ಗುಣಮುಖರಾದ ಅಮಿತ್ ಷಾ, ಕೆಲ ದಿನಗಳ ಕಾಲ ಹೋಮ್‌ ಕ್ವಾರಂಟೈನ್‌ನಲ್ಲಿರಲು ಸೂಚನೆ..

ಕೊರೊನಾ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾಗೆ ಚಿಕಿತ್ಸೆ ಬಳಿಕ ಮತ್ತೊಮ್ಮೆ ಕೊರೊನಾ ಪರೀಕ್ಷೆ ನಡೆಸಿದ್ದು, ಕೊರೊನಾ ನೆಗೆಟಿವ್ ಎಂದು ವರದಿಯಾಗಿದೆ. ಈ ಹಿನ್ನೆಲೆ ಮನೆಯಲ್ಲೇ ಅವರನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ಅಮಿತ್ ಷಾ, ನನಗಿಂದು ಕೊರೊನಾ ಟೆಸ್ಟ್ ಮಾಡಿಸಿದಾಗ ನೆಗೆಟಿವ್ ವರದಿ ಬಂದಿದೆ. ದೇವರಿಗೆ ಧನ್ಯವಾದ ಹೇಳುತ್ತೇನೆ ಮತ್ತು ನನ್ನ ಕುಟುಂಬದವರಿಗೆ ಮತ್ತು ನನ್ನ ಆರೋಗ್ಯಕ್ಕಾಗಿ ಪ್ರಾರ್ಥಿಸಿದವರಿಗೆ ಧನ್ಯವಾದ ಹೇಳುತ್ತೇನೆ. ಅಲ್ಲದೇ ಕೆಲ ದಿನಗಳ ಕಾಲ ಮನೆಯಲ್ಲೇ ಕ್ವಾರಂಟೈನ್ ಆಗಿರುತ್ತೇನೆ ಎಂದಿದ್ದಾರೆ.

ಇನ್ನೊಂದೆಡೆ ಗಾಯಕ ಎಸ್‌.ಪಿ.ಬಾಲಸುಬ್ರಹ್ಮಣ್ಯ ಆರೋಗ್ಯ ಕೂಡ ಗಂಭೀರ ಸ್ಥಿತಿಯಲ್ಲಿದ್ದು, ಅವರು ಆದಷ್ಟು ಬೇಗ ಸುಧಾರಿಸಿಕೊಳ್ಳಲಿ ಎಂದು ಸಚಿವ ಡಾ.ಸುಧಾಕರ್ ಟ್ವೀಟ್ ಮಾಡಿದ್ದಾರೆ. ಸಂಗೀತ ಕ್ಷೇತ್ರದ ದಿಗ್ಗಜ, ಖ್ಯಾತ ಗಾಯಕ ಎಸ್​.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಆಗಸ್ಟ್‌5 ರಂದು ಕೋವಿಡ್‌ ಪಾಸಿಟವ್‌ನಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿರುವ ಎಸ್‌ಪಿಬಿ ಬೇಗ ಗುಣಮುಖರಾಗಲಿಎಂದು ದೇವರಲ್ಲಿ ನಮ್ರವಾಗಿ ಪ್ರಾರ್ಥಿಸುತ್ತೇನೆ ಎಂದು ಸುಧಾಕರ್ ಟ್ವೀಟ್ ಮಾಡಿದ್ದಾರೆ.

About The Author