ಮೈಸೂರು: ಅಪರಿಚಿತರು ಚರ್ಚ್ ಅನ್ನು ಧ್ವಂಸಗೊಳಿಸಿದ್ದಾರೆ. ಇದರೊಂದಿಗೆ ಚರ್ಚ್‌ನಲ್ಲಿದ್ದ ಯೇಸುವಿನ ಪ್ರತಿಮೆಗೂ ಹಾನಿಯಾಗಿದೆ. ಕ್ರಿಸ್‌ಮಸ್ ಹಬ್ಬದ ಎರಡು ದಿನಗಳ ನಂತರ ಮೈಸೂರಿನ ಪಿರಿಯಾಪಟ್ಟಣದ ಸೇಂಟ್ ಮೇರಿ ಚರ್ಚ್‌ನಲ್ಲಿ ಈ ವಿಧ್ವಂಸಕ ಕೃತ್ಯ ನಡೆದಿದೆ. ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಹಲವು ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಆರೋಪಿಗಳನ್ನು ಗುರುತಿಸಲು ಪೊಲೀಸರು ಚರ್ಚ್ ಆವರಣದಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡುತ್ತಿದ್ದಾರೆ. ಮಂಗಳವಾರ ಸಂಜೆ 6 ಗಂಟೆಗೆ ವಿಧ್ವಂಸಕ ಕೃತ್ಯವನ್ನು ನೋಡಿದ ಚರ್ಚ್‌ನ ಉದ್ಯೋಗಿಯೊಬ್ಬರು ತಕ್ಷಣ ಪಾದ್ರಿಗಳಿಗೆ ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಏರಿಕೆ : ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಸಂಸದ ಎಸ್. ಮುನಿಸ್ವಾಮಿ
ದಾಳಿಕೋರರು ಚರ್ಚ್‌ಗೆ ಪ್ರವೇಶಿಸಲು ಹಿಂದಿನ ಬಾಗಿಲನ್ನು ಒಡೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣದ ಕುರಿತು ಮಾಹಿತಿ ನೀಡಿದ ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಸಮೀಪದ ಕ್ಯಾಮರಾಗಳಲ್ಲಿ ದಾಖಲಾಗಿರುವ ಸಿಸಿಟಿವಿ ದೃಶ್ಯಾವಳಿಗಳಿಂದ ಸುಳಿವುಗಳನ್ನು ಹುಡುಕುತ್ತಿದ್ದೇವೆ, ಅವರು ಹಣದೊಂದಿಗೆ ಪರಾರಿಯಾಗಿರುವುದರಿಂದ ಮೇಲ್ನೋಟಕ್ಕೆ ಕಳ್ಳತನವಾಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಚರ್ಚ್‌ನ ಹೊರಗೆ ಸಂಗ್ರಹಣೆ ಪೆಟ್ಟಿಗೆಯನ್ನು ಇರಿಸಲಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಏರಿಕೆ : ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಸಂಸದ ಎಸ್. ಮುನಿಸ್ವಾಮಿ
ಮೂರನೇ ದಿನಕ್ಕೆ ಕಾಲಿಟ್ಟ ನಿವೇಶನ ರಹಿತರ ಹೋರಾಟ : ಪ್ರತಿಭಟನಾ ಸ್ಥಳಕ್ಕೆ ಅಗಮಿಸಿದ ಪುರಸಭಾ ಅಧ್ಯಕ್ಷ ಕಾಡಪ್ಪ