Friday, December 13, 2024

Latest Posts

ಮೋದಿಯವರು ಪ್ರಧಾನಿಯಾಗಿರಲು ನಾಲಾಯಕ್: ಪಿಎಂ ವಿರುದ್ಧ ನಾಲಿಗೆ ಹರಿಬಿಟ್ಟ ಸಿಎಂ ಸಿದ್ದರಾಮಯ್ಯ

- Advertisement -

Political News: ಕೋಲಾರ ಜಿಲ್ಲೆಯಲ್ಲಿ ಆಯೋಜಿಸಿದ್ದ ರೋಡ್ ಶೋನಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಅವರಿಗೆ ಮತ ನೀಡುವಂತೆ ಮನವಿ ಮಾಡಿದರು.

ಇದೇ ವೇಳೆ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ, ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀನಿ ಅಂತ ಇಡೀ ದೇಶದ ಯುವಕ, ಯುವತಿಯರಿಗೆ ನಂಬಿಸಿದರು. ನರೇಂದ್ರ ಮೋದಿ ಮಾತನ್ನು ನಂಬಿ ಯುವ ಸಮೂಹ ಮತ ಹಾಕಿದ್ರು. ಹೀಗೆ ಮತ ಹಾಕಿದವರೆಲ್ಲಾ ಡಿಗ್ರಿ ಮುಗಿಸಿ ಕೆಲ್ಸ ಕೊಡಿ ಎಂದು ಕೇಳಿದರೆ, “ಹೋಗಿ ಪಕೋಡ ಮಾರಾಟ ಮಾರಿ” ಅಂದರು. ನಿರುದ್ಯೋಗಿ ಯುವಕ/ಯುವತಿಯರಿಗೆ ಪಕೋಡ ಮಾರಿ ಅನ್ನೋಕೆ ಮೋದಿಯೇ ಪ್ರಧಾನಿ ಆಗಬೇಕಿತ್ತಾ? ಎಂದು ಸಿಎಂ ಪ್ರಶ್ನಿಸಿದ್ದಾರೆ.

ಮೋದಿಯವರು ಪ್ರಧಾನಿಯಾಗಿರಲು ನಾಲಾಯಕ್ ಎಂದು ವಿದ್ಯಾವಂತ ಯುವ ಸಮೂಹ ತೀರ್ಮಾನಿಸಿದೆ. ಇಂಥಾ ನಾಲಾಯಕ್ ಗೆ ಮತ ಹಾಕ್ತೀರಾ? ಹತ್ತತ್ತು ವರ್ಷ ಮತ ಹಾಕಿದ್ದೀರ ನಿಮಗೆ, ದೇಶಕ್ಕೆ ಏನಾದ್ರೂ ಸಿಕ್ಕಿತಾ? ಈ ಹತ್ತು ವರ್ಷದಲ್ಲಿ ಏನೇನೂ ಕೊಡದವರು ಈ ಬಾರಿ ನಿಮ್ಮ ಮತ ಕೇಳುತ್ತಿದ್ದಾರೆ, ಹೀಗೆ ಮತ ಕೇಳುವ ಯೋಗ್ಯತೆಯಾಗಲೀ, ಅರ್ಹತೆಯಾಗಲೀ ಬಿಜೆಪಿ ಅವರಿಗೆ ಇದೆಯೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ನಾಲಾಯಕ್ ನರೇಂದ್ರ ಮೋದಿಯವರು ಬರುವ ಮೊದಲು ಪೆಟ್ರೋಲ್, ಡೀಸೆಲ್, ಗ್ಯಾಸ್, ರಸಗೊಬ್ಬರ, ಬೇಳೆಕಾಳು, ಅಡುಗೆ ಎಣ್ಣೆ ಬೆಲೆ ಎಷ್ಟಿತ್ತು? ಈಗ ಎಷ್ಟಾಗಿದೆ?‌ ಹೀಗಾಗಿ ಬಿಜೆಪಿಯ ಖಾಲಿ ಚೊಂಬಿಗೆ ಮತ ಹಾಕ್ತೀರಾ? ನಿಮ್ಮ ಜೇಬು ತುಂಬಿಸುವ ಮತ್ತು ನಿಮ್ಮ ಬ್ಯಾಂಕ್ ಖಾತೆಗೆ ಹಣ ಹಾಕಿ ನುಡಿದಂತೆ ನಡೆಯುವ ನಮಗೆ, ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕ್ತೀರೋ? ಎನ್ನುವುದನ್ನು ಯೋಚಿಸಿ ತೀರ್ಮಾನಿಸಿ ಎಂದು ಸಿಎಂ ಹೇಳಿದ್ದಾರೆ.

ರಾಜ್ಯದಲ್ಲಿ ಉತ್ತರ ಪ್ರದೇಶದ ಮಾದರಿಯಲ್ಲಿ ಕಾನೂನು ಜಾರಿಗೆ ತರಬೇಕು: ಚಕ್ರವರ್ತಿ ಸೂಲಿಬೆಲೆ

ಲವ್ ಜಿಹಾದ್‌ಗೆ ದೇಶದಲ್ಲಿ ತರಬೇತಿ ಕೇಂದ್ರವಿರಬೇಕು ಅನಿಸುತ್ತಿದೆ‌: ಜಗದೀಶ್ ಶೆಟ್ಟರ್

ಕಾಂಗ್ರೆಸ್ 28 ಸ್ಥಾನ ಸೋತರೆ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಖುಷಿ: ಬಿ.ವೈ.ವಿಜಯೇಂದ್ರ

- Advertisement -

Latest Posts

Don't Miss