Thursday, December 26, 2024

Latest Posts

ರಾಜ್ಯದಲ್ಲಿ AY-4.2 ಎಂಬ ಹೊಸ ತಳಿ ಪತ್ತೆ..!

- Advertisement -

www.karnatakatv.net: ರಾಜ್ಯದಲ್ಲಿ ಎವೈ4.2 ಎಂಬ ಹೊಸ ತಳಿಯ 2 ಕೊವಿಡ್ ಪ್ರಕರಣಗಳು ಪತ್ತೆಯಾಗಿದೆ. ಈ ಪ್ರಕರಣಗಳ ಪತ್ತೆಗೆ ಭಯಪಡುವ ಅಗತ್ಯವಿಲ್ಲ ಎಂದು ಕರ್ನಾಟಕ ಆರೋಗ್ಯ ಅಧಿಕಾರಿಗಳು ಹೇಳಿದ್ದಾರೆ.

ಹೌದು..ಕರ್ನಾಟಕದಲ್ಲಿ ಎವೈ4.2 ಎಂಬ ಹೊಸ ತಳಿ 2 ಕೊವಿಡ್ ಪ್ರರಕಣಗಳು ಪತ್ತೆಯಾಗಿದ್ದು, ಮತ್ತೆ ಲಾಕ್ ಡೌನ್ ಘೋಷಣೆಯಾಗುವ ಸಾಧ್ಯತೆಯಿದೆ ಎನ್ನುತ್ತಿರುವಾಗ ಕರ್ನಾಟಕ ಆರೋಗ್ಯ ಅಧಿಕಾರಿಗಳು ಇದಕ್ಕೆ ಯಾವುದೇ ಭಯ ಪಡುವ ಹಾಗಿಲ್ಲ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಯಾವ ಯೋಚನೆಯೂ ಸರ್ಕಾರದ ಮುಂದಿಲ್ಲ ಎಂದು ಹೇಳಿದೆ.

ಹೊಸ ತಳಿ ಬಗ್ಗೆ ಎಚ್ಚರವಹಿಸುವಂತೆ ಕೇಂದ್ರ ಸರ್ಕಾರ ಈಗಾಗಲೇ ನಿರ್ದೇಶನ ನೀಡಿದೆ. ವಿದೇಶಗಳಲ್ಲಿ ಕಂಡು ಬರುತ್ತಿರುವ ಕೊರೊನಾ ವೈರಾಣುವಿನ ಡೆಲ್ಟಾ ಎವೈ 4.2 ರೂಪಾಂತರಿ ಕರ್ನಾಟಕದಲ್ಲಿ ಪತ್ತೆಯಾಗಿತ್ತು. ಈ ಮೊದಲು, ಬೆಂಗಳೂರಿನ ಮೂವರು ಮತ್ತು ರಾಜ್ಯದ ಇತರೆಡೆಯ ನಾಲ್ವರಲ್ಲಿ ಈ ರೂಪಾಂತರಿ ಪತ್ತೆಯಾಗಿರುವುದನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಡಿ. ರಣದೀಪ್ ದೃಢಪಡಿಸಿದ್ದರು. ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ನಿಯಂತ್ರಣದಲ್ಲಿವೆ. ವಿದೇಶಗಳಿಂದ ಬರುವ ಪ್ರವಾಸಿಗರು ಕನಿಷ್ಠ 72 ಗಂಟೆ ಮೊದಲು ಮಾಡಿಸಿಕೊಂಡಿರುವ ಆರ್ ಟಿ -ಪಿಸಿಆರ್ ಪರೀಕ್ಷೆಯ ವರದಿ ಹಾಜರುಪಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ವರದಿಗಳನ್ನು ಏರ್ ಸುವಿಧಾ ಪೋರ್ಟಲ್ ನಲ್ಲಿ ಈ ವರದಿಗಳನ್ನು ಅಪ್ ಲೋಡ್ ಮಾಡಬೇಕು.

ಇದರ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಟಿಎಸಿ ಅಧ್ಯಕ್ಷ ಡಾ. ಎಂ ಕೆ ಸುದರ್ಶನ್, ಎವೈ 4.2 ಸೋಂಕು ಪತ್ತೆಯಾಗಿರುವುದರಿಂದ ಕರ್ನಾಟಕದಲ್ಲಿ ಮತ್ತೊಂದು ಲಾಕ್‌ಡೌನ್‌ಗೆ ಟಿಎಸಿ ಶಿಫಾರಸು ಮಾಡಿದೆ ಎನ್ನಲಾದ ವರದಿಗಳು ಆಧಾರರಹಿತವಾಗಿವೆ. ಕಳೆದ ಬಾರಿ ರಾಜ್ಯದಲ್ಲಿ ಪ್ರತಿದಿನ ಸುಮಾರು 50,000 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗುತ್ತಿರುವಾಗ ಲಾಕ್‌ಡೌನ್ ಅನ್ನು ಶಿಫಾರಸು ಮಾಡಲಾಗಿತ್ತು. ಆದರೆ, ಕಳೆದ ಎರಡು ದಿನಗಳಿಂದ ಈ ಸಂಖ್ಯೆ 350ಕ್ಕಿಂತ ಕಡಿಮೆ ಇದೆ.

- Advertisement -

Latest Posts

Don't Miss