Thursday, December 26, 2024

Latest Posts

Bengaluru Airport : ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ?: ತಮಿಳುನಾಡು ಮಹತ್ವದ ನಿರ್ಧಾರ

- Advertisement -

ರಾಜ್ಯ ರಾಜಧಾನಿ ಬೆಂಗಳೂರಿಗೆ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಗತ್ಯವಿದೆ. ಬೆಂಗಳೂರಲ್ಲಿ ಮತ್ತೊಂದು ಏರ್‌ಪೋರ್ಟ್ ನಿರ್ಮಾಣಕ್ಕೆ ಸ್ಥಳ ಹುಡುಕಾಟ, ಮೂಲಸೌಕರ್ಯ ಅಭಿವೃದ್ದಿಗೆ ಸರ್ಕಾರ ಪ್ಲ್ಯಾನ್ ಮಾಡುತ್ತಿದೆ. ವೇಗವಾಗಿ ಬೆಳೆಯುತ್ತಿರುವ ಮತ್ತು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿರುವ ಬೆಂಗಳೂರು ಮಹಾನಗರದ ಮುಂಬರುವ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಮತ್ತೊಂದು ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ‌.ಬಿ. ಪಾಟೀಲ್ ಅವರು ಕೆಲದಿನದ ಹಿಂದೆ ಅಧಿಕಾರಿಗಳೊಂದಿಗೆ ಪ್ರಾಥಮಿಕ ಹಂತದ ಚರ್ಚೆ ನಡೆಸಿದ್ದರು.
ಬೆಂಗಳೂರಿಗೆ ಮತ್ತೊಂದು ಏರ್‌ಪೋರ್ಟ್ ನಿರ್ಮಾಣದ ಸುದ್ದಿ ಹೊರ ಬಂದ ಬಳಿಕ ತಮಿಳುನಾಡು ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಸಿಎಂ ಎಂ.ಕೆ ಸ್ಟಾಲಿನ್ ಅವರು ಬೆಂಗಳೂರಿನ ಗಡಿಭಾಗವಾದ ತಮಿಳುನಾಡಿನ ಹೊಸೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಯ ಬಗ್ಗೆ ಘೋಷಣೆ ಮಾಡಿದ್ದಾರೆ.

 

ಬೆಂಗಳೂರು ಗಡಿಭಾಗದಲ್ಲಿ ವರ್ಷಕ್ಕೆ 3 ಕೋಟಿ ಪ್ರಯಾಣಿಕರನ್ನು ನಿಭಾಯಿಸುವ ಸಾಮರ್ಥ್ಯದ ಏರ್‌ಪೋರ್ಟ್ ನಿರ್ಮಾಣ ಮಾಡಲಾಗುತ್ತದೆ. ತಮಿಳುನಾಡು ವಿಧಾನಸಭೆಯಲ್ಲಿ ಇಂದು 2 ಸಾವಿರ ಎಕರೆ ಜಾಗದಲ್ಲಿ ಏರ್‌ಪೋರ್ಟ್ ನಿರ್ಮಾಣ ಮಾಡುವ ಘೋಷಣೆಯನ್ನು ಸಿಎಂ ಎಂ.ಕೆ ಸ್ಟಾಲಿನ್ ಅವರು ಮಾಡಿದ್ದಾರೆ. ಇತ್ತೀಚೆಗೆ ಹೊಸೂರಿಗೆ ಹೆಚ್ಚಿನ ಬಂಡವಾಳ ಹೂಡಿಕೆ ಹರಿದು ಬರುತ್ತಿದೆ. ಹೊಸೂರಿನಲ್ಲಿ ಆಧುನಿಕ ಮೂಲಸೌಕರ್ಯಗಳ ಅಭಿವೃದ್ದಿಗೆ ವಿವಿಧ ಯೋಜನೆಯನ್ನು ಜಾರಿ ಮಾಡಿದ್ದೇವೆ. ಹೊಸೂರು ಜಿಲ್ಲೆಯನ್ನು ಪ್ರಮುಖ ಆರ್ಥಿಕ ಸೆಂಟರ್ ಆಗಿ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ, ಆರ್ಥಿಕ ಅಭಿವೃದ್ದಿಯ ಉತ್ತೇಜನಕ್ಕೆ ಹೊಸೂರಿನಲ್ಲಿ ಏರ್‌ಪೋರ್ಟ್ ನಿರ್ಮಾಣ ಮಾಡಲಾಗುತ್ತಿದೆ. ಇದರಿಂದ ಹೊಸೂರು, ಕೃಷ್ಣಗಿರಿ, ಧರ್ಮಪುರಿ ಜಿಲ್ಲೆಗಳ ಅಭಿವೃದ್ಧಿಗೆ ಏರ್ ಪೋರ್ಟ್ ಸಹಕಾರಿಯಾಗಲಿದೆ ಎಂದು ಸ್ಟಾಲಿನ್ ತಿಳಿಸಿದ್ದಾರೆ.

 

ಆದರೆ ಇನ್ನೊಂದೆಡೆ ಏರ್‌ಪೋರ್ಟ್‌ಗೆ ಅನುಮತಿ ಸಿಗುತ್ತಾ ಅನ್ನೋ ಅನುಮಾನ ಕೂಡ ಶುರುವಾಗಿದೆ. ಯಾಕೆಂದರೆ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸರ್ಕಾರ ಹಾಗೂ ಬೆಂಗಳೂರು ಇಂಟರ್ ನ್ಯಾಷನಲ್ ಏರ್ ಪೋರ್ಟ್ ಲಿಮಿಟೆಡ್ ನಡುವೆ ಆದ ಒಂದು ಷರತ್ತಿನ ಪ್ರಕಾರ, ಮುಂದಿನ 25 ವರ್ಷಗಳ ಕಾಲ ಬೆಂಗಳೂರು ಏರ್‌ಪೋರ್ಟ್‌ನಿಂದ 150 ಕಿ.ಮೀ ವ್ಯಾಪ್ತಿಯಲ್ಲಿ ಬೇರೆ ಏರ್‌ಪೋರ್ಟ್‌ಗೆ ಅನುಮತಿ ನೀಡಬಾರದು. ಈ ಒಪ್ಪಂದವು 2033ಕ್ಕೆ ಪೂರ್ಣವಾಗುತ್ತಿದೆ. ಈ ಅವಧಿ ಪೂರ್ಣಗೊಳ್ಳುವ ವರೆಗೆ ಬೆಂಗಳೂರಿನಲ್ಲಿ ಇನ್ನೊಂದು ವಿಮಾನ ನಿಲ್ದಾಣ ನಿರ್ಮಾಣ ಆಗುವುದಿಲ್ಲ ಎಂದು ಹೇಳಲಾಗ್ತಿದೆ.

- Advertisement -

Latest Posts

Don't Miss