Saturday, July 27, 2024

Latest Posts

ಬಜೆಟ್‌ ಬೆಲೆಯಲ್ಲಿ ಆಕರ್ಷಕ 5G ಸ್ಮಾರ್ಟ್‌ಫೋನ್‌..!

- Advertisement -

Technology News:

ಪ್ರತಿಷ್ಠಿತ ಮೊಬೈಲ್ ತಯಾರಿಕಾ ಸಂಸ್ಥೆಗಳಲ್ಲಿ ಒಂದಾದ ಮೊಟೊರೊಲಾ ಕಂಪೆನಿಯ ಇತ್ತೀಚಿಗಷ್ಟೆ ಒಂದು  ಹೊಸ ವಿನ್ಯಾಸದ ಮೊಬೈಲನ್ನು  ಬಿಡುಗಡೆ ಮಾಡಿದೆ. ಸದ್ಯಕ್ಕೆ ತಾಂತ್ರಿಕ  ಲೋಕದಲ್ಲಿ  ಮೋಟೋ  ಬಾರೀ ಸುದ್ದಿಯಲ್ಲಿದೆ. ಈ ಹೊಸ ವಿನ್ಯಾಸ ಬಜೆಟ್ ಬೆಲೆಯಿಂದನೆ ಗ್ರಾಹಕರ ಗಮನ ಸೆಳೆದಿದೆ. ಇದರ ವಿಶೇಷತೆಗೆ  ನೀವೂ ಮನಸೋಲೋದ್ರಲ್ಲಿ  ಸಂದೇಹವಿಲ್ಲ .

ಪ್ರತಿಷ್ಠಿತ ಮೊಬೈಲ್ ತಯಾರಿಕಾ ಸಂಸ್ಥೆಗಳಲ್ಲಿ ಒಂದಾದ ಮೊಟೊರೊಲಾ ಕಂಪೆನಿಯ ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ಮೊಟೊ G62 5G ಸ್ಮಾರ್ಟ್‌ಫೋನ್‌ ಗ್ರಾಹಕರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಬಜೆಟ್‌ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದ್ದು, ಆಕರ್ಷಕ ಫೀಚರ್ಸ್‌ಗಳನ್ನು ಒಳಗೊಂಡದೆ. ಮುಖ್ಯವಾಗಿ 5G, ಸ್ನ್ಯಾಪ್‌ಡ್ರಾಗನ್ 695 SoC ಪ್ರೊಸೆಸರ್‌ ಹಾಗೂ ತ್ರಿವಳಿ ಕ್ಯಾಮೆರಾ ಆಯ್ಕೆಗಳು ಪ್ಲಸ್‌ ಪಾಯಿಂಟ್ ಆಗಿದೆ.

ನೂತನ ಮೊಟೊ G62 5G ಸ್ಮಾರ್ಟ್‌ಫೋನ್‌ ಡಿಸೈನ್‌ ಸಹ ಆಕರ್ಷಕ ಇದ್ದು, ಟ್ರೆಂಡಿ ಲುಕ್ ಪಡೆದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 50ಎಂಪಿ ಸೆನ್ಸಾರ್‌ನಲ್ಲಿದೆ. ಇದರೊಂದಿಗೆ 5,000 mAh ಬ್ಯಾಟರಿ ಬಾಳಿಕೆ ಪಡೆದಿರುವುದು ಮತ್ತೊಂದು ಹೈಲೈಟ್‌.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಹೇಗಿದೆ? ಮೊಟೊ G62 ಸ್ಮಾರ್ಟ್‌ಫೋನ್‌ 6.5 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇದು 120Hz ರಿಫ್ರೆಶ್ ರೇಟ್‌ ಅನ್ನು ಹೊಂದಿದ್ದು, 405ppi ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ 20:9 ರಚನೆಯ ಅನುಪಾತದೊಂದಿಗೆ ಬರಲಿದೆ. ತನ್ನ ವರ್ಗದಲ್ಲಿಯೇ ಉತ್ತಮ ಡಿಸ್‌ಪ್ಲೇ ರೆಸಲ್ಯೂಶ್ ಹೊಂದಿದ್ದು, ಮೊದಲ ನೋಟದಲ್ಲಿಯೇ ಗ್ರಾಹಕರಿಗೆ ಈ ಫೋನ್ ಡಿಸೈನ್ ಹೆಚ್ಚು ಆಕರ್ಷಕ ಅನಿಸಲಿದೆ.

ಪ್ರೊಸೆಸರ್‌ ಕಾರ್ಯವೈಖರಿ ಬಲವೇನು? ಮೊಟೊ G62 ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಬೆಂಬಲವನ್ನು ಪಡೆದಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಬಲವನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಆಯ್ಕೆಯನ್ನು ನೀಡಲಿದೆ. ಅಧಿಕ RAM ಆಯ್ಕೆಯು ಮಲ್ಟಿಟಾಸ್ಕಿಂಗ್ ಕೆಲಸಗಳಿಗೆ ಹಾಗೂ ಅಧಿಕ ಸ್ಟೋರೇಜ್ ಆಯ್ಕೆ ಡೇಟಾ ಸಂಗ್ರಹಕ್ಕೆ ಹೆಚ್ಚು ಪೂರಕ ಎನಿಸುತ್ತದೆ.

