Friday, December 27, 2024

Latest Posts

ಪವಾಡ ಪುರುಷ ಕೊರಗಜ್ಜನ ಮಹಿಮೆ ಹೇಳುವ ‘ಕರಿ ಹೈದ ಕರಿ ಅಜ್ಜ’ ಶೂಟಿಂಗ್ ಮುಕ್ತಾಯ

- Advertisement -

Film News:

ನಿರ್ಮಾಪಕ ತ್ರಿವಿಕ್ರಮ ಸಪಲ್ಯ ನಿರ್ಮಾಣದ ‘ಕರಿ ಹೈದ ಕರಿ ಅಜ್ಜ’ ಚಿತ್ರದ ಶೂಟಿಂಗ್ ಮುಕ್ತಾಯವಾಗಿದೆ. ಪವಾಡ ಪುರುಷ ಕೊರಗಜ್ಜ ಜೀವನಾಧಾರಿತ ಸಿನಿಮಾ ಇದಾಗಿದ್ದು, ಚಿತ್ರಕ್ಕೆ ಸುಧೀರ್ ಅತ್ತಾವರ್ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದಲ್ಲಿ ಬರುವ ಮುಖ್ಯ ಪಾತ್ರವೊಂದಲ್ಲಿ ಹಾಲಿವುಡ್, ಬಾಲಿವುಡ್ ಹಾಗೂ ಫ್ರೆಂಚ್ ಸಿನಿಮಾಗಳ ನೃತ್ಯ ನಿರ್ದೇಶಕ, ಡ್ಯಾನ್ಸರ್, ನಟ ಸಂದೀಪ್ ಸೋಪರ್ಕರ್ ನಟಿಸಿದ್ದಾರೆ. ಈ ಚಿತ್ರದಲ್ಲಿ ಇವರು ಕೊರಗಜ್ಜನ ಜೊತೆ ಬರುವ ಗುಳಿಗನ್ ಪಾತ್ರ ನಿರ್ವಹಿಸಿದ್ದಾರೆ. ಅಂತರರಾಷ್ಟ್ರೀಯ ಈ ಕಲಾವಿದ ಇದೇ ಮೊದಲಬಾರಿಗೆ ಕನ್ನಡ ಸಿನಿಮಾವೊಂದರಲ್ಲಿ ನಟಿಸಿರುವುದು ವಿಶೇಷ. ಈ ಸಿನಿಮಾ ಬಗ್ಗೆ ಮಾಹಿತಿ ನೀಡಲು ಇತ್ತೀಚೆಗೆ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಚಿತ್ರದ ನಿರ್ದೇಶಕ ಸುಧೀರ್ ಅತ್ತಾವರ್ ‘ನಿನ್ನೆಯಷ್ಟೇ ಕೊರಗಜ್ಜ ಕೋಲು ಕೊಡುವ ಮೂಲಕ ‘ಕರಿ ಹೈದ ಕರಿ ಅಜ್ಜ’ ಚಿತ್ರದ ಶೂಟಿಂಗ್ ಮುಗಿಸಲಾಯಿತು. ಚಿತ್ರೀಕರಣ ಸಂದರ್ಭದಲ್ಲಿ ಸಾಕಷ್ಟು ಪವಾಡಗಳು ನಡೆದಿದ್ದು, ಎಲ್ಲರ ಅನುಭಕ್ಕೆ ಬಂದಿದೆ. ಇದು ಕೊರಗಜ್ಜ ಎಂದು ಕರೆಯುವ 22, 23 ವರ್ಷ ಬದುಕಿದ್ದ ಹುಡುಗನ ಕಥೆ. ಇದರಲ್ಲಿ ಹಾಲಿವುಡ್ ಕೋರಿಯೋಗ್ರಾಫರ್ ಹಾಗೂ ನಟ ಸಂದೀಪ್ ಸೋಪರ್ಕರ್ ಗುಳಿಗನ್ ಪಾತ್ರ ಮಾಡಿದ್ದಾರೆ. ಇದು ಕೊರಗಜ್ಜನ ಜೊತೆಗೆ ಸಾಗುತ್ತದೆ. ಗುಳಿಗನ್ ಪಾತ್ರವನ್ನು ಡ್ಯಾನ್ಸ್ ಬೇಸ್ ನಲ್ಲಿ ತೋರಿಸಲಾಗಿದ್ದು ಆ ಪಾತ್ರಕ್ಕೆ ಸಂದೀಪ್ ಅವರು ಸೂಕ್ತರಾಗಿದ್ದಾರೆ. ಈ ಮೊದಲು ಕೊರಗಜ್ಜನ ಬಗ್ಗೆ 7-8 ಜನ ಸಿನಿಮಾ ಮಾಡಲು ಪ್ರಯತ್ನ ಮಾಡಿದ್ರು ಆಗಿರಲಿಲ್ಲ. ನಮಗೆ ದೇವರ ಅಪ್ಪನೆ ಸಿಕ್ಕಮೇಲೆ ಈ ಸಿನಿಮಾ ಮಾಡಲು ಮುಂದಾದೆವು. 12ನೇ ಶತಮಾನದ ಕಥೆ ಇದಾಗಿದ್ದು, ಚಿತ್ರದಲ್ಲಿ ಬುರ್ದಗೋಳಿ ಉತ್ಪತ್ತಿ ಕಲ್ಲು ಮುಖ್ಯವಾಗುತ್ತದೆ. ನಾವು ಈ ದೃಶ್ಯವನ್ನು ಸೋಮೇಶ್ವರದಲ್ಲಿ ಶೂಟ್ ಮಾಡುವ ಮೂಲಕ ಚಾಲನೆ ನೀಡಿದೇವು. ನಮಗೆಲ್ಲ ಶೂಟಿಂಗ್ ಸಂದರ್ಭದಲ್ಲಿ ಒಂದಿಷ್ಟು ಅನುಭವ ಆಗಿವೆ. ಈ ಸಿನಿಮಾವನ್ನು ನಾನು ಮಾಡಲಿಲ್ಲ. ಆ ದೈವ ನನ್ನ ಕೈಲಿ ಮಾಡಿಸಿದ್ದಾರೆ. ನಮ್ಮ ಚಿತ್ರದಲ್ಲಿ ಭೈರಕ್ಕಿ ಪಾತ್ರ ಮುಖ್ಯವಾಗಿದ್ದು, ಭೈರಕ್ಕಿ ಕೊರಗಜ್ಜನ ಸಾಕು ತಾಯಿ. ಈ ಪಾತ್ರವನ್ನು ನಟಿ ಶ್ರುತಿ ನಿರ್ವಹಿಸಿದ್ದಾರೆ. ಇಂದು ಮಂಗಳೂರು ಕಡೆ ಮನೆ ಮನೆಯಲ್ಲಿ ಕೊರಗಜ್ಜನ ಆರಾಧಿಸುತ್ತಾರೆ. ಜನ ವಿಸ್ಕಿ, ಬ್ರಾಂದಿ, ಕೊರಗಜ್ಜಗೆ ನೀಡುತ್ತಿದ್ದು, ಅಂದಿನ ಕಾಲದಲ್ಲಿ ಇವುಗಳು ಇರಲಿಲ್ಲ. ಕಳ್ಳಬಟ್ಟಿ ಇತ್ತು. ದೇವರಿಗೆ ನಾವು ಎನೂ ಬೇಕಾದರೂ ಕೊಡಬಹುದು. ಇಂದಿನ ಜನ ವಿಸ್ಕಿ, ಬ್ರಾಂದಿ ಕೊಡುತ್ತಿರುವುದು ಕೊರಗ ಜನಾಂಗಕ್ಕೆ ಬೇಸರ ತಂದಿದೆ. ಈ ಚಿತ್ರದಲ್ಲಿ ಕೊರಗಜ್ಜನ ನೈಜ ಕಥೆ ಹೇಳಲಾಗಿದ್ದು, ಕಥೆಯನ್ನು ಕೊರಗ ಜನಾಂಗದಿಂದ ಕಲೆಕ್ಟ್ ಮಾಡಿ ಸಿನಿಮಾ ಮಾಡಲಾಗಿದೆ’ ಎಂದು ಹೇಳಿದರು.

ನಂತರ ಮಾತನಾಡಿದ ಹಾಲಿವುಡ್ ನಟ ಸಂದೀಪ್ ಸೋಪರ್ಕರ್ ಮಾತನಾಡಿ ‘ಈ ಚಿತ್ರ ನಂಗೆ ಒಳ್ಳೆ ಅನುಭವ ನೀಡಿದೆ. ಈ ತಂಡ ಹಾಗೂ ಸಿನಿಮಾದಲ್ಲಿ ಕೆಲಸ ಮಾಡಿದ್ದು ತುಂಬಾ ಖುಷಿ ಕೊಟ್ಟಿದೆ. ಒಳ್ಳೆಯ ತಂಡ ಇದಾಗಿದ್ದು ಅದ್ಭುತ ಕೆಲಸ ಮಾಡಿದೆ. ನಾನು ಮಾಡಿರುವ ಪಾತ್ರ ಅದ್ಭುತವಾಗಿದ್ದು ಹೊಸ ರೀತಿಯಲ್ಲಿ ಅನುಭವ ನೀಡಿತು. ಈ ಪಾತ್ರವನ್ನು ನಾನು ನನ್ನ ಸಿಸ್ಟರ್ಸ್ ಜೊತೆಗೆ ರೀಸರ್ಚ್ ಮಾಡಿ ಮಾಡಿದ್ದೇನೆ. ಒಳ್ಳೆ ರೀತಿ ಶೂಟಿಂಗ್ ಆಯ್ತು. ಈ ಪಾತ್ರ ಮಾಡಿದ್ದು ಖುಷಿ ಇದ್ದು, ಇದರಲ್ಲಿ ನಾನು ಡ್ಯಾನ್ಸ್ ಜೊತೆ ನಟನೆ ಕೂಡ ಮಾಡಿದ್ದೇನೆ. ಶೂಟಿಂಗ್ ಮಾಡುವ ಸಂದರ್ಭದಲ್ಲಿ ಸಾಕಷ್ಟು ಜನ ಗಲಾಟೆ ಮಾಡಿ 2 ದಿನ ಶೂಟಿಂಗ್ ನಿಂತಿತು. ನಂತರ ನಿರ್ದೇಶಕ, ನಿರ್ಮಾಪಕರು ಕಷ್ಟಪಟ್ಟು ಶೂಟಿಂಗ್ ಮಾಡಿಸಿದರು. ಮೊದಲಬಾರಿಗೆ ಜಾನಪದ ಶೈಲಿಯಲ್ಲಿ ಡ್ಯಾನ್ಸ್ ಮಾಡಿದ್ದು ಶಿವನ ನೃತ್ಯ ಮಾಡಿರುವು ಒಳ್ಳೆ ಅನುಭವ ಮರೆಯಲಾಗದು’ ಎಂದರು. ಕೊರಗಜ್ಜನ ಸಾಕು ತಾಯಿ ಪಾತ್ರ ನಿರ್ವಹಿಸಿರುವ ನಟಿ ಶ್ರುತಿ ಮಾತನಾಡಿ, ‘ಈ ಸಿನಿಮಾ ನನ್ನ ಮನಸ್ಸಿನಲ್ಲಿ ವಿಷೇಶವಾದ ಸ್ಥಾನ ಪಡೆಯುತ್ತದೆ. ನಾನಿಲ್ಲಿ ಭೈರಕ್ಕಿ ಪಾತ್ರ ಮಾಡಿದ್ದೇನೆ. ದೈವದ ಕಥೆ ಅದ್ಭುತವಾಗಿ ಇದ್ದು ಈ ಕಥೆಯನ್ನು ಹೆಕ್ಕಿ ತೆಗೆದಿದ್ದು ನಿರ್ದೇಶಕರ ಧೈರ್ಯ ಮೆಚ್ಚಬೇಕು. ಚಿತ್ರಕ್ಕಾಗಿ ನಿರ್ಮಾಪಕರು ಕೋಟಿ ಕೋಟಿ ಹಣ ಖರ್ಚು ಮಾಡಿದ್ದಾರೆ. ಯಾರಿಗೂ ಸಿಗದೆ ಇರುವ ಅವಕಾಶ ಈ ತಂಡಕ್ಕೆ ಸಿಕ್ಕಿದೆ. ಇದರಲ್ಲಿ ಬರುವ ಪ್ರತಿಯೋಬ್ಬರ ಪಾತ್ರ ಪೇಂಟಿಂಗ್ ತರಾ ಇದ್ದು ನಿರ್ದೇಶಕರು ಅಷ್ಟು ತಯಾರಿ ಮಾಡಿಕೊಂಡು ಸಿನಿಮಾ ಮಾಡಿದ್ದಾರೆ. ಭೈರಕ್ಕಿ ಕೊರಗಜ್ಜ ಸಾಕು ತಾಯಿ 2 ಸೇಡ್ ಪಾತ್ರಕ್ಕಿದೆ. ಇದರಲ್ಲಿ ಕೊರಗಜ್ಜಗೆ ತನಿಯಾ/ ಕಾಂತಾರೆ ಹೆಸರು. ನಾನು ಕಳ್ಳಬಟ್ಟಿ ಮಾರುತ್ತಿರುತ್ತೇನೆ. ಇದರಲ್ಲಿ ತಾಯಿ ಮಗನ ಬಾಂಧವ್ಯವನ್ನು ಅದ್ಬುತವಾಗಿ ತೋರಿಸಲಾಗಿದೆ. ನಮ್ಮಗಳ ಜೋತೆ ಸಾಕಷ್ಟು ರಂಗಭೂಮಿ ಕಲಾವಿದರು ಇದರಲ್ಲಿ ನಟನೆ ಮಾಡಿದ್ದಾರೆ. ನಾನು ಈ ಸಿನಿಮಾ ಮಾಡಿದ್ದು ಧನ್ಯತಾ ಭಾವ ಇದೆ’ ಎಂದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಮತ್ತೋರ್ವ ನಟಿ ಭವ್ಯ ‘ಈ ಚಿತ್ರದಲ್ಲಿ ನಾನು ವಿಷೇಶವಾದ ಪಾತ್ರ ಮಾಡದ್ದು, ಶೂಟಿಂಗ್ ಮಾಡುವಾಗ ಮಿರಾಕಲ್ ಆಗತಾ ಇತ್ತು. ಒಂದು ದೃಶ್ಯದಲ್ಲಿ ಗ್ಲಿಸರಿನ್ ಇಲ್ಲದೆ ಅತ್ತಿದ್ದೇನೆ ಕೂಡ’ ಎಂದು ತಮ್ಮ ಶೂಟಿಂಗ್ ಅನುಭವ ಹಂಚಿಕೊಂಡರು. ಚಿತ್ರದ ನಿರ್ಮಾಪಕ ತ್ರಿವಿಕ್ರಮ ಸಪಲ್ಯ ‘ತುಳು ನಾಡ ಜನರ ಸಂಸ್ಕೃತಿ ತೋರಿಸುವ ಆಸೆ ಇತ್ತು. ಅದು ಈ ಚಿತ್ರದ ಮೂಲಕ ಇಡೇರಿದೆ. ಸೋಮೇಶ್ವರ, ಉಲ್ಲಾಳ, ಮಡನ್ ತ್ಯಾರ್ ಮುಂತಾದ ಸ್ಥಳದಲ್ಲಿ ಶೂಟಿಂಗ್ ಮಾಡಲಾಗಿದ್ದು ಚಿತ್ರೀಕರಣ ಮುಕ್ತಾಯವಾಗಿದೆ. ಚಿತ್ರವನ್ನು ಮೇ ನಲ್ಲಿ ರಿಲೀಸ್ ಮಾಡುವ ಪ್ಲ್ಯಾನ್ ಇದೆ’ ಎನ್ನುವರು. ಚಿತ್ರದಲ್ಲಿ ಪ್ರಮುಖ ಪ್ರಾತ್ರವೊಂದರಲ್ಲಿ ಬಾಲಿವುಡ್ ನಟ ಕಬೀರ್ ಬೇಡಿ ನಟಿಸಿದ್ದಾರೆ. ನಾಯಕನಾಗಿ ಭರತ್ ಸೂರ್ಯ ನಟನೆ ಮಾಡಿದ್ದು, ಇವರು ಸಿನಿಮಾ ಶೂಟಿಂಗ್ ಮುಗಿಯುವ ವರೇಗೆ ಕಾಲಿಗೆ ಚಪ್ಪಲಿ ಹಾಕಿಲ್ಲವಂತೆ. ಇನ್ನು ನಾಯಕಿಯಾಗಿ ವೃತಿಕಾ ಅಭಿನಯಿಸಿದ್ದಾರೆ. ಚಿತ್ರವನ್ನು ಏಕಕಾಲದಲ್ಲಿ ಕನ್ನಡ, ತುಳು ಹಾಗೂ ಮಲಯಾಳಂ ಭಾಷೆಯಲ್ಲಿ ತಯಾರಿಸಲಾಗುತ್ತಿದೆ. ಧ್ರತಿ ಕ್ರಿಯೇಷನ್ಸ್ ಹಾಗೂ ಸಕ್ಸಸ್ ಫಿಲಂಸ್ ಬ್ಯಾನರ್ ನಲ್ಲಿ ಈ ನಿರ್ಮಾಣ ಮಾಡಲಾಗುತ್ತಿದೆ.

ವಿನಯ್ ನಟಿಸಿ ನಿರ್ದೇಶಿಸಿರುವ ‘ದಿ’ ಸಿನಿಮಾ ಟ್ರೇಲರ್ ರಿಲೀಸ್- ಮಾರ್ಚ್ ನಲ್ಲಿ ಸಿನಿಮಾ ತೆರೆಗೆ

ಕಾಶಿಯ ನಾಗಸಾಧುವಿನಿಂದ ರಂಗಸಮುದ್ರ ಚಿತ್ರದ “ಕೈಲಾಸ”ಸಾಂಗ್ ಬಿಡುಗಡೆ

ಬೆಂಗಳೂರಲ್ಲಿ ವಾರಿಸು ಶೋಗಳ ಇಳಿಕೆ…! ಕಿರಿಕ್ ಬೆಡಗಿಗೆ ಮತ್ತೆ ಹಿನ್ನಡೆಯಾಗುತ್ತಿದೆಯಾ.?!

- Advertisement -

Latest Posts

Don't Miss