Friday, December 13, 2024

Latest Posts

ಮಹಾಶಿವರಾತ್ರಿ ಹಬ್ಬಕ್ಕೆ ಮಹಾಶಿವನಿಗೆ “ಕಬ್ಜ” ಚಿತ್ರದಿಂದ ಗೀತನಮನ – karnataka Tv

- Advertisement -

karnataka tv Movies : ಇಡೀ ಭಾರತಾದ್ಯಂತ ಬಿಡುಗಡೆಗೂ ಮುಂಚೆಯೇ ಎಲ್ಲರ ಗಮನ ಸೆಳೆದಿರುವ, ಆರ್ ಚಂದ್ರು ನಿರ್ದೇಶನದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ನಾಯಕರಾಗಿ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ವಿಶೇಷಪಾತ್ರದಲ್ಲಿ ಅಭಿನಯಿಸಿರುವ ಕನ್ನಡದ ಹೆಮ್ಮೆಯ ಪ್ಯಾನ್ ಇಂಡಿಯಾ ಸಿನಿಮಾ “ಕಬ್ಜ” ಚಿತ್ರದಿಂದ ಮಹಾಶಿವರಾತ್ರಿಗೆ ಮಹಾಶಿವನನ್ನು ಕೊಂಡಾಡುವ “ನಮಾಮಿ ನಮಾಮಿ” ಎಂಬ ಸುಮಧುರ ಗೀತೆ ಬಿಡುಗಡೆಯಾಗಿದೆ. ಕಿನಾಲ್ ರಾಜ್ ಬರೆದಿರುವ ಈ ಹಾಡನ್ನು ಖ್ಯಾತ ಗಾಯಕಿ ಐಶ್ವರ್ಯ ರಂಗರಾಜನ್ ಸುಶ್ರಾವ್ಯವಾಗಿ ಹಾಡಿದ್ದಾರೆ. ಖ್ಯಾತ ನಟಿ ಶ್ರೇಯಾ ಶರಣ್ ಈ ಹಾಡಿನಲ್ಲಿ ನಟಿಸಿದ್ದಾರೆ. ರವಿ ಬಸ್ರೂರ್ ಸಂಗೀತ ನೀಡಿರುವ ಈ ಹಾಡು ಐದು ಭಾಷೆಗಳಲ್ಲಿ ಬಿಡುಗಡೆಯಾಗಿದೆ.

ಈ ಹಾಡಿನ ಬಿಡುಗಡೆ ಸಮಾರಂಭ ಇತ್ತೀಚೆಗೆ ಚೆನ್ನೈನಲ್ಲಿ ಅದ್ದೂರಿಯಾಗಿ ನಡೆಯಿತು. ಸಾಕಷ್ಟು ಗಣ್ಯರು ಈ ಸುಂದರ ಸಮಾರಂಭಕ್ಕೆ ಸಾಕ್ಷಿಯಾದರು.ಚಿತ್ರ ಸಾಗಿ ಬಂದ ಬಗ್ಗೆ ಹಾಗೂ ಹಾಡಿನ ಕುರಿತು ಮಾಹಿತಿ ನೀಡಿದ ನಿರ್ದೇಶಕ ಆರ್ ಚಂದ್ರು, “ಕಬ್ಜ” ಚಿತ್ರದ ಹಾಡುಗಳನ್ನು ಹೈದರಾಬಾದ್, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಿಡುಗಡೆ ಮಾಡುತ್ತಿದ್ದೇವೆ. ಹೋದ ಕಡೆ ಚಿತ್ರದ ಕುರಿತು ಕೇಳಿಬರುತ್ತಿರುವ ಪ್ರಶಂಸನೀಯ ಮಾತುಗಳಿಗೆ ಮನ ತುಂಬಿ ಬಂದಿದೆ. ನನ್ನ ತಂಡಕ್ಕೆ ಹಾಗೂ ಸಹಕಾರ ನೀಡುತ್ತಿರುವ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸಿದರು.

“ಸಿನಿ ಬಜಾರ್” ಇದು ನಿರ್ಮಾಪಕರ ಸ್ನೇಹಿ ಓಟಿಟಿ 

“ಕಬ್ಜ” ಚಿತ್ರದಲ್ಲಿ ನಟಿಸಿರುವುದು ಖುಷಿಯಾಗಿದೆ. ಶಿವನನ್ನು ಆರಾಧಿಸುವ ಈ ಹಾಡು ಬಹಳ ಮಧುರವಾಗಿದೆ. ನನ್ನ ಪಾತ್ರ ಕೂಡ ಚೆನ್ನಾಗಿದೆ. ಸದ್ಯದಲ್ಲೇ ಚಿತ್ರ ಬಿಡುಗಡೆಯಾಗಲಿದೆ. ಎಲ್ಲರೂ ಪ್ರೋತ್ಸಾಹ ನೀಡಿ ಎಂದರು ನಟಿ ಶ್ರೇಯಾ ಶರಣ್.

ಶ್ರೀಸಿದ್ದೇಶ್ವರ ಎಂಟರ್ ಪ್ರೈಸಸ್ ಮೂಲಕ ನಿರ್ಮಾಣವಾಗಿರುವ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ “ಕಬ್ಜ” ಚಿತ್ರದ ಟೀಸರ್ ಹಾಗೂ ಹಾಡುಗಳ ಬಗ್ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಫೆಬ್ರವರಿ 26 ರಂದು ಶಿಡ್ಲಘಟ್ಟದಲ್ಲಿ ಲಕ್ಷಾಂತರ ಜನರ ಸಮ್ಮುಖದಲ್ಲಿ ನಡೆಯುವ ಅದ್ದೂರಿ ಸಮಾರಂಭದಲ್ಲಿ ಕಮರ್ಷಿಯಲ್ ಹಾಡೊಂದು ಲೋಕಾರ್ಪಣೆಯಾಗಲಿದೆ. ಪ್ರಪಂಚದಾದ್ಯಂತ ಅಭಿಮಾನಿಗಳು ಕಾಯುತ್ತಿರುವ “ಕಬ್ಜ” ಚಿತ್ರ ಮಾರ್ಚ್ 17 ರಂದು(ಪನೀತ್ ರಾಜಕುಮಾರ್ ಜನ್ಮದಿನದಂದು) ಅದ್ದೂರಿಯಾಗಿ ಬಿಡುಗಡೆಯಾಗಲಿದೆ.

ಸಿನಿಮಾ ಬ್ಯೂರೋ, ಕರ್ನಾಟಕ ಟಿವಿ, ಬೆಂಗಳೂರು 

ಪ್ರಜ್ವಲ್ ದೇವರಾಜ್ ಮಾಫಿಯಾಗೆ ಎಂಟ್ರಿ..!

ಪ್ರಜ್ವಲ್ ದೇವರಾಜ್ ಮಾಫಿಯಾಗೆ ಎಂಟ್ರಿ..!

- Advertisement -

Latest Posts

Don't Miss