ಕೋಲಾರ : ಕೊರೊನಾ ಲಾಕ್ ಡೌನ್‌ನಿಂದಾಗಿ ಜನರು ಕೆಲಸ ಕಳೆದುಕೊಂಡು ಕೈಯಲ್ಲಿ ಹಣವಿಲ್ಲದೆ ಪರದಾಡುತ್ತಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿಯೂ ಕೋಲಾರದಲ್ಲಿ ಕಂತೆ ಕಂತೆ ನೋಟಿನ ರಾಶಿ ಸಿಕ್ಕಿದೆ. ಆಂಧ್ರ ಪ್ರದೇಶಕ್ಕೆ ಹೋಗುತ್ತಿದ್ದ ಕಾರಿನಲ್ಲಿ 2.94 ಕೋಟಿ ಹಣ ಸಿಕ್ಕಿದೆ.

ದಾಖಲೆಗಳಿಲ್ಲದೆ ಹಣ ಸಾಗಿಸುತ್ತಿದ್ದ ಕಾರನ್ನು ಶ್ರೀನಿವಾಸಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ರೋಜರನಹಳ್ಳಿ ಬಳಿ ಕಾರನ್ನು ಜಪ್ತಿ ಮಾಡಲಾಗಿದೆ.
ಕೋಲಾರ ಮೂಲದ ಚಂದ್ರಶೇಖರ್ ಹಾಗೂ ಅಮರನಾಥ್ ಎಂಬುವವರು ಕಾರಿನಲ್ಲಿ ಹಣದೊಂದಿಗೆ ಆಂಧ್ರಕ್ಕೆ ತೆರಳುತ್ತಿದ್ದರು, ಈ ವೇಳೆ ಖಚಿತ ಮಾಹಿತಿ ಪಡೆದ ಪೊಲೀಸರು ಕಾರನ್ನು ಬೆನ್ನತ್ತಿ ಹಿಡಿದಿದ್ದಾರೆ. ಕಾರಿನಲ್ಲಿ ಇಷ್ಟೊಂದು ಮೊತ್ತದ ಹಣವನ್ನು ನೋಡಿ ಪೊಲೀಸರೇ ದಂಗಾಗಿ ಹೋಗಿದ್ದಾರೆ.
ಜಪ್ತಿ ಮಾಡಿರುವ ಹಣದಲ್ಲಿ 2 ಸಾವಿರ ನೋಟುಗಳೇ ಹೆಚ್ಚಿವೆ. ಈ ನೋಟುಗಳನ್ನು 500 ಮುಖ ಬೆಲೆ ನೋಟಿಗೆ ಬದಲಾಯಿಸಿಕೊಳ್ಳಲು ಆಂಧ್ರಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.
ಇನ್ನು ಕಾರಿನಲ್ಲಿ ಮೂವರು ತೆರಳುತ್ತಿದ್ದರು, ಪೊಲೀಸರು ಬೆನ್ನತ್ತಿದಾಗ ಓರ್ವ ತಪ್ಪಿಸಿಕೊಂಡು ಓಡಿ ಹೋಗಿದ್ದಾನೆ. ಶ್ರೀನಿವಾಸಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕೋಲಾರ ಎಸ್.ಪಿ ಕಾರ್ತಿಕ್ ರೆಡ್ಡಿ ಪೊಲೀಸ್ ಠಾಣೆಗೆ ತೆರಳಿ ತನಿಖೆ ನಡೆಸಿದ್ದಾರೆ. ಎಸ್ಕೇಪ್ ಆಗಿರುವ ಆರೋಪಿಯ ಬಂಧನಕ್ಕೆ ಪೊಲೀಸರು ಮುಂದಾಗಿದ್ದಾರೆ.
ನಾಗೇಶ್ ಹುಳದೇನಹಳ್ಳಿ ಕರ್ನಾಟಕ ನ್ಯೂಸ್ ಕೋಲಾರ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.




