Tuesday, November 11, 2025

Latest Posts

ಮಂಡ್ಯ ಜಿಲ್ಲೆಗೆ ರಾಷ್ಟ್ರೀಯ ಪ್ರಶಸ್ತಿ ಗರಿ : ₹25 ಲಕ್ಷ ಬಹುಮಾನ!

- Advertisement -

ಮಂಡ್ಯ ಜಿಲ್ಲೆಗೆ ಮತ್ತೊಂದು ಹೆಮ್ಮೆ ತಂದುಕೊಡುವ ಸಾಧನೆ ದಾಖಲಾಗಿದೆ. ಜಲ ಶಕ್ತಿ ಅಭಿಯಾನದ ಅಂಗವಾಗಿ ಜನ ಸಂಚಯ – ಜನ ಭಾಗಿದಾರಿ ಅಭಿಯಾನದಡಿ ಜಲ ಸಂರಕ್ಷಣೆ ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ್ದಕ್ಕಾಗಿ ಮಂಡ್ಯ ಜಿಲ್ಲೆಗೆ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.

ಜಲಮೂಲಗಳ ಸಂರಕ್ಷಣೆ, ಅಂತರ್ಜಲ ವೃದ್ಧಿ, ಕೃಷಿ ಚಟುವಟಿಕೆಗಳಿಗೆ ಅಗತ್ಯವಾದ ನೀರಿನ ಲಭ್ಯತೆ ಹಾಗೂ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಕೈಗೊಂಡ ವಿವಿಧ ಕ್ರಮಗಳನ್ನು ಯಶಸ್ವಿಯಾಗಿ ಜಾರಿಗೆ ತಂದ ಹಿನ್ನೆಲೆಯಲ್ಲಿ ಈ ಗೌರವ ದೊರೆತಿದೆ. ಪ್ರಶಸ್ತಿಯೊಂದಿಗೆ ₹25 ಲಕ್ಷ ನಗದು ಬಹುಮಾನವನ್ನೂ ನೀಡಲಾಗುತ್ತಿದೆ.

ರಾಜ್ಯಗಳನ್ನು ಐದು ವಲಯಗಳಾಗಿ ವಿಭಜಿಸಲಾಗಿದ್ದು, 3ನೇ ವಲಯದಲ್ಲಿ ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಿವೆ. ಈ ವಲಯದೊಳಗೆ ಕರ್ನಾಟಕದ 7 ಜಿಲ್ಲೆಗಳಿಗೆ ರಾಷ್ಟ್ರೀಯ ಪ್ರಶಸ್ತಿ ಘೋಷಣೆಯಾಗಿದ್ದು, ಮೈಸೂರು ವಿಭಾಗದ ಜಿಲ್ಲೆಗಳ ಪೈಕಿ ಮಂಡ್ಯ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. ಪ್ರಶಸ್ತಿ ಪಡೆದ ಇತರ ಜಿಲ್ಲೆಗಳು ಗದಗ, ಕೋಲಾರ, ಬೀದರ್‌, ತುಮಕೂರು, ವಿಜಯಪುರ ಮತ್ತು ಚಿತ್ರದುರ್ಗ.

ಜನಸಹಭಾಗಿತ್ವದೊಂದಿಗೆ ಜಲ ಸಂರಕ್ಷಣೆ ಮತ್ತು ಮಳೆ ನೀರಿನ ಸಂಗ್ರಹಣೆಯಂತಹ ಚಟುವಟಿಕೆಗಳಲ್ಲಿ ಮಂಡ್ಯ ಜಿಲ್ಲೆ ಮಾದರಿಯಾಗಿದೆ. ಜನರಲ್ಲಿ ನೀರಿನ ಮಹತ್ವ ಹಾಗೂ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವಲ್ಲಿ ಜಿಲ್ಲೆಯು ವಿಶಿಷ್ಟ ಸಾಧನೆ ಪ್ರದರ್ಶಿಸಿದೆ.

ವರದಿ: ರಂಜಿತ ರೇವಣ್ಣ ನಾಟನಹಳ್ಳಿ

- Advertisement -

Latest Posts

Don't Miss