Thursday, March 13, 2025

Latest Posts

‘ಮುಂದಿನ ಪ್ರಧಾನಿ ನರೇಂದ್ರ ಮೋದಿಯವರೇ, ಇಲ್ಲದಿದ್ದರೆ ದೇಶ ಛಿದ್ರ ಛಿದ್ರ ಆಗಲಿದೆ’

- Advertisement -

Political News: ಹುಬ್ಬಳ್ಳಿ: ಮುಂದಿನ ಪ್ರಧಾನಿ ನರೇಂದ್ರ ಮೋದಿ ಅವರೇ ಆಗಲಿದ್ದು, ಅವರು ಆಗದಿದ್ದರೇ ದೇಶ ಛಿದ್ರ ಛಿದ್ರ ಆಗಲಿದೆ ಎಂದು ಮಾಜಿ ಸಚಿವ ಎ.ರಾಮದಾಸ್ ಹೇಳಿದರು.

ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಕಿಸ್ತಾನ, ಚಿನ್ನಾದಂತಹ ದೇಶಗಳು ಭಾರತದಲ್ಲಿ ನುಸುಳುವ ಯತ್ನ ನಡೆಸುತ್ತಿದ್ದಾರೆ. ಈ ವೇಳೆ ದೇಶವನ್ನು ಸುರಕ್ಷಿತವಾಗಿರಲು ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಮುಂದುವರೆಯಬೇಕೆಂದರು.

ದೇಶ ಎಂದರೆ ಮೋದಿ, ಮೋದಿ ಎಂದರೆ ದೇಶ, ಮತ್ತೆ ಬದಲಾವಣೆ ವಿಚಾರವಾಗಿ ಮಾತನಾಡುವಷ್ಟು ದೊಡ್ಡ ವ್ಯಕ್ತಿ ನಾನಲ್ಲ ಎಂದರು.

ಜೆಡಿಎಸ್’ನೊಂದಿಗೆ ಮೈತ್ರಿಯಿಂದಾಗಿ ಹಳೆಯ ಮೈಸೂರು ಭಾಗದಲ್ಲಿ ಪಕ್ಷಕ್ಕೆ ಹೆಚ್ಚಿನ ಬಲ ಬರಲಿದೆ. ಆ ಭಾಗದಲ್ಲಿ ಯಾರೇ ಅಭ್ಯರ್ಥಿ ಆದರೂ ಬಿಜೆಪಿ ಗೆಲುವು ನಿಶ್ಚಿತ ಎಂದರು.

ಪಿಎಂ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಕರ್ನಾಟಕದಿಂದ ಸಲ್ಲಿಸಿರುವ ಅರ್ಜಿ ರಾಷ್ಟ್ರದಲ್ಲಿಯೇ ಅತ್ಯಾಧುನಿಕ ಆಗಿದೆ. ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿ ಶೀಘ್ರದಲ್ಲೇ ಫಲಾನುಭವಿಗಳನ್ನು ಆಯ್ಕೆ ಮಾಡಿ, ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದರು.

ಪಿಎಂ ಸ್ವನಿಧಿ ಯೋಜನೆಯನ್ನು ಹು-ಧಾ ಮಹಾನಗರ ಪಾಲಿಕೆ ಅತ್ಯುತ್ತಮವಾಗಿ ಜಾರಿಗೊಳಿಸಿದ್ದು, ಇದಕ್ಕೆ ಕೇಂದ್ರ ಸರ್ಕಾರದ ಪ್ರಶಸ್ತಿಯನ್ನು ನೀಡಲು ಶಿಫಾರಸ್ಸು ಮಾಡಲಾಗುವುದು ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಸಂಜಯ ಕಪಟಕರ, ಮುಖಂಡರಾದ ತಿಪ್ಪಣ್ಣ ಮಜ್ಜಗಿ, ರಾಮಣ್ಣ ಬಡಿಗೇರ, ರವಿ ನಾಯಕ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ರಾಮಮಂದಿರಕ್ಕೆ 1 ಲಕ್ಷ ರೂಪಾಯಿ ದೇಣಿಗೆ ನೀಡಿದ ನಟಿ ಪ್ರಣಿತಾ..

‘ಇದು ಜೋಶಿ ಘನತೆ, ಗೌರವಕ್ಕೆ ತಕ್ಕುದಲ್ಲ. ಅವರು ತಮ್ಮ ಮಾತು ವಾಪಸ್ ಪಡೆಯಬೇಕು’

ನನಗೆ ಆರ್ಸಿಬಿ ಪರ ಆಡಲು ಇಷ್ಟವಿಲ್ಲದಿದ್ದರೂ ಬ್ಲಾಕ್ಮೇಲ್ ಮಾಡಿ ಆಡಿಸಿದರು: ಪ್ರವೀಣ್ ಕುಮಾರ್

- Advertisement -

Latest Posts

Don't Miss