ನೇಹಾ ಕೊ*ಲೆ ಪ್ರಕರಣ: ಆಕ್ರೋಶ ಹೊರಹಾಕಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ..

Hubli Crime News: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೋರೇಟರ್ ಮಗಳು ನೇಹಾ ಕೊಲೆ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಆಕ್ರೋಶ ಹೊರಹಾಕಿದ್ದಾರೆ.

ಪ್ರೀತಿ ನಿರಾಕರಿಸಿದ್ದಕ್ಕಾಗಿ ಮುಸ್ಲಿಂ ಯುವಕನೊಬ್ಬ ನಮ್ಮ ಪಾಲಿಕೆ ಸದಸ್ಯರಾದ ನಿರಂಜನ್ ಹಿರೇಮಠ ಅವರ ಪುತ್ರಿ ನೇಹ ಹಿರೇಮಠ ಅವರನ್ನು 9 ಬಾರಿ ಚಾಕು ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಜ್ಯದ ಕಾಂಗ್ರೆಸ್ ಆಡಳಿತದಲ್ಲಿ ತುಷ್ಟಿಕರಣ ಹಾಗೂ ಸಮಾಜಘಾತಕ ಶಕ್ತಿಗಳ ಪುಷ್ಟಿಕರಣದಿಂದಾಗಿ ಇಂತಹ ದುರ್ಘಟನೆಗಳು ಸಂಭವಿಸುತ್ತಿವೆ. ಕಾಂಗ್ರೆಸ್ ಸರ್ಕಾರವು ಈ ಕೂಡಲೇ ಕ್ರಮ ಕೈಗೊಳ್ಳದಿದ್ದಲ್ಲಿ ಸಮಾಜವು ಪ್ರತಿಭಟನೆಗೆ ಮುಂದಾಗುವುದು ಎಂದು ಜೋಶಿ ಎಚ್ಚರಿಕೆ ನೀಡಿದ್ದಾರೆ..

ಆರೋಪಿ ಪ್ರಕಾರ ಬಿಸಿಎ ಓದುವಾಗಿನಿಂದ ನೇಹಾ (Neha Hiremath) ಮತ್ತು ಫಯಾಜ್‌ ಲವ್‌ ಮಾಡುತ್ತಿದ್ದರು. ಇತ್ತೀಚೆಗೆ ಯುವತಿ ಆತನನ್ನು ಅವೈಡ್‌ ಮಾಡುತ್ತಿದ್ದಳಂತೆ. ಇದೇ ಕಾರಣಕ್ಕೆ ಕೊಲೆ ಮಾಡಿರುವುದಾಗಿ ಫಯಾಜ್ ತಿಳಿಸಿದ್ದಾನೆ.  ಸಂಜೆ 4.45ರ ಸುಮಾರಿಗೆ ನೇಹಾ ಕೊಲೆಯಾಗಿದೆ. ಆಕೆ ಕಾಲೇಜಿನಿಂದ ಹೊರಬರುತ್ತಿದ್ದಂತೆಯೇ ಆರೋಪಿ ಫಯಾಜ್‌ ಏಕಾಏಕಿ ಆಕೆಯ ಮೇಲೆ ನಾಲ್ಕೈದು ಬಾರಿ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ್ದಾನೆ. ಕೂಡಲೇ ಕಾಲೇಜಿನ ಆಡಳಿತ ಮಂಡಳಿ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅದಾಗಲೇ ಆಕೆ ಸಾವನ್ನಪ್ಪಿದ್ದಾಳೆ. ಘಟನೆ ನಡೆದ 1 ಗಂಟೆಯೊಳಗೆ ಆರೋಪಿ ಅರೆಸ್ಟ್ ಆಗಿದ್ದಾನೆ.

ಕಾಂಗ್ರೆಸ್ ಕಾನೂನು ಸುವ್ಯವಸ್ಥೆಯ ಹೊಣೆಗಾರಿಕೆಯನ್ನು ಈ ಮಾತಂಧರ ಕೈಗಿಟ್ಟು ನಿದ್ದೆ ಹೋಗಿದೆ: ಪ್ರೀತಂಗೌಡ

ಸರ್ಕಾರದ ಕುಮ್ಮಕ್ಕು ಇಂಥ ದುಷ್ಟಶಕ್ತಿಗಳಿಗೆ ಇರುವುದು ಸ್ಪಷ್ಟವಾಗಿದೆ: ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಯಾವುದೇ ಸಮಯದಲ್ಲೂ ಕರ್ನಾಟಕ ಸದಾ ಕೇರಳದ ಜೊತೆ ಇರಲಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

About The Author