ನಾಗಮಂಗಲ ಗಲಾಟೆ ಕೇಸ್: ಯಾವ ಧರ್ಮದವರಾದರೂ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಸಿದ್ದರಾಮಯ್ಯ

Political News: ಮಂಡ್ಯದ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ, ಕಲ್ಲು ತೂರಾಟ ನಡೆದು, ಕೋಮುಗಲಭೆ ಉಂಟಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಘರ್ಷಣೆಗೆ ಕಾರಣರಾದವರು, ಕಲ್ಲು ತೂರಾಟ ಮಾಡಿದವರು ಯಾವ ಧರ್ಮದವರಾದರೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ನಡೆದಿರುವ ಕಲ್ಲುತೂರಾಟವು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆತರುವ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದು ನಿಸ್ಸಂಶಯ. ಇದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಈಗಾಗಲೇ 50ಕ್ಕೂ ಅಧಿಕ ಜನರನ್ನು ಬಂಧಿಸಲಾಗಿದ್ದು, ಸಮಾಜದ ಶಾಂತಿ, ಸುವ್ಯವಸ್ಥೆ ಕಾಪಾಡುವುದೇ ನಮ್ಮ ಮೊದಲ ಆದ್ಯತೆಯಾಗಿದೆ.

ಕಳೆದ ಒಂದೂವರೆ ವರ್ಷಗಳಿಂದ ಯಾವುದೇ ಗಲಭೆ, ಗಲಾಟೆ, ಹಿಂಸಾಚಾರಗಳು ನಡೆಯದೆ ಸರ್ವಜನಾಂಗದ ಶಾಂತಿಯ ತೋಟದಂತಿದ್ದ ನಾಡನ್ನು, ಧಾರ್ಮಿಕ ನೆಲೆಗಟ್ಟಿನಲ್ಲಿ ವಿಭಜಿಸಲು ಯತ್ನಿಸುವ ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಪ್ರಚೋದನೆಗಳಿಗೆ ಒಳಗಾಗದೆ ಶಾಂತಿ, ಸಂಯಮ ಕಾಪಾಡಿಕೊಳ್ಳುವ ಮೂಲಕ ನಮ್ಮೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

https://youtu.be/uqBkJ-j2y4Y

About The Author