Hubli News: ಹುಬ್ಬಳ್ಳಿ: ಹೂಬಳ್ಳಿಯಂತೆ ಶಾಂತಿ ಹಾಗೂ ಸೌಹಾರ್ದತೆಯಿಂದ ಇರಬೇಕಿದ್ದ ನಗರ. ವಾಣಿಜ್ಯ ಚಟುವಟಿಕೆಗಳ ಮೂಲಕ ಹೆಸರು ಮಾಡಿದ್ದ ಈ ನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ನೆತ್ತರು ಹರಿಯುತ್ತಿದೆ. ಪುಡಿರೌಡಿಗಳ ಹಾವಳಿ ಒಂದು ಕಡೆಯಾದರೇ, ಮತ್ತೊಂದು ಕಡೆಯಲ್ಲಿ ಜನಸಾಮಾನ್ಯರೂ ಕೂಡ ಕ್ರೈಮ್ ಪ್ರಕರಣದಲ್ಲಿ ಭಾಗಿಯಾಗುತ್ತಿರುವುದು ಆತಂಕ ಸೃಷ್ಟಿಸಿದೆ.
ಹುಬ್ಬಳ್ಳಿ ಧಾರವಾಡ ಅವಳಿನಗರದ ಲಾ ಆ್ಯಂಡ್ ಆರ್ಡರ್ ವ್ಯವಸ್ಥೆ ಹಳ್ಳ ಹಿಡಿದಂತಾಗಿದೆ. ನಿಯಮಗಳನ್ನು
ಜಾರಿಗೊಳಿಸಿದರೂ ಕೂಡ ಅವಳಿನಗರದ ಲಗಾಮು ಪೊಲೀಸರ ಕೈಗೆ ಸಿಗದೇ ಇರುವುದರಿಂದ ಗೃಹ ಇಲಾಖೆ ಆಟಕ್ಕೆ ಉಂಟು ಲೆಕ್ಕಕ್ಕೆ ಇಲ್ಲದಂತಾಗಿದೆ. ಹೌದು, ಅವಳಿನಗರದಲ್ಲಿ ದಿನವೊಂದಕ್ಕೂ ಕೊಲೆ, ದರೋಡೆ, ಚಾಕು ಇರಿತ, ಮೀಟರ್ ಬಡ್ಡಿ ಕುಳಗಳ ಅಟ್ಟಹಾಸ ಮಿತಿಮೀರಿದೆ. ರೌಡಿಗಳ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೊಲೆ ಪ್ರಕರಣಗಳ ಸಂಖ್ಯೆ ಏರುತ್ತಿದೆ.
ಚಾಕು, ಚೂರಿ, ತಲ್ವಾರ್, ಮತ್ತಿತರ ಮಾರಕಾಸ್ತ್ರಗಳು ಆಟಿಕೆಯಂತಾಗಿವೆ. ಸಾಮಾನ್ಯರೂ ಸಲೀಸಾಗಿ ಅಪರಾಧ ಕೃತ್ಯದಲ್ಲಿ ಭಾಗಿಯಾಗುತ್ತಿದ್ದಾರೆ. ಕಳೆದ ಒಂದು ವಾರದಲ್ಲಿ ಮೂರು ಕೊಲೆಗಳಾದ್ರೆ, ಒಂದೇ ದಿನದಲ್ಲಿ ಎರಡು ಕೊಲೆ ನಡೆದಿರುವುದು ಜನರಲ್ಲಿ ಆತಂಕ ಸೃಷ್ಟಿಸಿದೆ. ಒಂದು ಕೌಟುಂಬಿಕ ಕಲಹದ ಕೊಲೆಯಾದರೇ ಮತ್ತೊಂದು ಕ್ಷುಲ್ಲಕ ಕಾರಣಕ್ಕೆ ಮಾರಕಾಸ್ತ್ರಗಳಿಂದ ಕೊಲೆಯಾಗಿದ್ದು ನಿಜಕ್ಕೂ ವಿಪರ್ಯಾಸಕರ ಸಂಗತಿಯಾಗಿದೆ.
ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಕೊಲೆ ಹಾಗೂ ಕಾನೂನು ಬಾಹಿರ ಕೃತ್ಯಗಳು ರಾಜ್ಯವನ್ನೇ ಬೆಚ್ಚಿ ಬೀಳಿಸುತ್ತಿವೆ. ಹಳೇ ಹುಬ್ಬಳ್ಳಿ ಕೋಮು ಗಲಭೆ ನಂತರ ಹುಬ್ಬಳ್ಳಿಯಲ್ಲಿ ಮೇಲಿಂದ ಮೇಲೆ ನೆತ್ತರು ಹರಿಯುತ್ತಲೇ ಇದೆ. ಹೀಗಿದ್ದರೂ ಪೊಲೀಸ್ ಇಲಾಖೆ ಮಾತ್ರ ಯಾವುದೇ ಕಠಿಣ ಕ್ರಮಗಳನ್ನು ಜರುಗಿಸುತ್ತಿಲ್ಲ. ಚುನಾವಣೆ ಸಮೀಪಿಸುತ್ತಿದ್ದಂತೆಯೇ ಹೈ ಅಲರ್ಟ್ ಆಗುವ ಖಾಕಿ ರೌಡಿಶೀಟರ್ ಗಡಿಪಾರು ಮಾಡುತ್ತದೇ. ಆದರೆ ರೌಡಿಶೀಟರ್ ಕಡಿವಾಣ ಮಾತ್ರ ಸಾಧ್ಯವಾಗುತ್ತಿಲ್ಲ. ಆದರೆ ಪೊಲೀಸ್ ಆಯುಕ್ತರು ಮಾತ್ರ ಯಾವುದೇ ಕೇಸ್‌ನ್ನು ಕೈ ಬಿಟ್ಟಿಲ್ಲ ಎನ್ನುತ್ತಾರೆ.
ಕ್ರೈಂ ಪ್ರಕರಣಗಳು ಹೆಚ್ಚುತ್ತಿದ್ದು, ಜನರು ಯಾವ ಸಮಯದಲ್ಲಿ ಏನಾಗುತ್ತದೆಯೋ ಎಂಬುವಂತ
ಆತಂಕದಲ್ಲಿಯೇ ಜೀವನ ನಡೆಸುವಂತಾಗಿದೆ. ಇನ್ನಾದರೂ ರಾಜ್ಯದ ಗೃಹ ಸಚಿವರು ಹಾಗೂ ಪೊಲೀಸ್ ಕಮಿಷನರೇಟ ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಜರುಗಿಸಬೇಕಿದೆ.
ಈಗ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದವರ ಮನೆ ಮೇಲೂ ಅಟ್ಯಾಕ್ ಮಾಡಲಿದೆ ಬುಲ್ಡೋಜರ್
ಮದುವೆಯಾಗಿ ಒಂದೇ ತಿಂಗಳಲ್ಲಿ ಕೋಟಿ ಕೋಟಿ ಸಾಲದಲ್ಲಿ ಮುಳುಗಿದ ನಟಿಯ ಗಂಡ: ಆಸ್ತಿ ಮಾರಾಟ