Dharwad News: ಧಾರವಾಡ : ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ ಸಂಬಂಧ ಆರೋಪಿ ತಾಯಿ ಮುಮ್ತಾಜ್ ಅವರು ರಾಜ್ಯದ ಜನರಿಗೆ ಕ್ಷಮೆಯಾಚಿಸಿದ್ದಾರೆ.
ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ನನ್ನ ಮಗ ಮೊದಲು ಓದಿನಲ್ಲಿ ಬಹಳ ಜಾಣನಿದ್ದ. ಅವಳೇ (ನೇಹಾ) ಇವನಿಗೆ ಪ್ರಪೋಸ್ ಮಾಡಿದ್ದು. ನನ್ನ ಬಳಿ ಅವನು ಹೇಳಿದಾಗ ನಾನು ಲವ್ ಬೇಡ ಅಂತ ಹೇಳಿದ್ದೆ ಎಂದು ತಿಳಿಸಿದ್ದಾರೆ.
ಈ ಘಟನೆಯಿಂದ ಅವನಿಗೆ ತಕ್ಕ ಶಿಕ್ಷೆ ಆಗಬೇಕು. ನನ್ನ ಮಗ ಕೆಎಎಸ್ ಆಫೀಸರ್ ಆಗಬೇಕು, ನಟ ಆಗಬೇಕು ಅಂತ ಕನಸು ಕಂಡಿದ್ದೆ. ನನ್ನ ಮಗ ಫಯಾಜ್ಗೆ ನೇಹಾಳೇ ಪ್ರಪೋಸ್ ಮಾಡಿದ್ದು. ಆದರೆ, ಈ ರೀತಿ ಆಗಿದ್ದು ಬಹಳ ಸಂಕಟ ಆಗುತ್ತೆ ಎಂದು ಹೇಳಿದ್ದಾರೆ.
ಅವರಿಬ್ಬರೂ ಮದುವೆ ಆಗಬೇಕು ಅಂತ ಇದ್ದರು
ಮೃತ ನೇಹಾ ಹಿರೇಮಠ ಸಹ ತುಂಬಾ ಒಳ್ಳೆಯ ಹುಡುಗಿ. ಅವರಿಬ್ಬರೂ ಮದುವೆ ಆಗಬೇಕು ಅಂತ ಇದ್ದರು. ತಪ್ಪು ಮಾಡಿದವನಿಗೆ ಶಿಕ್ಷೆ ಆಗಬೇಕು. ನೂರಾರು ಮಕ್ಕಳಿಗೆ ನಾನು ಶಿಕ್ಷಣ ಕೊಡ್ತೀನಿ. ಆದ್ರೆ, ಇವನಿಗೆ ತಕ್ಕ ಶಿಕ್ಷೆ ಆಗಬೇಕು. ತಪ್ಪು ಮಾಡಿದವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಆರೋಪಿ ಫಯಾಜ್ ತಾಯಿ ಮುಮ್ತಾಜ್ ತಿಳಿಸಿದ್ದಾರೆ.
ನಟಿ ಹರ್ಷಿಕಾ ಮತ್ತು ಭುವನ್ ಮೇಲೆ ಹಲ್ಲೆ ಯತ್ನ: ನಾವೇನು ಪಾಕಿಸ್ತಾನದಲ್ಲಿದ್ದೇವಾ..? ಎಂದು ಬೇಸರ..
ಇಂಥ ಕೆಲಸಕ್ಕೆ ಎನ್‌ಕೌಂಟರ್ ಕಾನೂನು ಬರಲೇಬೇಕು: ಸಚಿವ ಸಂತೋಷ್ ಲಾಡ್ ಆಗ್ರಹ