Narendra Modi : ಮಂಗಳೂರು: ಆಗಸ್ಟ್ 6ರಂದು ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ಪ್ರಧಾನಿಯವರಿಂದ ಶಿಲಾನ್ಯಾಸ

Manglore News : ಭಾನುವಾರ 6ನೇ ಆಗಸ್ಟ್ 2023 ರಂದು ಪೂರ್ವಾಹ್ನ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಯಲ್ಲಿ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಶಿಲಾನ್ಯಾಸ ಮಾಡಲಿರುವ ಗೌರವಾನ್ವಿತ ಪ್ರಧಾನಿ ಶ್ರೀ ನರೇಂದ್ರ ಮೋದಿಯವರನ್ನು ಹಾಗೂ ರೈಲ್ವೆ ಸಚಿವರಾದ ಶ್ರೀ ಅಶ್ವಿನ್ ವೈಷ್ಣವ್ ರವರನ್ನು ದಕ್ಷಿಣ ಕನ್ನಡ ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಇವರು ಅಭಿನಂದಿಸಿದ್ದಾರೆ.

ಅಂತರಾಷ್ಟ್ರೀಯ ಮಟ್ಟದ ಈ ಮಂಗಳೂರು ಜಂಕ್ಷನ್ ರೈಲು ನಿಲ್ದಾಣವು  ಸುಮಾರು ರೂ. 19.32 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ.

2023-24ನೇ ಸಾಲಿನ ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಜಂಕ್ಷನ್ ರೈಲು ನಿಲ್ದಾಣ ಸೇರಿದಂತೆ ಮಂಗಳೂರು ಕೇಂದ್ರ ನಿಲ್ದಾಣ, ಬಂಟ್ವಾಳ ಹಾಗೂ ಸುಬ್ರಹ್ಮಣ್ಯ ರೈಲು ನಿಲ್ದಾಣಗಳನ್ನು ಅಮೃತ್ ಭಾರತ್ ರೈಲು ನಿಲ್ದಾಣ ಅಭಿವೃದ್ಧಿ ಯೋಜನೆಯಡಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದೆಂದು ಘೋಷಿಸಲಾಗಿತ್ತು.

ಈ ಯೋಜನೆಯ ಇತರೆ ರೈಲು ನಿಲ್ದಾಣಗಳ ನಿರ್ಮಾಣ ಕಾರ್ಯ ಶೀಘ್ರದಲ್ಲಿಯೇ ಕೈಗೆತ್ತಿಕೊಳ್ಳಲಾಗುವುದು ಎಂದು ಸಂಸದರು ತಿಳಿಸಿದ್ದಾರೆ.

Lal bagh: ನಾಳೆ ಲಾಲ್ ಬಾಗ್ ನಲ್ಲಿ ಫವರ್ ಶೋ ಉದ್ಗಾಟಿಸಲಿರುವ ಸಿದ್ದರಾಮಯ್ಯ..!

Maluru : ಗ್ರಾಮ ಪಂಚಾಯಿತಿ ನಡೆ ವಿರುದ್ದ ಪ್ರತಿಭಟನೆ ಕೈಗೊಂಡ ಗ್ರಾಮಸ್ಥರು

Eye care ಸಾರ್ವಜನಿಕರೇ ಎಚ್ಚರ ನಿಮ್ಮ ಕಣ್ಣಿನ ಕಾಳಜಿ ಅಗತ್ಯ: ಮದ್ರಾಸ್ ಐ ನಿಂದ ಮುಕ್ತಿಗಾಗಿ ಜಾಗೃತಿ…!

About The Author