ ನಿಲ್ದಾಣದ ಮೂಲಕ ಹೆಲಿಕಾಪ್ಟರ್​ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ‌ ಅವರು ಮೈಸೂರಿಗೆ ತೆರಳಲಿದ್ದು, ಅಲ್ಲಿ ಮೈಸೂರು ವಿಶ್ವವಿದ್ಯಾಲಯ ಆಯೋಜಿಸಿರುವ 75ನೇ ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವದ ನಿಮಿತ್ತ ಯುವಜನ ಮಹೋತ್ಸವ ಹಾಗೂ ವಿಶ್ವವಿದ್ಯಾಲಯದ ಇಂಜಿನಿಯರಿಂಗ್ ಕಾಲೇಜು ಮತ್ತು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮಾಡಲಿದ್ದಾರೆ. ನಂತರ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿರುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಮೈಸೂರಿಗೆ ತೆರಳಿದ್ದು, ಸಿಎಂ ಜೊತೆ ರಾಕಿಂಗ್ ಸ್ಟಾರ್ ಯಶ್ ಕೂಡ ಹೆಲಿಕ್ಯಾಪ್ಟರ್​ನಲ್ಲಿ ಪ್ರಯಾಣಿಸಿದ್ದಾರೆ. ಮೈಸೂರಿನಲ್ಲಿ ಮಹಾರಾಜ ಕಾಲೇಜು ಕಾರ್ಯಕ್ರಮದಲ್ಲಿ ಸಿಎಂ ಜೊತೆ ನಟ ಯಶ್ ಕೂಡ ಭಾಗಿಯಾಗಲಿದ್ದು, ಸಿಎಂ ಜೊತೆ ಒಟ್ಟಿಗೆ ಮೈಸೂರಿಗೆ ತೆರಳಿದರು. ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಯಶ್,[yash] ಸಿಎಂ ಬೊಮ್ಮಾಯಿ‌ ಜೊತೆ ಒಂದೇ ಹೆಲಿಕ್ಯಾಪ್ಟರ್​ನಲ್ಲೇ ಪ್ರಯಾಣಿಸಿದರು.

ಮಧ್ಯಾಹ್ನ ರಸ್ತೆ ಮೂಲಕ ಮೈಸೂರಿನಿಂದ ಮಂಡ್ಯ ಜಿಲ್ಲೆಗೆ ತೆರಳಲಿರುವ ಸಿಎಂ ಬೊಮ್ಮಾಯಿ ಮಂಡ್ಯ ವಿಶ್ವವಿದ್ಯಾಲಯ ಮತ್ತು ಜಿಲ್ಲಾಡಳಿತದ ವತಿಯಿಂದ ಆಯೋಜಿಸಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯಲ್ಲಿ ಭಾಗವಹಿಸಲಿದ್ದಾರೆ. ತದನಂತರ ಮಂಡ್ಯ ವಿಶ್ವವಿದ್ಯಾಲಯದ ಆವರಣದಲ್ಲಿ ಜರುಗಲಿರುವ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ- ಸಂಜೀವಿನಿ ಸಂಸ್ಥೆಯ ಜೀವನೋಪಾಯ ವರ್ಷಾಚರಣೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ನಂತರ ಮದ್ದೂರು ತಾಲೂಕಿನ ಭಾರತಿ ನಗರದಲ್ಲಿರುವ ಭಾರತಿ ಎಜುಕೇಶನ್ ಟ್ರಸ್ಟ್ ವತಿಯಿಂದ ಆಯೋಜಿಸಿರುವ ಭಾರತಿ ವಜ್ರ ಮಹೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಇದಾದ ಬಳಿಕ ರಸ್ತೆ ಮೂಲಕ ಮುಖ್ಯಮಂತ್ರಿಗಳು ಬೆಂಗಳೂರು ನಗರಕ್ಕೆ ವಾಪಸಾಗಲಿದ್ದಾರೆ.

ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ, ಖ್ಯಾತ ಚಿತ್ರ ನಟ ಯಶ್ ಅವರು ಹೆಲಿ ಕ್ಯಾಪ್ಟರ್ ನಲ್ಲಿ ಮುಖ್ಯಮಂತ್ರಿ ಗಳ ಜತೆ ಮೈಸೂರಿಗೆ ತೆರಳಿದರು.

ಮಳೆಯಿಂದ ಹಾನಿ: ಕೇಂದ್ರಕ್ಕೆ 2-3 ದಿನಗಳಲ್ಲಿ ಮನವಿ

- Advertisement -

Latest Posts

Don't Miss