ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಹೊಸಬರನ್ನು ನೇಮಕ ಮಾಡಲು ಬಿಜೆಪಿ ಮುಂದಾಗಿದೆ. ರಾಷ್ಟ್ರಾಧ್ಯಕ್ಷರ ಆಯ್ಕೆ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯಗಳ ಅಧ್ಯಕ್ಷರ ನೇಮಕ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಕರ್ನಾಟಕ ಬಿಜೆಪಿ ಘಟಕದ ರಾಜ್ಯಾಧ್ಯಕ್ಷರ ನೇಮಕವೂ ಆಗಲಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ನೇಮಕ ಪ್ರಕ್ರಿಯೆ ತಾರ್ಕಿಕ ಹಂತ ತಲುಪಿದೆ. ಹಿರಿಯ ನಾಯಕರ ವಿರೋಧದ ನಡುವೆಯೇ ಬೇರೊಬ್ಬರನ್ನು ನೇಮಕ ಆಗಲಿದೆಯಾ ಎಂಬ ಚರ್ಚೆಯೂ ಇದೆ. ಹಾಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನೇ ಮುಂದುವರೆಸುವ ಸಾಧ್ಯತೆಯೇ ಹೆಚ್ಚು ಎನ್ನಲಾಗುತ್ತಿದೆ.
ಹಲವು ತಿಂಗಳುಗಳ ಬಳಿಕ ಬಿ.ಎಸ್. ಯಡಿಯೂರಪ್ಪ ಮತ್ತೆ ಪಕ್ಷ ಸಂಘಟನೆಯಲ್ಲಿ ಸಕ್ರಿಯರಾಗಿದ್ದಾರೆ. ಹೀಗಾಗಿ ಪುತ್ರ ವಿಜಯೇಂದ್ರರನ್ನೇ ಮುಂದುವರೆಸುವ ಸಂಭವ ಇದೆ ಎನ್ನಲಾಗ್ತಿದೆ. ಒಂದು ವೇಳೆ ಯಡಿಯೂರಪ್ಪರನ್ನು ಕಡೆಗಣಿಸಿದ್ರೆ, ಭಿನ್ನ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಹೀಗಾದ್ರೆ ಪಕ್ಷ ಸಂಘಟನೆಗೆ ಧಕ್ಕೆ ಆಗಲಿದೆ ಅನ್ನೋ ಆತಂಕವೂ ಇದೆ.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ಬಳಿಕವೂ ಪಕ್ಷದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಇದೇ ಕಾರಣಕ್ಕಾಗಿ ವಿಜಯೇಂದ್ರ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದ ಇತರೆ ನಾಯಕರನ್ನು, ಸಮಾಧಾನಪಡಿಸುವ ಕೆಲಸಗಳು ಆಗ್ತಿವೆ. ಬಿಎಸ್ವೈ ಅವ್ರನ್ನು ನಿರ್ಲಕ್ಷ್ಯ ಮಾಡುವಂತಿಲ್ಲ. ಇತರೆ ನಾಯಕರನ್ನೂ ಸೈಲೆಂಟ್ ಮಾಡಲು ಆಗ್ತಿಲ್ಲ. ಯಡಿಯೂರಪ್ಪ, ವಿಜಯೇಂದ್ರ ವಿರೋಧ ಬಣ, ಹೈಕಮಾಂಡ್ಗೆ ತಲೆ ನೋವಾಗಿ ಪರಿಣಮಿಸಿದೆ.