www.karnatakatv.net : ಬೆಂಗಳೂರು : ಕರ್ನಾಟಕದ ನೂತನ ಸಿಎಂ ಆಗಿ ಬೊಮ್ಮಾಯಿ ಅವರು ಕೆಲವೇ ಕ್ಷಣಗಳಲ್ಲಿ ರಾಜ್ಯದ 23ನೇ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಬಳಿಕ 12 ಗಂಟೆಗೆ ಮಹತ್ವದ ಸುದ್ದಿಗೋಷ್ಠಿ ನಡೆಸಿ ಮಾತನಾಡಲಿರುವಂತ ಅವರು, ಸಚಿವ ಸಂಪುಟ ರಚನೆ ಕುರಿತಂತೆ ಮಾಹಿತಿ ನೀಡಲಿದ್ದಾರೆ ಎನ್ನಲಾಗುತ್ತಿದೆ. ಇದಲ್ಲದೇ ಇಂದು ಸಂಜೆ ದೆಹಲಿಗೆ ತೆರಳಲಿರುವಂತ ಅವರು, ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ.




