- Advertisement -
ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ದಾಳಿಯಲ್ಲಿ ಭಾರತೀಯ ಸೇನೆಯ ಜ್ಯೂನಿಯರ್ ಕಮಿಷನ್ಡ್ ಆಫೀಸರ್ ಹುತಾತ್ಮರಾಗಿದ್ದಾರೆ.
ಕದನ ವಿರಾಮ ಉಲ್ಲಂಘಿಸಿ ಕೇರಿ ಸೆಕ್ಟರ್ನ ಫಾರ್ವಡ್ ಪೋಸ್ಟ್ಗಳ ಮೇಲೆ ಪಾಕಿಸ್ತಾನ ಸೈನಿಕರು ಗುಂಡಿನ ಸುರಿಮಳೆಗೈದಿದ್ದಾರೆ. ದಾಳಿ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಜೆಸಿಓ ಬಳಿಕ ಮೃತ ಪಟ್ಟಿದ್ದಾರೆ ಅಂತಾ ರಕ್ಷಣಾ ಮೂಲಗಳು ಮಾಹಿತಿ ನೀಡಿವೆ.
ಇನ್ನು ಪಾಕ್ ಸೇನೆಯ ದಾಳಿಗೆ ಭಾರತೀಯ ಸೇನೆ ಕೂಡ ತಕ್ಕ ಪ್ರತ್ಯುತ್ತರ ನೀಡಿದೆ. ಅಪ್ರಚೋದಿತ ಗುಂಡಿನ ದಾಳಿ ವೇಳೆ ಪಾಕ್ ಸೇನೆಯಲ್ಲೂ ಸಾವು ನೋವು ಸಂಭವಿಸಿದ್ದು ನಿಖರ ದಾಖಲೆ ಇನ್ನಷ್ಟೇ ದೊರಕಬೇಕಿದೆ. ಕಳೆದ ನಾಲ್ಕು ದಿನಗಳಲ್ಲಿ ಪಾಕ್ನಿಂದ ನಡೆದ ಎರಡನೇ ಕದನ ವಿರಾಮ ಉಲ್ಲಂಘನೆ ಇದಾಗಿದೆ
- Advertisement -