Friday, November 22, 2024

Latest Posts

ಬೆಂಗಳೂರು ಗಣೇಶನಿಗೆ ಹೊಸ ರೂಲ್ಸ್…!

- Advertisement -

www.karnatakatv.net: ಬೆಂಗಳೂರು: ಗಣೇಶೋತ್ಸವವನ್ನು ಐದು ದಿನಗಳ ಕಾಲ ಆಚರಿಸಲು ಸರ್ಕಾರ ಅನುಮತಿ ನೀಡಿದ್ದರೂ, ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರೀ 3 ದಿನ ಸರಳ ಹಾಗೂ ಪರಿಸರ ಸ್ನೇಹಿಯಾಗಿ ಆಚರಿಸಲು ಅವಕಾಶ ನೀಡಿ ಪಾಲಿಕೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಕೊರೋನಾ ಸೋಂಕು ಹರಡುವ ಭೀತಿಯಿಂದಾಗಿ ಈ ಬಾರಿಯೂ ಗಣೇಶೋತ್ಸವವನ್ನು ಸರಳವಾಗಿ ಆಚರಿಸೋ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗ್ತಿದ್ದು. ಈ ಕುರಿತು ಪಾಲಿಕೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಹೊಸ ಮಾರ್ಗಸೂಚಿಯ ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ 4 ಅಡಿ, ಮನೆಗಳಲ್ಲಿ 2 ಅಡಿಗೂ ಮೀರದಂತೆ ಪ್ರತಿಷ್ಠಾಪಿಸಬೇಕು. ಪಾಲಿಕೆ ವ್ಯಾಪ್ತಿಯ ಎಲ್ಲಾ 198 ವಾರ್ಡ್ ಗಳಿಗೆ ಈ ಹೊಸ ಮಾರ್ಗ ಸೂಚಿ ಅನ್ವಯಿಸಲಿದೆ. ಈ ಹೊಸ ಮಾರ್ಗ ಸೂಚಿಯಲ್ಲಿ ಏನೇನಿದೆ ಅಂತ ಹೇಳೋದಾದಾದ್ರೆ,

ಗಣೇಶಚತುರ್ಥಿಯನ್ನ ಸರಳವಾಗಿ ಮನೆಗಳಲ್ಲಿ ಅಥವಾ ಸರ್ಕಾರಿ/ಖಾಸಗಿ ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಆಚರಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು 4 ಅಡಿ ಎತ್ತರ ಹಾಗೂ ಮನೆಯೊಳಗೆ 2 ಅಡಿ ಮೀರದಂತೆ ಪ್ರತಿಷ್ಠಾಪಿಸುವುದು. ಪಾಲಿಕೆಯ 198 ವಾರ್ಡ್ಗಳಲ್ಲಿ ವಾರ್ಡಿಗೆ ಒಂದರಂತೆ ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ  ಅವಕಾಶ. ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಕುರಿತು ಸ್ಥಳೀಯ ಗಣೇಶೋತ್ಸವ ಮಂಡಳಿ/ಸಂಘ-ಸಂಸ್ಥೆಗಳೊಂದಿಗೆ ಸಭೆಯನ್ನು ನಡೆಸಿ ಗಣೇಶ ಪ್ರತಿಷ್ಠಾಪನೆಯ ಅನುಮತಿ ಆದೇಶವನ್ನು ಪಡೀಬೇಕು.

ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಯಾವುದೇ ಅಡ್ಡಿಯಾಗದಂತೆ ಗಣೇಶ ಪ್ರತಿಷ್ಠಾಪಿಸಬೇಕು. ಪ್ರತಿಷ್ಠಾಪನಾ ಸ್ಥಳದಳಲ್ಲಿ 20 ಜನಕ್ಕೆ ಸೀಮಿತವಾದ ಆವರಣವನ್ನು ನಿರ್ಮಿಸುವುದು. ಒಂದೇ ಬಾರಿಗೆ 20 ಕ್ಕಿಂತ ಹೆಚ್ಚಿನ ಜನ ನೋಡಿಕೊಳ್ಳಬೇಕು. ಹಾಗೂ ಗಣೇಶ ಪ್ರತಿಷ್ಠಾಪಿಸುವ ಸ್ಥಳದಲ್ಲಿ ಕೋವಿಡ್ ನಿಯಮಗಳ ಅನುಸರಣೆ ಮಾಡುವ ಸಲುವಾಗಿ ಪೊಲೀಸ್ ಇಲಾಖೆಯಿಂದ ಹೋಂ ಗಾರ್ಡ್ಗಳನ್ನು ನಿಯೋಜಿಸಬೇಕು.  ಸ್ಥಳದಲ್ಲಿ ಯಾವುದೇರೀತಿಯ ಸಾಂಸ್ಕೃತಿಕ/ಸಂಗೀತ/ನೃತ್ಯ/ಡಿಜೆ ಸೆಟ್ ಹಾಗೂ ಇನ್ನಿತರೆ ಯಾವುದೇ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸೋಕ್ಕೆ ಅವಕಾಶವಿರುವುದಿಲ್ಲ ಅಲ್ಲದೆ ಸ್ಪೀಕರ್ ಗಳಿಗೂ ನಿರ್ಬಂಧ ವಿಧಸಲಾಗಿದೆ.

ಆಯೋಜಕರು ಕೊವಿಡ್-19ರ ನೆಗೆಟಿವ್ ರಿಪೋರ್ಟ್ ಮತ್ತು ಲಸಿಕೆ ಪಡೆದಿರೋ ಬಗ್ಗ ಖಡ್ಡಾಯವಾಗಿ ಸರ್ಟಿಫಿಕೇಟ್ ಹೊಂದಿರಬೇಕು. ಕಾರ್ಯಕ್ರಮ ಆಯೋಜಿತ ಸ್ಥಳಗಳಲ್ಲಿ ಸ್ಥಳೀಯ ಮಟ್ಟದಲ್ಲಿ ಆಯೋಜಕರು ಲಸಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು.

ಬೆಂಗಳೂರು ನಗರದಲ್ಲಿ ಗರಿಷ್ಠ 3 ದಿನಗಳ ಕಾಲ ಗಣೇಶೋತ್ಸವವನ್ನು ಆಚರಿಸಲು ಅನುಮತಿಸಿಲಾಗಿದೆ. ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ಕಾರಣಕ್ಕೂ ಮೆರವಣಿಗೆ ಮಾಡಬಾರದು. ಪಾಲಿಕೆ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣೇಶ ಮೂರ್ತಿಗೆ ನಿರ್ಬಂಧವಿಧಿಸಿರೋ ಹಿನ್ನೆಲೆಯಲ್ಲಿ ಪಿಒಪಿ ಗಣೇಶ ಮೂರ್ತಿಗಳನ್ನು ಮಾರಾಟ ಮಾಡುವರಿಗೆ ದಂಡ ವಿಧಿಸಲಾಗುತ್ತೆ. ಮನೆಯಲ್ಲಿ ಪ್ರತಿಷ್ಠಾಪಿಸುವ ಗಣೇಶ ಮೂರ್ತಿಗಳನ್ನು ನಿಮ್ಮ ಮನೆಗಳಲ್ಲಿ ಅಥವಾ ಪಾಲಿಕೆಯ ಮೊಬೈಲ್ ಟ್ಯಾಂಕರ್‌ಗಳಲ್ಲಿ ವಿಸರ್ಜನೆ ಮಾಡಬೇಕು.

ಗಣೇಶ ಚತುರ್ಥಿ ಆಚರಿಸುವ ದೇವಸ್ಥಾನ/ಸಾರ್ವಜನಿಕ ಸ್ಥಳಗಳು ಹಾಗೂ ದರ್ಶನಕ್ಕೆ ಬರುವ ಭಕ್ತರಿಗೆ ತಪ್ಪದೇ ಸ್ಯಾನಿಟೈಸ್ ಮಾಡಬೇಕು. ಭಕ್ತಾಧಿಗಳ ಮಧ್ಯೆ ಕನಿಷ್ಟ 6 ಅಡಿ ಸಾಮಾಜಿಕ ಅಂತರ ಹಾಗೂ ಮಾಸ್ಕ್ ಧರಿಸಿರುವಂತೆ ನೋಡಿಕೊಳ್ಳಬೇಕು.

ಇನ್ನೂ ಈ ಎಲ್ಲಾ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡುವವರಿಗೆ ದಂಡ ವಿಧಿಸಲಾಗುತ್ತೆ ಅಂತ ಪಾಲಿಕೆ ಕಡಕ್ ಮಾರ್ಗಸೂಚಿ ಹೊರಡಿಸಿದೆ.

ಕರ್ನಾಟಕ ಟಿವಿ- ಬೆಂಗಳೂರು

- Advertisement -

Latest Posts

Don't Miss