ಸೆಪ್ಟೆಂಬರ್ 26ರಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಅಧಿವೇಶನ ನಡೆಯಲಿದೆ. ಸಭೆಯಲ್ಲಿ ಮಾತನಾಡುವವರ ನಾಯಕರ ತಾತ್ಕಾಲಿಕ ಪಟ್ಟಿ ಸಿದ್ಧವಾಗಿದ್ದು ಇದರ ಪ್ರಕಾರ ಪ್ರಧಾನಿ ಮೋದಿ ಭಾಷಣ ಮಾಡುವ ಸಾಧ್ಯತೆ ಇದೆ.
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 75ನೇ ಅಧಿವೇಶನ ಇದಾಗಿದೆ, ಇನ್ನು ಭಾಷಣ ಮಾಡುವವರ ತಾತ್ಕಾಲಿಕ ಪಟ್ಟಿಯಲ್ಲಿ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸೊನಾರೊ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್, ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್, ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್, ಇರಾನ್ ಅಧ್ಯಕ್ಷ ಹಸನ್ ರೌಹಾನಿ, ಫ್ರಾನ್ಸ್ ಅಧ್ಯಕ್ಷ ಎಮ್ಯಾನುವಲ್ ಮ್ಯಾಕ್ರನ್ ಹೆಸರು ಕೂಡ ಇದೆ. ಆದರೆ, ಈ ಪಟ್ಟಿ ತಾತ್ಕಾಲಿಕವಾಗಿದ್ದು ಪರಿಷ್ಕರಣೆ ಆಗುವ ಸಾಧ್ಯತೆಗಳೂ ಇವೆ.
ಇನ್ನು ಕರೊನಾ ಮಹಾಮಾರಿ ಹಿನ್ನೆಲೆ ಇದೇ ಮೊದಲ ಬಾರಿಗೆ ವಿಶ್ವಸಂಸ್ಥೆ ಸಾಮಾನ್ಯ ಅಧಿವೇಶನ ಈ ಬಾರಿ ವಿಡಿಯೋ ಕಾನ್ಪರೆನ್ಸ್ ಮೂಲಕ ನಡೆಯಲಿದೆ. ಸಾಮಾನ್ಯ ಸಭೆ ಅಧಿವೇಶನ ಈ ತಿಂಗಳ 22ರಿಂದ 27ನೇ ತಾರೀಖಿನವರೆಗೆ ನಡೆಯಲಿದೆ