ಕ್ಯಾಮೆರಾ ಸೆನ್ಸಾರ್ ಹೇಗಿವೆ ಮೊಟೊ G62 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ f/1.8 ಅಪರ್ಚರ್ ಲೆನ್ಸ್‌ ಅನ್ನು ಹೊಂದಿದೆ. ಇದು ಕ್ವಾಡ್-ಪಿಕ್ಸೆಲ್ ತಂತ್ರಜ್ಞಾನ ಮತ್ತು PDAF ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಪಡೆದಿದೆ. ಇನ್ನು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಕ್ಯಾಮೆರಾ ಅತ್ಯುತ್ತಮ ಎನಿಸುವಂತಿದ್ದು, ಹಾಗೆಯೇ ಫೋಟೊ ಎಡಿಟಿಂಗ್ ಆಯ್ಕೆಗಳು ಸಹ ಇವೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌ಗಳೇನು? ಮೊಟೊ G62 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 20W ವೇಗದ ಚಾರ್ಜಿಂಗ್ ಟೆಕ್ನಾಲಜಿಯನ್ನು ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಬ್ಯಾಂಡ್ ವೈಫೈ, 5G, 4G LTE, ಬ್ಲೂಟೂತ್ v5.1, 3.5mm ಹೆಡ್‌ಫೋನ್ ಪೋರ್ಟ್ ಮತ್ತು USB ಟೈಪ್-C ಅನ್ನು ಒಳಗೊಂಡಿದೆ. ಇದಲ್ಲದೆ ಫಿಂಗರ್‌ಪ್ರಿಂಟ್ ರೀಡರ್, ಪ್ರಾಕ್ಸಿಮಿಟಿ ಸೆನ್ಸಾರ್‌, ಆಂಬಿಯೆಂಟ್‌ ಲೈಟ್‌ ಸೆನ್ಸಾರ್‌, ಗೈರೊಸ್ಕೋಪ್ ಮತ್ತು ಇ-ದಿಕ್ಸೂಚಿಯನ್ನು ಬೆಂಬಲಿಸಲಿದೆ. ಇದು Moto G62 ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳು ಮತ್ತು ಡ್ಯುಯಲ್ ಮೈಕ್ರೊಫೋನ್‌ಗಳನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ ಭಾರತದಲ್ಲಿ ಮೊಟೊ G62 ಸ್ಮಾರ್ಟ್‌ಫೋನ್‌ ಬೇಸ್ ಮಾಡೆಲ್‌ 6GB RAM + 128GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 17,999ರೂ. ಬೆಲೆಯನ್ನು ಹೊಂದಿದೆ. ಇನ್ನು 8GB RAM + 128GB ಸ್ಟೋರೇಜ್ ಆವೃತ್ತಿಯ ಬೆಲೆ 19,999ರೂ. ಆಗಿದೆ. ಇದು ಫ್ರಾಸ್ಟೆಡ್ ಬ್ಲೂ ಮತ್ತು ಮಿಡ್ನೈಟ್ ಗ್ರೇ ಬಣ್ಣದ ಆಯ್ಕೆಗಳಲ್ಲಿ ಬರುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಫ್ಲಿಪ್‌ಕಾರ್ಟ್ ಮತ್ತು ಪ್ರಮುಖ ಆಫ್‌ಲೈನ್ ಔಟ್‌ಲೆಟ್‌ಗಳಲ್ಲಿ ಇದೇ ಆಗಸ್ಟ್ 19 ರಿಂದ ಸ್ಮಾರ್ಟ್‌ಫೋನ್ ಖರೀದಿಗೆ ಲಭ್ಯವಿರುತ್ತದೆ.

‘ಟ್ವಿಟ್ಟರ್ ಬಳಕೆದಾರ’ರಿಗೆ ಭರ್ಜರಿ ಗುಡ್ ನ್ಯೂಸ್: ಈಗ ‘ಪೋಸ್ಟ್ ಎಡಿಟ್’ ಮಾಡಲು ಅವಕಾಶ

ಭಾರತದ ಸ್ವಾತಂತ್ರ್ಯ ಹೋರಾಟವನ್ನು ಆಧರಿಸಿದ ಆನ್ಲೈನ್ ಶೈಕ್ಷಣಿಕ ಆಟಗಳ ಸರಣಿ ‘ಆಜಾದಿ ಕ್ವೆಸ್ಟ್’ ಗೆ ಚಾಲನೆ

ಜಗತ್ತಿಗೆ ಮಾದರಿಯಾಯ್ತು ಭಾರತದ ಯಶಸ್ವಿ ಯುಪಿಐ ಪಾವತಿ ಪದ್ಧತಿ…!

- Advertisement -

Latest Posts

Don't Miss