ಹೊಸ ವರ್ಷಾಕ್ಕೇ ಇನ್ನೇನು ದಿನಗಣನೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆಗೆ ನಗರದಲ್ಲಿ ಕಟ್ಟೆಚ್ಚರ ವಹಿಸುವಂತೆ ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ್ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಅಂದಹಾಗೆ ಇತ್ತೀಚಿನ ದಿನಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚಾಗಿದೆ. ಹೀಗಾಗಿ ಹೊಸ ವರ್ಷದ ಸಂದರ್ಭದಲ್ಲಿ ಶಾಂತಿಭಂಗವನ್ನುಂಟು ಮಾಡುವ ಸಾಧ್ಯತೆ ಇರುತ್ತದೆ. ಆದ್ರಿಂದ ಅಂತವರ ಮೇಲೆ ನಿಗಾವಹಿಸಿ, ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಿ ಅಂತ ಆದೇಶಿಸಿದ್ದರೆ.
ಹೊಸ ವರ್ಷಾಚರಣೆ ವಿರೋಧಿಸುವ ಸಂಘ ಸಂಸ್ಥೆಗಳ ಬಗ್ಗೆ ಗುಪ್ತವಾಗಿ ಮಾಹಿತಿ ಸಂಗ್ರಹಿಸಿ, ಮುನ್ನೆಚ್ಚರಿಕೆ ವಹಿಸಿ. ಮಾಲ್ ಗಳಲ್ಲಿ ಸಿಸಿ ಕ್ಯಾಮೆರಾಗಳು ಸುಸ್ಥಿತಿಯಲ್ಲಿ ಇಡುವಂತೆ ಅಲ್ಲಿನ ಸಿಬ್ಬಂದಿಗಳಿಗೆ ಸೂಚನೆ ನೀಡಿ. ಎಲ್ಲ ಅಧಿಕಾರಿಗಳು ಸರ್ವೀಸ್ ರಿವಾಲ್ವಾರ್ ಹೊಂದಿರಬೇಕು. ಪೊಲೀಸ್ ಸಿಬ್ಬಂದಿ ಹೆಲ್ಮೆಟ್, ಲಾಠಿಗಳನ್ನು ಹೊಂದಿರಬೇಕು. ಹೆಣ್ಣು ಮಕ್ಕಳನ್ನು ಚುಡಾಯಿಸುವವರ ಮೇಲೆ ಕೂಡಲೇ ಕ್ರಮ ಕೈಗೊಳ್ಳಿ. ರಸ್ತೆ ಮೇಲೆ ಬಾಟಲಿ ಹೊಡೆದು ದಾಂದಲೆ ಮಾಡುವವರನ್ನು ಕೂಡಲೇ ವಶಕ್ಕೆ ಪಡೆದು ಕ್ರಮಕೈಗೊಳ್ಳಿ ಅಂತ ಹೇಳಿದ್ರು.
ಇನ್ನು ಮದ್ಯ ಮಾರಾಟ ಜಾಗದಲ್ಲಿ ಗಲಾಟೆ, ದೊಂಬಿ, ಬಾಟಲಿ ಎಸೆಯುವುದು, ಮಹಿಳೆಯರ ಚುಡಾಯಿಸುವುದು ನಡೆದರೆ ಅದಕ್ಕೆ ಮಾಲೀಕರೇ ಹೊಣೆಗಾರರಾಗುತ್ತಾರೆ. ಜನ ಸೇರುವ ರಸ್ತೆ ಮತ್ತು ಪ್ರದೇಶಗಳಲ್ಲಿ ಸಿಸಿಟಿವಿ ಅಳವಡಿಸಿ. ರಸ್ತೆಗಳಲ್ಲಿ ವಿದ್ಯುತ್ ದೀಪಗಳು ಕೆಲಸ ಮಾಡುವಂತೆ ನೋಡಿಕೊಳ್ಳಬೇಕು. ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ಎಂ.ಜಿ.ರಸ್ತೆ ಸೇರಿದಂತೆ ಇತರೆಡೆ ಜನರ ಆಗಮನ ಮತ್ತು ನಿರ್ಗಮನಕ್ಕೆ ಸೂಕ್ತ ಕ್ರಮಕೈಗೊಳ್ಳಿ ಎಂದಿದ್ದಾರೆ.
ಅಲ್ಲದೇ ರೌಡಿಗಳ ಚಟುವಟಿಕೆಗಳ ಮೇಲೆ ನಿಗಾ ಇಡುವಂತೆ ಎಚ್ಚರಿಕೆ ನೀಡಿದೆ. ಪ್ರಮುಖ ರಸ್ತೆಗಳಲ್ಲಿ ವಾಹನ ನಿಲುಗಡೆ, ಪ್ರಮುಖ ಪ್ರೈಓವರ್‌ಗಳ ಮೇಲೆ ವಾಹನ ಸಂಚಾರ ನಿಷೇಧಿಸಿ. ಮತ್ತು ಠಾಣೆಯ ಹೊಯ್ಸಳ ಮತ್ತು ಚೀತಾಗಳು ಸದಾ ಗಸ್ತು ನಿರ್ವಹಿಸಬೇಕು ಎಂದು ಪೊಲೀಸ್ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ.
===================================