ಮಾಜಿ ಸಿಎಂ ಸಿದ್ದರಾಮಯ್ಯರಿಗೂ ಕೊರೊನಾ ಪಾಸಿಟಿವ್ ಬಂದಿದ್ದು, ಈ ಬಗ್ಗೆ ಸ್ವತಃ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಸ್ಪಷ್ಟ ಪಡಿಸಿದ್ದಾರೆ.

ನನ್ನ ಕೊರೊನ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ.
ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಮೊನ್ನೆ ರಾತ್ರಿಯಷ್ಟೇ ಸಿಎಂ ಯಡಿಯೂರಪ್ಪಗೂ ಕೊರೊನಾ ತಗುಲಿದ್ದು, ಸಿಎಂ ಕೂಡ ಈ ಬಗ್ಗೆ ಟ್ವೀಟ್ ಮೂಲಕ ತಿಳಿಸಿದ್ದರು. ಇದೀಗ ಯಡಿಯೂರಪ್ಪ ಮತ್ತು ಸಿದ್ದರಾಮಯ್ಯ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ನಿನ್ನೆ ಸಿಎಂ ಯಡಿಯೂರಪ್ಪ ಮಗ ವಿಜಯೇಂದ್ರ ಟ್ವೀಟ್ ಮೂಲಕ ಅಪ್ಪನ ಆರೋಗ್ಯ ಚೆನ್ನಾಗಿದೆ ಎಂದು ಸ್ಪಷ್ಟಪಡಿಸಿದ್ದು, ಸಿಎಂ ಆಸ್ಪತ್ರೆಯಲ್ಲಿ ಟೈಮ್‌ಪಾಸ್‌ಗಾಗಿ ಕೆಲವು ಪುಸ್ತಕಗಳನ್ನು ತಂದು ಓದಿಕೊಳ್ಳುತ್ತಿದ್ದಾರಂತೆ.




