ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹತ್ಯೆ ಪ್ರಕಣದ ಅಪರಾಧಿ ನಳಿನಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ. ನಳಿನಿ ಕಳೆದ 29 ವರ್ಷದಿಂದ ಜೈಲಿನಲ್ಲಿದ್ದು, ಮಾನಸಿಕವಾಗಿ ಕುಗ್ಗಿದ್ದು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆನ್ನಲಾಗಿದೆ.

ಕೆಲ ದಿನಗಳ ಹಿಂದೆ ನಳಿನಿ ಮತ್ತು ಜೈಲಿನ ಇನ್ನೊಂದು ಖೈದಿಗೆ ಜಗಳ ನಡೆದಿದ್ದು, ಈ ಜಗಳ ತಾರಕಕ್ಕೇರಿತ್ತು. ಈ ಬಗ್ಗೆ ಇನ್ನೋರ್ವ ಖೈದಿ ಜೈಲಾಧಿಕಾರಿಗೆ ತಿಳಿಸಿದ್ದು, ಈ ವೇಳೆ ನಳಿನಿ ಆತ್ಮಹತ್ಯೆಗೆ ಯತ್ನಿಸಿದ್ದಾರೆನ್ನಲಾಗಿದೆ.
ರಾಜೀವ್ ಗಾಂಧಿ ಕೊಲೆಯ ಮತ್ತೋರ್ವ ಅಪರಾಧಿ ಮತ್ತು ನಳಿನಿ ಪತಿಯಾಗಿರುವ ಮುರುಗನ್ ನಳಿನಿಯನ್ನ ಬೇರೆ ಜೈಲಿಗೆ ಸ್ಥಳಾಂತರಿಸುವಂತೆ ಕೋರಿದ್ದಾರೆ.
1991ರಲ್ಲಿ ರಾಜೀವ್ ಗಾಂಧಿ ಚುನಾವಣೆ ಪ್ರಚಾರಕ್ಕಾಗಿ ಶ್ರೀಪೆರುಂಬುದೂರ್‌ನಲ್ಲಿ ರ್ಯಾಲಿ ನಡೆಸಿದಾಗ, ಈ ವೇಳೆ ಆತ್ಮಾಹುತಿ ದಾಳಿ ನಡೆದಿದ್ದು, ಈ ದಾಳಿಯಲ್ಲಿ ರಾಜೀವ್ ಗಾಂಧಿ ಸಾವನ್ನಪ್ಪಿದ್ದರು. ಈ ಪ್ರಕರಣಕ್ಕೆ ಸೇರಿದಂತೆ ನಳಿನಿ ಸೇರಿ ಏಳು ಜನರನ್ನು ಬಂಧಿಸಲಾಗಿತ್ತು. ಈ ಮೊದಲು ಅಪರಾಧಿಗಳಿಗೆಲ್ಲ ಗಲ್ಲು ಶಿಕ್ಷೆ ವಿಧಿಸಿದ್ದು, ಈ ಬಗ್ಗೆ ನ್ಯಾಯಾಲಯದ ಮೋರೆ ಹೋಗಿ ಶಿಕ್ಷೆ ಕಡಿಮೆ ಮಾಡಲು ಬೇಡಿದಾಗ, ಜೀವಾವಧಿ ಶಿಕ್ಷೆಯಾಗಿ ಬದಲಾಯಿಸಲಾಯಿತು.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.