ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸುಗಳಿಗೆ ನೀಟ್ ಪರೀಕ್ಷೆಯಲ್ಲಿ ಅರ್ಹತೆ ಗಳಿಸಿರುವ ಅಭ್ಯರ್ಥಿಗಳ ಮೂಲ ದಾಖಲಾತಿಗಳ ಪರಿಶೀಲನೆಯು ಕ್ರಮವಾಗಿ ಆ.4ರಿಂದ 9ರವರೆಗೆ ಮತ್ತು ಆ.10 ಹಾಗೂ 11ರಂದು ನಡೆಯಲಿದೆ.
ಈ ಪ್ರಕ್ರಿಯೆಗೆ ಅಭ್ಯರ್ಥಿಗಳು ಸಂಬಂಧಿಸಿದ ದಾಖಲೆಗಳೊಂದಿಗೆ ಬೆಂಗಳೂರಿನ ಕೇಂದ್ರ ಕಚೇರಿಗೆ ನಿಗದಿತ ದಿನಾಂಕ ಮತ್ತು ಸಮಯಗಳಲ್ಲಿ ಕಡ್ಡಾಯವಾಗಿ ಹಾಜರಾಗಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಗುರುವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೇಲ್ಕಂಡ ದಿನಾಂಕಗಳೆಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6ರವರೆಗೆ ಈ ಪರಿಶೀಲನೆ ನಡೆಯಲಿದೆ. ಯಾವ ರ್‍ಯಾಂಕಿಂಗ್‌ನವರು ಯಾವ ದಿನಾಂಕ ಮತ್ತು ಸಮಯದಲ್ಲಿ ಹಾಜರಾಗಬೇಕು ಎನ್ನುವುದನ್ನು ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ನಲ್ಲಿ ಪ್ರಕಟಿಸಲಾಗಿದೆ. ಇದನ್ನು ಅಭ್ಯರ್ಥಿಗಳು ಗಮನಿಸಿ, ಉಳಿದ ಸೂಚನೆಗಳನ್ನೂ ಗಮನಿಸಬೇಕು ಎಂದು ಕೋರಿದ್ದಾರೆ.
Jaipur; ಅಪ್ರಾಪ್ತ ಬಾಲಕಿಯ ಶವವೊಂದು ಇಟ್ಟಿಗೆ ಗೂಡಿನಲ್ಲಿ ಸುಟ್ಟು ಕರಕಲಾಗಿರುವ ಸ್ತಿತಿಯಲ್ಲಿ ಪತ್ತೆಯಾಗಿದೆ.
Gyanavapi: ವೈಜ್ಞಾನಿಕ ಸಮೀಕ್ಷೆಗೆ ಅನುಮತಿ ನೀಡಿದ ಅಲಹಾಬಾದ್ ಹೈ ಕೋರ್ಟ್
DK Shivakumar : “ಇಂಡಿಯಾ”ಗೆ ಕನಿಷ್ಟ 20 ಲೋಕಸಭೆ ಸೀಟುಗಳನ್ನು ಗೆಲ್ಲಿಸಿ ಕೊಡುತ್ತೇವೆ : ಡಿಸಿಎಂ ಡಿ.ಕೆ. ಶಿವಕುಮಾರ್