Friday, November 22, 2024

Latest Posts

ಮೈಸೂರು ಉಗ್ರರ ಪಾಲಿಗೆ ಸ್ಲೀಪಿಂಗ್ ಸೆಲ್ ಆಗುತ್ತಿದೆ : ಶ್ರೀರಾಮ‌ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್

- Advertisement -

ಮೈಸೂರು: ಮೈಸೂರು ಉಗ್ರರ ಪಾಲಿಗೆ ಸ್ಲೀಪಿಂಗ್ ಸೆಲ್ ಆಗುತ್ತಿದೆ. ಉಗ್ರರು ಸ್ವೇಚ್ಚೆಯಿಂದ ಓಡಾಡುವಂತಾಗಿದೆ. ಉಗ್ರರ ಭಯೋತ್ಪಾನೆ ಬಗೆಯ ಚಟುವಟಿಕೆಗಳು ವ್ಯಾಪಕವಾಗುತ್ತಿವೆ. ಮೈಸೂರಿನಲ್ಲಿ ಭಯೋತ್ಪಾದನಾ ನಿಗ್ರಹ ದಳ ಘಟಕ‌ ಸ್ಥಾಪಿಸಬೇಕು. ಎನ್.ಆರ್. ಕ್ಷೇತ್ರದಲ್ಲಿ ಕೂಂಬಿಂಗ್ ಆಪರೇಷನ್‌ ಆಗಬೇಕೆಂಬ ಸಂಸದ ಪ್ರತಾಪಸಿಂಹ ಹೇಳಿಕೆಯನ್ನು ಬೆಂಬಲಿಸುತ್ತೇನೆ.

ಕುಮಾರಸ್ವಾಮಿ ವಿರುದ್ಧ ಚೆಲುವರಾಯಸ್ವಾಮಿ ವ್ಯಂಗ್ಯ

ಮಂಗಳೂರು ಬಾಂಬ್ ಬ್ಲಾಸ್ಟ್ ಮಾಡಿದ ಶಾರಿಕ್ ಹಿಂದೂ ವೇಷ ಧರಿಸಿದ ವಿಚಾರವಾಗಿ ಮಾತನಾಡಿದ  ಶ್ರೀರಾಮ‌ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಉಗ್ರಗಾಮಿಗಳು ತಾವು ಮಾಡುವ ಕೃತ್ಯಗಳನ್ನ ಹಿಂದೂಗಳ ಮೇಲೆ ಹಾಕಲು ಈ ಕುತಂತ್ರ ಮಾಡುತ್ತಿದ್ದಾರೆ. ಹಿಂದೂಗಳು ಯಾವತ್ತೂ ಭಯೋತ್ಪಾದನಾ ಚಟುವಟಿಕೆ ಮಾಡುವುದಿಲ್ಲ. ಭಾರತದಲ್ಲಿ ಮಾತ್ರ ಅಲ್ಲ,‌ಇಡೀ ವಿಶ್ವದಲ್ಲೇ ಜಗಜ್ಜಾಹೀರಾಗಿರೋದು ಇಸ್ಲಾಂ ಭಯೋತ್ಪಾದನೆ ಮಾತ್ರ. ಹಾಗಾಗಿ ಇಸ್ಲಾಮಿಕ್ ಭಯೋತ್ಪಾದನೆ ಮಟ್ಟ ಹಾಕಬೇಕು. ಮುಸ್ಲಿಂ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಅಂದರೆ ಅಲ್ಲಿ ಎಲ್ಲಾ ರೀತಿಯ ಅಕ್ರಮ ಚಟುವಟಿಕೆಗಳಿವೆ ಎಂದರ್ಥ. ಅದೇ ಕಾರಣಕ್ಕೆ ಮುಸ್ಲೀಮರು ಅತೀ ಹೆಚ್ಚಿರೋ ಪ್ರದೇಶನವನ್ನು ಸೂಕ್ಷ್ಮ ಪ್ರದೇಶ ಎನ್ನುತ್ತಾರೆ ಎಂದು ಮೈಸೂರಿನಲ್ಲಿ ಶ್ರೀರಾಮ‌ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿಕೆ ನೀಡಿದ್ದಾರೆ.

ಸೌತೆಕಾಯಿಯ ಅದ್ಭುತ ಉಪಯೋಗಗಳು ಗೊತ್ತಾದರೆ ಇದನ್ನು ತಿನ್ನದೆ ಬಿಡುವುದಿಲ್ಲ..!

 

- Advertisement -

Latest Posts

Don't Miss