ಬೆಂಗಳೂರು: ಪ್ರೇಮಿಗಳ ನಡುವೆ ನಡೆದಿದ್ದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಾಮಮೂರ್ತಿನಗರದ ಟಿಸಿ ಪಾಳ್ಯದಲ್ಲಿ ಈ ಘಟನೆ ನಡೆದಿದ್ದು, ನೇಪಾಳ ಮೂಲದ ಯುವತಿಯನ್ನು, ನೇಪಾಳ ಮೂಲದ ಯುವಕ ಕೊಲೆ ಮಾಡಿದ್ದಾರೆ.
ಮದುವೆ ನಿಶ್ಚಯವಾಗಿದ್ದ ಹುಡುಗನ ಜೊತೆ ತೆರಳಿದ್ದಅಪ್ರಾಪ್ತ ಬಾಲಕಿ ಅನುಮಾನಾಸ್ಪದ ಸಾವು
ನೇಪಾಳ ಮೂಲದ ಕೃಷ್ಣಕುಮಾರಿ (23) ಕೊಲೆಯಾದ ಯುವತಿಯಾಗಿದ್ದು, ನೇಪಾಳದ , ಸಂತೋಷ್ ದಾಮಿ (27) ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಹೊರಮಾವು ಯೂನಿಸೆಕ್ಸ್ ಸ್ಪಾ ದಲ್ಲಿ ಕೃಷ್ಣಕುಮಾರಿ ಬ್ಯೂಟಿಷಿಯನ್ ಆಗಿದ್ದಳು. ಟಿಸಿ ಪಾಳ್ಯದಲ್ಲಿ ಬಾರ್ಬರ್ ಶಾಪ್ ನಲ್ಲಿ ಸಂತೋಷ್ ದಾಮಿ ಕೆಲಸ ಮಾಡುತ್ತಿದ್ದ. ಇಬ್ಬರಿಗೂ ಪರಿಚಯವಾಗಿ ಪ್ರೇಮಾಂಕುರವಾಗಿತ್ತು.
ಮನೆ ಬಳಕೆಯ ಸಿಲಿಂಡರ್ ಸ್ಫೋಟ, ಒಂದೇ ಕುಟುಂಬದ ನಾಲ್ವರಿಗೆ ಗಂಭೀರ ಗಾಯ
ಹಾಗಾಗಿ ಒಂದೇ ರೂಂ ಬಾಡಿಗೆ ಪಡೆದು ಲೀವಿಂಗ್ ರಿಲೇಷನ್ ಶಿಪ್‌ನಲ್ಲಿದ್ದರು. ರಾಮೂರ್ತಿನಗರದ ಟಿಸಿ ಪಾಳ್ಯದಲ್ಲಿ ರೂಂ ಬಾಡಿಗೆ ಪಡೆದಿದ್ದರು. ಇಂದು ಬೆಳಿಗ್ಗೆ ಇಬ್ಬರ ನಡುವೆ ಜಗಳವಾಗಿದೆ. ಜಗಳ ತಾರಕ್ಕೇರಿದ್ದು ಕೃಷ್ಣಕುಮಾರಿ ಕೊಲೆಯಲ್ಲಿ ಅಂತ್ಯವಾಗಿದೆ. ಘಟನೆ ಸಂಬಂಧ ರಾಮಮೂರ್ತಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದೆ.