ಬಿಎಂಟಿಸಿ ಎಲೆಕ್ಟ್ರಿಕ್ ಬಸ್‌ಗಳನ್ನು ಚಾಲನೆ ಮಾಡುವ ವೇಳೆ ಚಾಲಕರು ಮೊಬೈಲ್ ಫೋನ್ ಬಳಸುವಂತಿಲ್ಲವೆಂದು ನಿಷೇಧ ಆದೇಶ ಹೊರಡಿಸಿದೆ. ಇತ್ತೀಚಿನ ದಿನಗಳಲ್ಲಿ ಇವಿ ಬಸ್‌ಗಳ ಅಪಘಾತ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಚಾಲಕರ ಮೊಬೈಲ್ ಬಳಕೆ ಅಪಘಾತಗಳಿಗೆ ಕಾರಣವಾಗಿರುವ ಸಾಧ್ಯತೆ ಇದೆ ಎಂದು ಸಂಸ್ಥೆ ಹೇಳಿದೆ.
ಬಿಎಂಟಿಸಿ ಪ್ರಕಟಿಸಿದ ಮಾರ್ಗಸೂಚಿಯ ಪ್ರಕಾರ, ಚಾಲಕರು ಮೊಬೈಲ್‌ಫೋನ್ ಮಾತ್ರವಲ್ಲ, ಬ್ಲೂಟೂತ್, ಇಯರ್‌ಫೋನ್ ಸೇರಿ ಯಾವುದೇ ಡಿಜಿಟಲ್ ಗ್ಯಾಜೆಟ್‌ಗಳನ್ನು ಬಳಸುವುದು ನಿಷೇಧಿಸಲಾಗಿದೆ. ಸಂಗೀತ ಅಥವಾ ಆಡಿಯೋ ಕೇಳುವುದು, ಮೆಸೇಜಿಂಗ್ ಮತ್ತು ಚಾಟಿಂಗ್ ಕೂಡ ಕಟ್ಟುನಿಟ್ಟಾಗಿ ತಡೆಗಟ್ಟಲಾಗಿದೆ.
ಈ ನಿಯಮಗಳನ್ನು ಉಲ್ಲಂಘಿಸಿದಲ್ಲಿ ಚಾಲಕರ ಜೊತೆಗೆ ಕಂಡಕ್ಟರ್‌ಗಳ ಮೇಲೂ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಬಿಎಂಟಿಸಿ ಸ್ಪಷ್ಟಪಡಿಸಿದೆ. ಈ ಕುರಿತು ಬಿಎಂಟಿಸಿ ಭದ್ರತಾ ಮತ್ತು ಜಾಗೃತಾ ನಿರ್ದೇಶಕರು ಎಲ್ಲಾ ಡಿಪೋ ಮ್ಯಾನೇಜರ್‌ಗಳಿಗೆ ಅಧಿಕೃತ ಪತ್ರ ಬರೆದು ಸೂಚನೆ ನೀಡಿದ್ದಾರೆ.
ವರದಿ: ರಂಜಿತ ರೇವಣ್ಣ ನಾಟನಹಳ್ಳಿ

