Saturday, July 27, 2024

Latest Posts

ನೇಹಾ ಕೊಲೆ ಪ್ರಕರಣ – ಒಂದೇ ಗಂಟೆಯಲ್ಲಿ ಫಯಾಜ್‌ನನ್ನು ಬಂಧಿಸಿದ ವಿದ್ಯಾನಗರ ಪೊಲೀಸರು

- Advertisement -

Hubli News: ಹುಬ್ಬಳ್ಳಿ: ನೇಹಾ ಹಿರೇಮಠ ಹತ್ಯೆ ಆರೋಪಿ ಫಯಾಜ್‌ನನ್ನು ಒಂದೇ ಗಂಟೆಯಲ್ಲಿ ಬಂಧಿಸಿದ ಪೊಲೀಸ್ ತಂಡಕ್ಕೆ ‘ಕಾಪ್ ಆಫ್ ದಿ ಮಂತ್ ಅವಾರ್ಡ್’ ನೀಡಿ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ ಅವರು ಗೌರವಿಸಿದ್ದಾರೆ.

ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ ನೇಹಾ ಹಿರೇಮಠ ಕೊಲೆ ಪ್ರಕರಣ ನಡೆದು ಒಂದೇ ಗಂಟೆಯಲ್ಲಿ ಹಂತಕನನ್ನ ಪೊಲೀಸರು ಸೆರೆಹಿಡಿದಿದ್ದಾರೆ. ಹಂತಕ ಫಯಾಜ್‌ನನ್ನ ಬಂಧಿಸಿದ ಪೊಲೀಸ್ ಸಿಬ್ಬಂದಿಗೆ, ಪ್ರಶಂಸನಾ ಪತ್ರ ಹಾಗೂ 25 ಸಾವಿರ ರೂಪಾಯಿ ಬಹುಮಾನವನ್ನು ಪೊಲೀಸ್ ಆಯುಕ್ತ ರೇಣುಕಾ ಸುಕುಮಾರ ನೀಡಿದ್ದಾರೆ.

ಹಂತಕ ಫಯಾಜ್ ನೇಹಾಳಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದ. ಈ ಪ್ರಕರಣದ ಗಂಭೀರತೆಯನ್ನರಿತು ಆರೋಪಿಯನ್ನು ಪತ್ತೆ ಹಚ್ಚಲು ರೇಣುಕಾ ಸುಕುಮಾರ ಅವರು ವಿಶೇಷ ತಂಡವನ್ನು ರಚಿಸಿದ್ದರು. ತಕ್ಷಣ ಕಾರ್ಯ ಪ್ರವೃತ್ತವಾದ ತಂಡ ಹಂತಕನ ಸುಳಿವನ್ನು ಬೆನ್ನತ್ತಿ ಕೃತ್ಯ ನಡೆದ ಕೇವಲ ಒಂದು ಗಂಟೆಯೊಳಗೆ ಆರೋಪಿಯನ್ನು ಹಿಡಿದು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ತಂಡದ ಕಾರ್ಯವೈಖರಿಯನ್ನು ಪೊಲೀಸ್ ಆಯುಕ್ತ ರೇಣುಕಾ ಸುಕುಮಾರ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಈ ತನಿಖಾ ತಂಡದಲ್ಲಿ ಕ್ರೈಂ ಸಿಬ್ಬಂದಿಗಳಾದ ರಮೇಶ್ ಹಲ್ಲೆ ಸೈಯದ್‌ ಅಲಿ ತಹಶೀಲ್ದಾರ್, ಶಿವಾನಂದ್ ತಿರಕಣ್ಣವರ್, ಪರಶುರಾಮ್ ಹಿರಗಣ್ಣವರ್, ಮಂಜುನಾಥ್ ಯಕ್ಕಡಿ, ಮಲ್ಲಿಕಾರ್ಜುನ್ ಧನಿಗೊಂಡ್, ಶರಣು ಮೂಲಿಮನಿ, ಮುತ್ತಪ್ಪ ಲಮಾಣಿ, ವೆಂಕಟೇಶ್ ಸೂರ್ವೆ, ಅಮರೇಗೌಡ ವಿಶೇಷ ತಂಡದಲ್ಲಿದ್ದರು.

ರಾಜ್ಯದಲ್ಲಿ ಉತ್ತರ ಪ್ರದೇಶದ ಮಾದರಿಯಲ್ಲಿ ಕಾನೂನು ಜಾರಿಗೆ ತರಬೇಕು: ಚಕ್ರವರ್ತಿ ಸೂಲಿಬೆಲೆ

ಲವ್ ಜಿಹಾದ್‌ಗೆ ದೇಶದಲ್ಲಿ ತರಬೇತಿ ಕೇಂದ್ರವಿರಬೇಕು ಅನಿಸುತ್ತಿದೆ‌: ಜಗದೀಶ್ ಶೆಟ್ಟರ್

ಕಾಂಗ್ರೆಸ್ 28 ಸ್ಥಾನ ಸೋತರೆ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಖುಷಿ: ಬಿ.ವೈ.ವಿಜಯೇಂದ್ರ

- Advertisement -

Latest Posts

Don't Miss