ತುಮಕೂರು: ಕುಣಿಗಲ್ ಶಾಸಕ ಡಾ.ರಂಗನಾಥ್‌ರನ್ನ ಕ್ವಾರಂಟೈನ್ ಮಾಡಲಾಗಿದೆ. ತುಮಕೂರು ಜಿಲ್ಲೆ ಕುಣಿಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಡಾ ರಂಗನಾಥ್ ನಿನ್ನೆಯಷ್ಟೇ ಪೊಲೀಸರೊಂದಿಗೆ ಸಭೆ ನಡೆಸಿದ್ದರು. ಆ ಪೊಲೀಸರ ಪೈಕಿ ಓರ್ವರಿಗೆ ಕರೋನಾ ಪಾಸಿಟಿವ್ ದೃಢಪಟ್ಟಿದೆ. ಹೀಗಾಗಿ ಶಾಸಕರನ್ನು ಕ್ವಾರಂಟೈನ್ ಮಾಡಲಾಗಿದೆ.

ಬೆಂಗಳೂರಿನ ತಮ್ಮ ನಿವಾಸದಲ್ಲಿ ಶಾಸಕ ಡಾಕ್ಟರ್ ರಂಗನಾಥ್ ಹೋಂ ಕ್ವಾರಂಟೈನ್ ನಲ್ಲಿದ್ದಾರೆ. ನಿನ್ನೆಯಷ್ಟೇ ಕುಣಿಗಲ್ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿತ್ತು. ಅಲ್ಲದೆ ಇತ್ತೀಚೆಗೆ ಶಾಸಕರು ಕೊರೋನಾದಿಂದ ಮೃತಪಟ್ಟಿದ್ದ ವ್ಯಕ್ತಿಯ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು . ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಶಾಸಕರು ಕ್ವಾರಂಟೈನ್ ನಲ್ಲಿದ್ದಾರೆ.
ಇನ್ನೊಂದೆಡೆ ಅಪರಾಧ ಪ್ರಕರಣವೊಂದರಲ್ಲಿ ಭಾಗಿಯಾಗಿ ಜೈಲು ಸೇರಿದ್ದ ಕೈದಿಯೊಬ್ಬರಿಗೆ ಕರೋನ ಪಾಸಿಟಿವ್ ದೃಢಪಟ್ಟಿದೆ. ತುಮಕೂರು ನಗರದ ಊರುಕೆರೆಯಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಬಂಧಿಯಾಗಿದ್ದ ಕೈದಿ. ಈ ನಿಟ್ಟಿನಲ್ಲಿ ಇದೀಗ ಜೈಲು ಸಿಬ್ಬಂದಿಗಳಲ್ಲಿ ಮತ್ತು ಇತರೆ ಕೈದಿಗಳಲ್ಲಿ ಆತಂಕ ಮನೆ ಮಾಡಿದೆ.
ಜೂ.29 ರಂದು ಖೈದಿಯ ಗಂಟಲು ದ್ರವ ಪರೀಕ್ಷೆ ನಡೆಸಲಾಗಿತ್ತು. ಆತನ ವರದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಸದ್ಯ ಜಿಲ್ಲಾಡಳಿತ ಪ್ರಾಥಮಿಕ ಸಂಪರ್ಕ ಪತ್ತೆಗೆ ಮುಂದಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ಆತನಿಗೆ ಚಿಕಿತ್ಸೆ ಮುಂದುವರಿದಿದೆ.
ಕಾಂತರಾಜು, ಕರ್ನಾಟಕ ಟಿವಿ, ತುಮಕೂರು

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.