Technology News:
ಸ್ಯಾಮ್‌ಸಂಗ್ ಕಂಪೆನಿ ತನ್ನ ವೈವಿಧ್ಯಮಯ ಡಿವೈಸ್‌ಗಳಿಂದ ಗುರುತಿಸಿಕೊಂಡಿದೆ. ವಿವಿಧ ಮಾದರಿಯ ಸ್ಮಾರ್ಟ್‌ಫೋನ್‌ಗಳ ಜೊತೆಗೆ ಫೋಲ್ಡೆಬಲ್ ಸ್ಮಾರ್ಟ್‌ಫೋನ್‌ಗಳನ್ನು ಕೂಡ ಪರಿಚಯಿಸಿದೆ. ಸದ್ಯ ಇದೀಗ ಟೆಕ್ ಮಾರುಕಟ್ಟೆಯಲ್ಲಿ ಹೊಸ ಗ್ಯಾಲಕ್ಸಿ ಟ್ಯಾಬ್ ಆಕ್ಟಿವ್ 4 ಪ್ರೊ ಟ್ಯಾಬ್ಲೆಟ್ ಅನ್ನು ಲಾಂಚ್ ಮಾಡಿದೆ. ಇದು ಆಂಡ್ರಾಯ್ಡ್ ಟ್ಯಾಬ್ಲೆಟ್ ಆಗಿದ್ದು, ರಗಡ್ ಲುಕ್ ಹೊಂದಿದೆ.
ಸ್ಯಾಮ್‌ಸಂಗ್ ಕಂಪೆನಿ ಭಾರತದಲ್ಲಿ ಹೊಸ ಗ್ಯಾಲಕ್ಸಿ ಟ್ಯಾಬ್ ಆಕ್ಟಿವ್ 4 ಪ್ರೊ ಟ್ಯಾಬ್ಲೆಟ್ ಅನ್ನು ಪರಿಚಯಿಸಿದೆ. ಇದು MIL-STD-810H ಹೊಂದಿದ್ದು, ಇದು ರಗಡ್ ಬಾಡಿ ವಿನ್ಯಾಸ ಹೊಂದಿರುವುದರಿಂದ ಎಂತಹದೇ ಪರಿಸ್ಥಿತಿಯಲ್ಲೂ ಬಳಸುವುದಕ್ಕೆ ಸೂಕ್ತವಾಗಿದೆ. ಇದು IP68 ರೇಟ್ ಹೊಂದಿದ್ದು, ವಾಟರ್ ಮತ್ತು ಡಸ್ಟ್ ರೆಸಿಸ್ಟೆನ್ಸಿಯನ್ನು ಹೊಂದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ ಟ್ಯಾಬ್ ಆಕ್ಟಿವ್ 4 ಪ್ರೊ ಟ್ಯಾಬ್ಲೆಟ್ 10.1 ಇಂಚಿನ ಎಲ್‌ಸಿಡಿ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1920×1200 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಅನ್ನು ಒಳಗೊಂಡಿದೆ. ಇನ್ನು ಈ ಟ್ಯಾಬ್ಲೆಟ್ 6nm ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G ಪ್ರೊಸೆಸರ್ ಅನ್ನು ಹೊಂದಿರಲಿದೆ ಎನ್ನಲಾಗಿದೆ. ಆಂಡ್ರಾಯ್ಡ್ 12.0 ಅನ್ನು ಸ್ಯಾಮ್‌ಸಂಗ್ ಒನ್ UI ಕಸ್ಟಮೈಸೇಶನ್‌ನೊಂದಿಗೆ ರನ್ ಮಾಡುತ್ತದೆ.
ಇನ್ನು ಈ ಸ್ಮಾರ್ಟ್ ಟ್ಯಾಬ್ಲೆಟ್ 4GB RAM + 64GB ಮತ್ತು 6GB RAM + 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಎರಡು ವೇರಿಯೆಂಟ್ ಆಯ್ಕೆಗಳಲ್ಲಿ ಬರಲಿದೆ. ಈ ಟ್ಯಾಬ್ಲೆಟ್ 13 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ರಿಯರ್ ಕ್ಯಾಮೆರಾ ಮತ್ತು 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.