Tuesday, May 21, 2024

Latest Posts

ಅದ್ಧೂರಿಯಿಂದ ನೆರವೇರಿದ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ರಥೋತ್ಸವ

- Advertisement -

Chithradurga News: ಮಧ್ಯ ಕರ್ನಾಟಕದ ಐತಿಹಾಸಿಕ ನಾಯಕನಹಟ್ಟಿ ಗುರು ತಿಪ್ಪೇರುದ್ರಸ್ವಾಮಿ ದೊಡ್ಡ ರಥೋತ್ಸವ ಕಣ್ತುಂಬಿಕೊಳ್ಳಲು ಭಕ್ತರು ಬೆಳಿಗ್ಗೆಯಿಂದಲೇ ಜಾತ್ರೆಗಾಗಿ ನಾಯಕನಹಟ್ಟಿಯತ್ತ ಮುಖ ಮಾಡಿದ್ದರು. ಬರದ ನಾಡಿನಲ್ಲಿ ಕೆರೆ ಕಟ್ಟಿಸಿ ಜೀವ ಸಂಕುಲ ರಕ್ಷಣೆ ಮಾಡುವ ಮೂಲಕ ಪವಾಡವನ್ನೇ ಸೃಷ್ಟಿಸಿದ ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ ಶ್ರದ್ಧಾ, ಭಕ್ತಿ ಹಾಗೂ ವಿಜೃಂಭಣೆಯಿಂದ ಜರುಗಿತು.

ನಾಡಿನಾದ್ಯಂತ ಭೀಕರ ಬರ ಆವರಿಸಿದ್ದರೂ, ಹಟ್ಟಿ ತಿಪ್ಪೇರುದ್ರಸ್ವಾಮಿಯ ಮೇಲಿನ ಭಕ್ತಿಗೆ ಬರ ಇರಲಿಲ್ಲ. ಮಧ್ಯಾಹ್ನ 3 ಗಂಟೆಗೆ ಚಿತ್ತಾ ನಕ್ಷತ್ರದಲ್ಲಿ ಸ್ವಾಮಿಯ ಬೃಹತ್ ತೇರನ್ನು ಸಾವಿರಾರು ಭಕ್ತರು ಎಳೆದು ಪುನೀತರಾದರು.

ಮಾಡಿದಷ್ಟು ನೀಡು ಭಿಕ್ಷೆ ಎಂಬ ತತ್ವ ಸಂದೇಶ ಸಾರಿ, ಬರದ ನಾಡಿನಲ್ಲಿ ಜಲ ಸಂರಕ್ಷಣೆಯ ಮಹತ್ವ ತಿಳಿಸಿದ ನಾಯಕನಹಟ್ಟಿಯ ಕಾಯಕಯೋಗಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ರಥೋತ್ಸವದ ಅಂಗವಾಗಿ ಹರಕೆ ಮಾಡಿಕೊಂಡಿದ್ದ ಭಕ್ತರು ದೊಡ್ಡ ಅಗ್ನಿ ಕುಂಡದಲ್ಲಿ ಒಣ ಕೊಬ್ಬರಿ ಸುಟ್ಟು ಭಕ್ತಿ ಸಮರ್ಪಿಸಿದರು.

ರಥವು ತೇರು ಬೀದಿಯಿಂದ ಪಾದಗಟ್ಟೆಯವರೆಗೆ ಚಲಿಸುವಾಗ ಭಕ್ತರು ರಥಕ್ಕೆ ಬಾಳೆಹಣ್ಣು, ಕಾಳುಮೆಣಸು, ಧವನ, ಹೂವು, ಚೂರು ಬೆಲ್ಲವನ್ನು ಸಮರ್ಪಿಸಿ ತಮ್ಮ ಇಷ್ಠಾರ್ಥವನ್ನು ಈಡೇರಿಸುವಂತೆ ಭಕ್ತಿ ಪೂರ್ವಕವಾಗಿ ಪ್ರಾರ್ಥಿಸುತ್ತಾ ಶ್ರೀ ತಿಪ್ಪೇರುದ್ರಸ್ವಾಮಿಗೆ ಜಯವಾಗಲಿ, ‘ಕಾಯಕ ಯೋಗಿಗೆ ಜಯವಾಗಲಿ’ ತಿಪ್ಪೇರುದ್ರಸ್ವಾಮಿ ಮಹಾರಾಜ್ ಕಿ ಜೈ ಎನ್ನುವ ಜಯಘೋಷ ಕೂಗುತ್ತಾ ರಥದ ದೊಡ್ಡ ಗಾತ್ರದ ಮಣಿ ಹಗ್ಗ ಎಳೆದು ಧನ್ಯರಾದರು. ನಾಡಿನ ಸುಭೀಕ್ಷೆ ಹಾಗೂ ಉತ್ತಮ ಮಳೆ ಬೆಳೆಗಾಗಿ ಪ್ರಾರ್ಥಿಸಿದರು.

ಜಾತ್ರಾ ಮಹೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ, ಮೊಳಕಾಲ್ಮೂರು ಶಾಸಕ ಎನ್.ವೈ.ಗೋಪಾಲಕೃಷ್ಣ, ದ್ರಾಕ್ಷರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ ಬಾಬು, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಸೇರಿದಂತೆ ಚಿತ್ರದುರ್ಗ, ದಾವಣಗೆರೆ, ತುಮಕೂರು, ಆಂದ್ರಪ್ರದೇಶದ ಲಕ್ಷಾಂತರ ಭಕ್ತರು ನೆರೆದಿದ್ದರು.

ಕಾಂಗ್ರೆಸ್ ನಾಯಕಿಯ ವಿವಾದಾತ್ಮಕ ಹೇಳಿಕೆಗೆ ತಿರುಗೇಟು ಕೊಟ್ಟ ಕಂಗನಾ ರಾಣಾವತ್

ಕಸದ ಟ್ರಕ್ ಡಿಕ್ಕಿ ಲಂಡನ್‌ನಲ್ಲಿ ಭಾರತೀಯ ಪಿಎಚ್‌ಡಿ ವಿದ್ಯಾರ್ಥಿನಿ ಸಾವು

- Advertisement -

Latest Posts

Don't Miss