ನಮಸ್ತೆ ಟ್ರಂಪ್ ಕಾರ್ಯಕ್ರಮದ ಮೂಲಕ ಪ್ರಧಾನಿ ಮೋದಿ ದೇಶದಲ್ಲಿ ಕರೊನಾಗೆ ಆಹ್ವಾನ ನೀಡಿದ್ದಾರೆ ಅಂತಾ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಚಂದ್ರಾ ರೆಡ್ಡಿ ಆರೋಪಿಸಿದ್ರು.

ಬೇತಮಂಗಲದಲ್ಲಿ ಆರೋಗ್ಯ ಹಸ್ತ ಯೋಜನೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವ್ರು, ವಿಶ್ವಾದ್ಯಂತ ಕರೊನಾ ವ್ಯಾಪಕವಾಗಿ ಹರಡುತ್ತಿದೆ. ದೇಶದಿಂದ ಕರೊನಾ ದೂರ ಮಾಡುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಅಂತಾ ಗುಡುಗಿದ್ರು.
ರಾಜ್ಯದ ಜನರ ಆರೋಗ್ಯ ದೃಷ್ಠಿಯಿಂದ ಕೆಪಿಸಿಸಿ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಆರೋಗ್ಯ ಹಸ್ತ ಯೋಜನೆ ಜಾರಿಗೆ ತಂದಿದೆ. ಈ ಮೂಲಕ ಪ್ರತಿಯೊಬ್ಬರ ಆರೋಗ್ಯ ಪರೀಕ್ಷೆ ಮತ್ತು ಚಿಕಿತ್ಸೆಗೆ ಕಾಂಗ್ರೆಸ್ ಮುಂದಾಗಿದೆ. ಕಾಂಗ್ರೆಸ್ ಕಾರ್ಯಕರ್ತರ ನೇತೃತ್ವದಲ್ಲಿ ವೈದ್ಯರು ಪ್ರತಿ ಮನೆ ಮನೆಗೆ ಭೇಟಿ ನೀಡಿ ಆರೋಗ್ಯ ಪರೀಕ್ಷೆ ಮಾಡಲಿದ್ದಾರೆ ಅಂತಾ ಹೇಳಿದ್ರು.
ಇನ್ನು ಇದೇ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಶಾಸಕಿ ಎಂ. ರೂಪಕಲಾ ಕರೊನಾ ವಿಚಾರದಲ್ಲಿ ದೇಶಕ್ಕೆ ಕೇರಳ ಮಾದರಿಯಾಗಿದೆ ಅಂತಾ ಹೇಳಿದ್ರು.
ಇನ್ನು ಕಾರ್ಯಕ್ರಮದಲ್ಲಿ ಎಪಿಎಂಸಿ ಅಧ್ಯಕ್ಷ ವಿಜಯರಾಘವ ರೆಡ್ಡಿ, ಮಾಜಿ ಅಧ್ಯಕ್ಷ ವಿಜಯಶಂಕರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅ.ಮು ಲಕ್ಷ್ಮಿನಾರಾಯಣ್, ನಾರಾಯಣ ಸ್ವಾಮಿ, ಎಪಿಎಂಸಿ ನಿರ್ದೇಶಕ ರಾಮಚಂದ್ರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಕೃಷ್ಣಾ ರೆಡ್ಡಿ, ನಗರ ಅಧ್ಯಕ್ಷ ಮುದಲೈಮುತ್ತು, ವಕೀಲ ಪದ್ಮನಾಭರೆಡ್ಡಿ, ಮಂಜು, ಮುಖಂಡ ಅಯ್ಯಪಲ್ಲಿ ಮಂಜು, ದುರ್ಗಾಪ್ರಸಾದ್, ಶ್ರೀಧರ ರೆಡ್ಡಿ, ವಿಎಸ್‍ಎಸ್‍ಎನ್ ಅಧ್ಯಕ್ಷ ಶಂಕರ್, ನಿರ್ದೇಶಕ ಸುರೇಂದ್ರಗೌಡ ಉಪಸ್ಥಿತರಿದ್ದರು

ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.