Hubli News: ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ ರಾಜಕೀಯಕ್ಕೆ ತಿರುಗಿದೆ. ಆರೋಪಿಯ ರುಂಡ ಕತ್ತರಿಸಿ ಹುಬ್ಬಳ್ಳಿ ಬಾಗಿಲಿಗೆ ಹಾಕುತ್ತೇವೆ ಎಂದು ಅಂಜುಮನ್ ಸಂಸ್ಥೆ ಹೇಳಿದೆ. ಇದೀಗ ಆರೋಪಿ ಫಯಾಜ್ ರುಂಡ ಚೆಂಡಾಡಿದವರಿಗೆ 10 ಲಕ್ಷ ರೂ. ಬಹುಮಾನ ನೀಡುತ್ತೇವೆ ಎಂದು ಜಯ ಕರ್ನಾಟಕ ಸಂಘಟನೆ ಮುಖಂಡ ಇಜಾರಿ ಘೋಷಣೆ ಮಾಡಿದ್ದಾರೆ.
ಹುಬ್ಬಳ್ಳಿ: ನಗರದಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಫಯಾಜ್ ರುಂಡ ಚೆಂಡಾಡಿದವರಿಗೆ 10 ಲಕ್ಷ ರೂ. ಬಹುಮಾನ ನೀಡುತ್ತೇವೆ ಎಂದು ಜಯ ಕರ್ನಾಟಕ ಸಂಘಟನೆ ಮುಖಂಡ ಇಜಾರಿ ಘೋಷಣೆ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಫಯಾಜ್‌ಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿ ನಾಳೆ ಹುಬ್ಬಳ್ಳಿ ಬಂದ್ ಮಾಡುತ್ತೇವೆ ಎಂದು ಹೇಳಿದ್ದಾರೆ.
ನೇಹಾ ಹಿರೇಮಠ ಕೊಲೆ ಖಂಡಿಸಿ ನಾಳೆ ಹುಬ್ಬಳ್ಳಿ ಬಂದ್ ಮಾಡುತ್ತೇವೆ. ಯಾರ ಮನೆಯಲ್ಲಿ ಹೆಣ್ಮಕ್ಕಳು ಇದ್ದಾರೋ ಅವರೆಲ್ಲಾ ಬಂದ್ ಬೆಂಬಲಿಸಿ. ನಾಳೆ ಬಂದ್ ಅಂಗವಾಗಿ ಬಿವಿಬಿ ಕಾಲೇಜಿನಿಂದ ಮೆರವಣಿಗೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.
ನಟಿ ಹರ್ಷಿಕಾ ಮತ್ತು ಭುವನ್ ಮೇಲೆ ಹಲ್ಲೆ ಯತ್ನ: ನಾವೇನು ಪಾಕಿಸ್ತಾನದಲ್ಲಿದ್ದೇವಾ..? ಎಂದು ಬೇಸರ..
ಇಂಥ ಕೆಲಸಕ್ಕೆ ಎನ್‌ಕೌಂಟರ್ ಕಾನೂನು ಬರಲೇಬೇಕು: ಸಚಿವ ಸಂತೋಷ್ ಲಾಡ್ ಆಗ್ರಹ