ಸಿನಿಮಾ ಸುದ್ದಿ: ಹಿರಿತೆರೆ ಹಾಗೂ ಕಿರುತೆರೆಯಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ ನಟ ಅನಿರುದ್ಧ್ ಜತಕರ್. “ಬಾಳೇ ಬಂಗಾರ” ಸಾಕ್ಷ್ಯ ಚಿತ್ರದ ನಿರ್ದೇಶನಕ್ಕಾಗಿ ರಾಷ್ಟಪ್ರಶಸ್ತಿ ಮನ್ನಣೆ ದೊರೆತಿದೆ. ಈ ಸಂಭ್ರಮವನ್ನು ಅನಿರುದ್ಧ್ ಅವರ ಅಭಿಮಾನಿಗಳು ಸಂತೋಷದಿಂದ ಸಂಭ್ರಮಿಸಿದ್ದಾರೆ.
ಇತ್ತೀಚೆಗೆ ನಗರದ ಖಾಸಗಿ ಹೋಟೆಲ್ ನಲ್ಲಿ ಅನಿರುದ್ಧ್ ಜತಕರ ಅಭಿಮಾನಿ ಬಳಗದ ನಿಶಾದ್ (ಹೈದರಾಬಾದ್ ), ಗಾಯತ್ರಿ( ತಮಿಳುನಾಡು), ಸೋನಿ(ಸಿಂಗಾಪುರ), ಪುಷ್ಪ(ಬೆಂಗಳೂರು) ಸೇರಿದಂತೆ ಅನೇಕ ಅಭಿಮಾನಿಗಳು ಅನಿರುದ್ದ್ ಅವರಿಗೆ ಆತ್ಮೀಯ ಅಭಿನಂದನಾ ಸಮಾರಂಭವನ್ನು ಆಯೋಜಿಸಿ, ನ್ಯಾಚುರಲ್ ಸ್ಟಾರ್ ಎಂಬ ಬಿರುದು ನೀಡಿದ್ದಾರೆ. ಹಿರಿಯ ನಟ ಬಿ.ಎಂ.ವೆಂಕಟೇಶ್ ಹಾಗೂ ನಿರ್ದೇಶಕ ಎಂ.ಆನಂದರಾಜ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಅನಿರುದ್ಧ್ ಜತಕರ್ ಕುಟುಂಬದ ಸದಸ್ಯರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಆತ್ಮೀಯ ಸನ್ಮಾನ ಸ್ವೀಕರಿಸಿ ಮಾತನಾಡಿದ ಅನಿರುದ್ಧ್, ಅಭಿಮಾನಿಗಳ ಈ ಪ್ರೀತಿಗೆ ಮನತುಂಬಿ ಬಂದಿದೆ. ಅವರಿಗೆ ನನ್ನ ಧನ್ಯವಾದ ಎಂದರು.
ಜನಮೆಚ್ಚುಗೆ ಪಡೆಯುತ್ತಿದೆ “ಜಲಪಾತ” ಟ್ರೇಲರ್; ಚಿತ್ರ ಅಕ್ಟೋಬರ್ 6ರಂದು ತೆರೆಗೆ..!
Yash : ಯಶ್ 19 ಚಿತ್ರದ ಅಪ್ಡೇಟ್ ಗಾಗಿ ಗಣೆಶನ ಮೊರೆ ಹೋದ ಅಭಿಮಾನಿಗಳು..!
“ದ ಜಡ್ಜ್ ಮೆಂಟ್” ಚಿತ್ರದಲ್ಲಿ ಕ್ರೆಜಿಸ್ಟಾರ್ ರವಿಚಂದ್ರನ್: ಅದ್ದೂರಿ ಕ್ಲೈಮ್ಯಾಕ್ಸ್