Naleen Kumar Kateel : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಕಾಂಗ್ರೆಸ್ ವಿಫಲವಾಗಿದೆ : ಕಟೀಲ್

Manglore News : ಉಡುಪಿಯ ಖಾಸಗಿ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಂದು ವಿದ್ಯಾರ್ಥಿನಿಯರ ಖಾಸಗಿ ವೀಡಿಯೊ ಚಿತ್ರೀಕರಣ ನಡೆಸಿದ ಘಟನೆ ಖಂಡಿಸಿ ದ.ಕ. ಜಿಲ್ಲಾ ಬಿಜೆಪಿ ವತಿಯಿಂದ ಮಂಗಳೂರು ಪುರಭವನ ಮುಂಭಾಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು, ಸಂಸದರು ಶ್ರೀ ನಳಿನ್ ಕುಮಾರ್ ಕಟೀಲ್‌ರವರ ಉಪಸ್ಥಿತಿಯಲ್ಲಿ  ಜಿಲ್ಲಾದ್ಯಕ್ಷರು ಸುದರ್ಶನ ಎಂ.ರವರ ಅಧ್ಯಕ್ಷತೆಯಲ್ಲಿ  ಬೃಹತ್ ಪ್ರತಿಭಟನೆ ನಡೆಯಿತು.ಈ ವೇಳೆ ನಳೀನ್ ಕುಮಾರ್ ಕಟೀಲ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಷ್ಟ್ರ ವಿರೋಧಿ ಹಾಗೂ ಭಯೋತ್ಪಾದಕರ ಪರ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಜಿಹಾದಿಗಳು ತಲೆ ಎತ್ತಿದ್ದಾರೆ. ಸಿದ್ದರಾಮಯ್ಯ ಸಿಎಂ ಆದಮೇಲೆ ಹಿಂದೂ ವಿರೋಧಿ ನೀತಿ ಹೆಚ್ಚಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಕಾಂಗ್ರೆಸ್ ವಿಫಲವಾಗಿದೆ.

ಸಿದ್ದರಾಮಯ್ಯ, ಜಿ. ಪರಮೇಶ್ವರ್ ಕೇರಳ ಫೈಲ್ಸ್ ಸಿನಿಮಾ ನೋಡಲಿ. ಉಡುಪಿಯಲ್ಲಿ ನಡೆದಿರೋದು ಕೇರಳ ಫೈಲ್ಸ್ ಸಿನಿಮಾ. ಕಾಂಗ್ರೆಸ್ ಗೆದ್ದಾಗಲೇ ಪಾಕಿಸ್ತಾನ ಪರ ಜಯಘೋಷ ಕೂಗಿದರು. ಆದರೆ ಈವರೆಗೂ ಅವರನ್ನು ಸಿದ್ದರಾಮಯ್ಯ ಜೈಲಿಗೆ ಹಾಕಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ವಾಗ್ದಾಳಿ ನಡೆಸಿದರು.

ಈ ಸಂದರ್ಭ ಶಾಸಕರುಗಳಾದ ಕೋಟ ಶ್ರೀನಿವಾಸ ಪೂಜಾರಿ, ರಾಜೇಶ್ ನಾಯಕ್, ಡಾ.ವೈ ಭರತ್ ಶೆಟ್ಟಿ, ವೇದವ್ಯಾಸ್ ಕಾಮತ್, ಉಮಾನಾಥ್ ಕೋಟ್ಯಾನ್,  ಹರೀಶ್ ಪೂಂಜಾ, ಪ್ರತಾಪ್ ಸಿಂಹ ನಾಯಕ್, ಕು. ಭಾಗೀರಥಿ ಮುರುಳ್ಯ, ಮೇಯರ್ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮ ಉಪಸ್ಥಿತರಿದ್ದರು.

Rama Kshathriya : ಕಾರ್ಕಳ ರಾಮ ಕ್ಷತ್ರೀಯ ಸಂಘದ ನೂತನ ಕಾರ್ಯಕಾರಿ ಸಮಿತಿ ಪದಗ್ರಹಣ

Rock City : ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ವನಮಹೋತ್ಸವ

Janardhan Bhat : ಅರಿವು-ತಿಳಿವು ಕಾರ್ಯಕ್ರಮದಲ್ಲಿ ಲೂಸಿಯಾಡ್ಸ್, ಭಾರತದ ಅನ್ವೇಷಣೆ ಕುರಿತು ಉಪನ್ಯಾಸ

About The Author