Tuesday, August 5, 2025

Latest Posts

ಮಹಾರಾಷ್ಟ್ರದಲ್ಲಿ ಈ ಬಾರಿ ಅದ್ಧೂರಿ ಗಣೇಶೋತ್ಸವವಿಲ್ಲ..!

- Advertisement -

ಕೊರೊನಾ ಮಹಾಮಾರಿ ಕಾರಣದಿಂದ ಈ ಬಾರಿ ಮಹಾರಾಷ್ಟ್ರದಲ್ಲಿ ಅದ್ಧೂರಿ ಗಣೇಶೋತ್ಸವ ನಡೆಯುವುದಿಲ್ಲ.

ಮಹಾರಾಷ್ಟ್ರದ ನಾಡಹಬ್ಬವಾಗಿರುವ ಗಣೇಶ ಚತುರ್ಥಿಯನ್ನು ಪ್ರತಿವರ್ಷ ಭಾರೀ ಅದ್ಧೂರಿಯಿಂದ ಆಚರಿಸಲಾಗುತ್ತಿತ್ತು. 9 ದಿನಗಳ ಕಾಲ ಅದ್ಧೂರಿ ಹಬ್ಬ ಆಚರಿಸಿ, ಜಾತ್ರೆಯಂತೆ ಗಣೇಶನನ್ನು ಬೀಳ್ಕೊಡುತ್ತಿದ್ದರು.

ಆದ್ರೆ ಈ ಬಾರಿ ಕೊರೊನಾ ಸೋಂಕು ಹರಡುವ ಭೀತಿಯಿಂದ ಮಹಾರಾಷ್ಟ್ರದ ಫೇಮಸ್ ಗಣೇಶ ಮಂಡಳಿಯಾದ ಲಾಲ್‌ಬಾಗ್‌ ಚಾ ರಾಜಾ ಗಣೇಶ ಮಂಡಳಿ ಘೋಷಣೆ ಮಾಡಿದೆ.

ಅಲ್ಲದೇ ಸಿಎಂ ಉದ್ಧವ್ ಠಾಕ್ರೆ ಕೂಡ ಮಹಾರಾಷ್ಟ್ರದಲ್ಲಿ ಈ ಬಾರಿ ದೊಡ್ಡ ದೊಡ್ಡ ಗಣಪತಿ ಕೂರಿಸುವ ಹಾಗಿಲ್ಲ ಎಂದು ಸೂಚನೆ ನೀಡಿದ್ದಾರೆ.

ಕಳೆದ ವರ್ಷ ಚಂದ್ರಯಾನ 2 ವಿಶೇಷವಾಗಿ ನಿರ್ಮಿಸಿದ್ದ ಗಣೇಶನ ವಿಗ್ರಹ ಭಾರಿ ಸುದ್ದಿಯಾಗಿತ್ತು. ಸೆಪ್ಟೆಂಬರ್‌ನಲ್ಲೇ ಗಣೇಶ ಚತುರ್ಥಿ ಬರುವುದರಿಂದ, ಈಗಾಗಲೇ ಮಹಾರಾಷ್ಟ್ರದಲ್ಲಿ ಹಲವೆಡೆ ಗಣಪತಿ ಮೂರ್ತಿಯನ್ನ ನಿರ್ಮಿಸುವ ಕಾರ್ಯ ಆರಂಭವಾಗಿದೆ.

ವರ್ಷದ ಮೊದಲ ಹಬ್ಬವಾದ ಯುಗಾದಿ ಹಬ್ಬವೇ ಕೊರೊನಾ ಭೀತಿಯಿಂದ ಸಪ್ಪೆಯಾಗಿ ಹೋಯಿತು.ಇದೀಗ ಕೆಲವೇ ದಿನಗಳಲ್ಲಿ ಶ್ರಾವಣ ಮಾಸ ಆರಂಭವಾಗುತ್ತಿದ್ದು, ಸಾಲು ಸಾಲು ಹಬ್ಬಗಳು ಬರುತ್ತದೆ. ನಾಗರಪಂಚಮಿ, ಗಣೇಶ ಚತುರ್ಥಿ, ದಸರಾ, ದೀಪಾವಳಿ ಈ ಎಲ್ಲ ಹಬ್ಬಗಳನ್ನ ಕೊರೊನಾ ಕಾರಣದಿಂದ ಸಿಂಪಲ್‌ ಆಗಿಯೇ ಆಚರಿಸಬೇಕಾದ ಪರಿಸ್ಥಿತಿ ಇದೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

- Advertisement -

Latest Posts

Don't Miss