ನರೇಂದ್ರ ಮೋದಿಗೆ ಮೇಲುಗೈ!

ಭಾರತದ ಮೇಲೆ ಸುಂಕ ಸಮರ ಸಾರಿದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಪ್ರಧಾನಿ ನರೇಂದ್ರ ಮೋದಿಗೆ ಮಣಿದಿದ್ದಾರೆ. ಭಾರತದ ಮೇಲೆ ಅಬ್ಬರಿಸಿ ಬೊಬ್ಬಿರಿಯುತ್ತಿದ್ದ ಟ್ರಂಪ್, ಈಗ ಸಂಪೂರ್ಣವಾಗಿ ಮೆತ್ತಗಾಗಿದ್ದಾರೆ. ಮತ್ತೆ ಭಾರತದೊಂದಿಗೆ ವ್ಯಾಪಾರ ಒಪ್ಪಂದ ಮಾತುಕತೆ ಪುನಾರಂಭಿಸಲು, ತುದಿಗಾಲಲ್ಲಿ ನಿಂತಿದ್ದಾರೆ. ಡೊನಾಲ್ಡ್‌ ಟ್ರಂಪ್‌ ಹಠಮಾರಿ ಧೋರಣೆಯಿಂದ ಅಮೆರಿಕಕ್ಕೆ ಆಗಿರುವ, ವಾಣಿಜ್ಯ, ರಾಜತಾಂತ್ರಿಕ ಮತ್ತು ವ್ಯೂಹಾತ್ಮಕ ನಷ್ಟವನ್ನು ಕೊನೆಗೂ ಮನಗಂಡಿದ್ದಾರೆ. ಇದೇ ಕಾರಣಕ್ಕೆ ಭಾರತದೊಂದಿಗೆ ಹದಗೆಟ್ಟಿರುವ ಸಂಬಂಧವನ್ನು ಪುನಃ ಸ್ಥಾಪಿಸಲು, ಇನ್ನಿಲ್ಲದಂತೆ ಚಡಿಪಡಿಸುತ್ತಿದ್ದಾರೆ.

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಮಾತುಕತೆ ಪುನರಾರಂಭಿಸಲು ಸಿದ್ಧ ಎಂದು ಟ್ರಂಪ್‌ ಘೋಷಿಸಿದ್ದಾರೆ. ಉಭಯ ದೇಶಗಳ ನಡುವಿನ ವ್ಯಾಪಾರ ಅಡೆತಡೆಗಳನ್ನು ನಿವಾರಿಸಲು, ಮುಂಬರುವ ವಾರಗಳಲ್ಲಿ ನನ್ನ ಆತ್ಮೀಯ ಸ್ನೇಹಿತ ಪ್ರಧಾನಿ ಮೋದಿ ಅವರೊಂದಿಗೆ ಮಾತನಾಡಲು ಎದುರು ನೋಡುತ್ತಿದ್ದೇನೆ. ನಮ್ಮ ಎರಡೂ ಮಹಾನ್ ದೇಶಗಳಿಗೆ ಯಶಸ್ವಿ ತೀರ್ಮಾನಕ್ಕೆ ಬರಲು, ಯಾವುದೇ ತೊಂದರೆ ಇರುವುದಿಲ್ಲ ಎಂಬುದು ನನಗೆ ಖಚಿತವಾಗಿದೆ ಅಂತಾ ಟ್ವೀಟ್‌ ಮಾಡಿದ್ದಾರೆ. ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಯಾದ ಟ್ರೂತ್ ಸೋಷಿಯಲ್‌ನಲ್ಲಿ ಸುದೀರ್ಘವಾದ ಪೋಸ್ಟ್‌ ಮಾಡಿದ್ದಾರೆ.

ಟ್ರಂಪ್‌ ಟ್ವೀಟ್‌ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮೂಲಕವೇ ಪ್ರತಿಕ್ರಿಯೆ ನೀಡಿದ್ದಾರೆ. ಭಾರತ ಮತ್ತು ಅಮೆರಿಕ ನಿಕಟ ಸ್ನೇಹಿತರು ಮತ್ತು ನೈಸರ್ಗಿಕ ಪಾಲುದಾರರು. ನಮ್ಮ ವ್ಯಾಪಾರ ಮಾತುಕತೆಗಳು ಭಾರತ-ಅಮೆರಿಕ ಪಾಲುದಾರಿಕೆಯ ಅಪರಿಮಿತ ಸಾಮರ್ಥ್ಯವನ್ನು, ಅನ್ಲಾಕ್ ಮಾಡಲು ದಾರಿ ಮಾಡಿಕೊಡುತ್ತವೆ ಎಂದು ನನಗೆ ವಿಶ್ವಾಸವಿದೆ. ನಮ್ಮ ತಂಡಗಳು ಈ ಚರ್ಚೆಗಳನ್ನು ಆದಷ್ಟು ಬೇಗ ಮುಗಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿವೆ. ಅಧ್ಯಕ್ಷ ಟ್ರಂಪ್ ಅವರೊಂದಿಗೆ ಮಾತನಾಡಲು ನಾನು ಎದುರು ನೋಡುತ್ತಿದ್ದೇನೆ. ಉಜ್ವಲ ಮತ್ತು ಸಮೃದ್ಧ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ಒಟ್ಟಾಗಿ ಕೆಲಸ ಮಾಡುತ್ತೇವೆಂದು ಪೋಸ್ಟ್‌ ಮಾಡಿದ್ದಾರೆ.

About The Author