ಹುಬ್ಬಳ್ಳಿ: ‘ನಮ್ಮ್ ಕ್ಲಿನಿಕ್’ ಗಳನ್ನು ಮೇಲ್ದರ್ಜೆಗೇರಿಸಲು ಮುಂದಿನ ಬಜೆಟ್ ನಲ್ಲಿ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ನಾನು ಯಾವುದೇ ಷರತ್ತು ಹಾಕದೆ ಕಾಂಗ್ರೆಸ್ ಸೇರ್ಪಡೆಯಾಗಲು ನಿರ್ಧರಿಸಿದ್ದೇನೆ : ಮಾಜಿ ಶಾಸಕ ವೈ.ಎಸ್.ವಿ ದತ್ತಾ
ಹಿಂದೆ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಡಿಸ್ಪೆನ್ಸರಿಗಳಿದ್ದವು. ವೈದ್ಯರು ನೆಗಡಿ, ಜ್ವರ ಇತ್ಯಾದಿ ಸಣ್ಣಪುಟ್ಟ ಪರೀಕ್ಷೆ ಮಾಡಿ ಚಿಕಿತ್ಸೆ ನೀಡುತ್ತಿದ್ದರು. ಬಡವರಿಗೆ ಪ್ರಾಥಮಿಕವಾಗಿ ಚಿಕಿತ್ಸೆ ನೀಡುವ ದೃಷ್ಟಿಯಿಂದ ನಮ್ಮ ಕ್ಲಿನಿಕ್ ಸ್ಥಾಪಿಸಲಾಗುತ್ತಿದೆ. 437 ಇಡೀ ರಾಜ್ಯ ದಲ್ಲಿ ಸ್ಥಾಪನೆಯಾಗುತ್ತಿದೆ. ಪ್ರಥಮ ಹಂತದಲ್ಲಿ ನೂರು ಕ್ಲಿನಿಕ್ ಗಳು ಪ್ರಾರಂಭವಾಗುತ್ತದೆ. ನಮ್ಮ ಕ್ಲಿನಿಕ್ ಗಳ ಕಾರ್ಯವೈಖರಿ ನೋಡಿಕೊಂಡು ತಪಾಸಣೆ ಮಾಡಿ ಔಷಧ ನೀಡುವುದಲ್ಲದೆ, ರಕ್ತ ಪರೀಕ್ಷೆ ಮುಂತಾದ ಪೂರ್ವಭಾವಿ ಪರೀಕ್ಷೆಗಳನ್ನು ಕೈಗೊಳ್ಳಲು ವ್ಯವಸ್ಥೆ ಕಲ್ಪಿಸಲಾಗುವುದು. ಟೆಲಿ ಮೆಡಿಸಿನ್ ವ್ಯವಸ್ಥೆಯನ್ನೂ ಇದಕ್ಕೇ ಜೋಡಿಸಲಾಗುವುದು ಎಂದು ಸಿಎಂ ಹೇಳಿದರು.
ರಸ್ತೆ ಬದಿ ಮೀನು ಮಾರಾಟಕ್ಕೆ ನಿರಾಕರಣೆ : ಜಿಲ್ಲಾಧಿಕಾರಿ ಕಚೇರಿ ಎದುರು ಮೀನುಗಾರರು ಪ್ರತಿಭಟನೆ
ಸಾಯಿಧರಮ್ ತೇಜ್ ಅಭಿನಯದ ‘ವಿರೂಪಾಕ್ಷ’ ಚಿತ್ರದ ಟೈಟಲ್ ಗ್ಲಿಂಪ್ಸ್ ಬಿಡುಗಡೆ