Thursday, December 4, 2025

Latest Posts

ನಮಸ್ತೇ ಸದಾ ವತ್ಸಲೇ.. ಡಿಕೆ RSS ಗೀತೆ ಹೇಳಿದ್ಮೇಲೆ ಏನಾಯ್ತು?

- Advertisement -

ವಿಧಾನಸಭೆ ಕಲಾಪದ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು RSS ಗೀತೆಯ ಸಾಲು ಹೇಳಿ ಅಚ್ಚರಿ ಮೂಡಿಸಿದ್ದಾರೆ. ‘ನಮಸ್ತೆ ಸದಾ ವತ್ಸಲೇ ಮಾತೃಭೂಮಿ’ ಎಂಬ RSS ಗೀತೆಯ ಮೊದಲ ಸಾಲುಗಳನ್ನು ಡಿಕೆ ಶಿವಕುಮಾರ್ ಅವರು ಉಚ್ಛರಿಸಿದಾಗ ಸದನ ಕೆಲ ಕ್ಷಣಗಳ ಕಾಲ ನಿಶಬ್ದವಾಯಿತು.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದ ಕುರಿತು ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಗದ್ದಲ ಉಂಟಾದಾಗ ಅವರು ಈ ಸಾಲುಗಳನ್ನು ಉಚ್ಚರಿಸಿದ್ದರು. ಈ ಕುರಿತು ವಿರೋಧ ಪಕ್ಷಗಳ ಸದಸ್ಯರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ನಾನು ಹುಟ್ಟಿನಿಂದಲೇ ಕಾಂಗ್ರೆಸ್ಸಿಗ. ನನ್ನ ರಕ್ತ, ನನ್ನ ನಡತೆ ಎಲ್ಲವೂ ಕಾಂಗ್ರೆಸ್‌ಗೆ ಬದ್ದವಾಗಿದೆ. ನಾನು ರಾಜಕೀಯ ಪಕ್ಷಗಳ ಬಗ್ಗೆ ಅಧ್ಯಯನ ಮಾಡಿದ್ದೇನೆ. RSS ಸಂಸ್ಥೆಗಳು ಕರ್ನಾಟಕದಾದ್ಯಂತ ಹೇಗೆ ಶಾಲೆಗಳನ್ನು ಹೇಗೆ ಸ್ವಾಧೀನಪಡಿಸಿಕೊಳ್ಳುತ್ತಿದೆ ಎಂದು ನಾನು ಚೆನ್ನಾಗಿ ಗಮನಿಸಿದ್ದೇನೆ. ನಾನು ಕಾಂಗ್ರೆಸ್ಸಿಗ ಮತ್ತು ನನ್ನ ಶಕ್ತಿಗಳನ್ನೆಲ್ಲಾ ಒಟ್ಟುಗೂಡಿಸಿ ಮುಂದಿನ ದಿನಗಳಲ್ಲಿ ಕೂಡ ಕಾಂಗ್ರೆಸ್ ಅನ್ನು ಮುನ್ನಡೆಸುತ್ತೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ರಾಜಕೀಯವಾಗಿ ನಾವು ಬಿಜೆಪಿ, RSS ಜೊತೆ ಭಿನ್ನಾಭಿಪ್ರಾಯ ಹೊಂದಿರಬಹುದು. ಆರ್ ಎಸ್ ಎಸ್ ಪ್ರಾರ್ಥನೆ ಹೇಳಿದ ತಕ್ಷಣ ನಾನು ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತೇನೆ ಎಂದರ್ಥವಲ್ಲ. ನಾನು ಕಾಂಗ್ರೆಸ್ ನ್ನು ಮುನ್ನಡೆಸಿಕೊಂಡು ಹೋಗುವ ಕೆಲಸ ಮಾಡುತ್ತೇನೆ ಎಂದಿದ್ದಾರೆ.

- Advertisement -

Latest Posts

Don't Miss