ಮಹಾಮಾರಿ ಕೊರೊನಾ ತಗುಲಿ, ಇದೀಗ ಚಿಕಿತ್ಸೆ ಪಡೆದು ಗುಣಮುಖರಾಗಿರುವ ಸುಮಲತಾ ಅಂಬರೀಶ್, ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಇತ್ತೀಚಿನ ಸುಮಲತಾರ ಫೋಟೋವನ್ನ ಮಗ ಅಭಿಷೇಕ್ ಅಂಬರೀಷ್ ಶೇರ್ ಮಾಡಿಕೊಂಡಿದ್ದಾರೆ.

ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಅಮ್ಮನ ಫೋಟೋ ಶೇರ್ ಮಾಡಿಕೊಂಡಿರುವ ಅಭಿಷೇಕ್ ಅಂಬರೀಷ್, mommy distancing ಎಂದು ಬರೆದುಕೊಂಡಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಸುಮಲತಾ ಅಂಬರೀಷ್ಗೆ ಕೊರೊನಾ ಮಹಾಮಾರಿ ತಗುಲಿದ್ದು, ಕ್ವಾರಂಟೈನ್ ಆದ ಸುಮಲತಾ ಸರಿಯಾದ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ. ಈ ಬಗ್ಗೆ ಫೇಸ್ಬುಕ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದ ಸುಮಲತಾ ಅಂಬರೀಷ್, ನಿಮ್ಮೆಲ್ಲರ ಪ್ರಾರ್ಥನೆ, ಹಾರೈಕೆಯಿಂದ ಮೂರು ವಾರಗಳ ಕಡ್ಡಾಯ ಕ್ವಾರಂಟೈನ್ ಮುಗಿಸಿ, ಕೊವಿಡ್ ನಿಂದ ಸಂಪೂರ್ಣವಾಗಿ ಗುಣಮುಖಳಾಗಿದ್ದು, ಪರೀಕ್ಷೆಯ ನಂತರ ನಾನೀಗ ಕೋವಿಡ್19 ನೆಗೆಟಿವ್ ಎಂದು ತಿಳಿಸಲು ನನಗೆ ಸಂತೋಷವಾಗುತ್ತಿದೆ. ವೈದ್ಯರ ಸಲಹೆಯಂತೆ ನಾಲಕ್ಕು ವಾರದ ವಿಶ್ರಾಂತಿ ಪಡೆದು, ನಿಮ್ಮೆಲ್ಲರ ಸೇವೆಗೆ ಮರಳಿ ಬರಲು ಕಾಯುತ್ತಿದ್ದೇನೆ ಎಂದಿದ್ದರು.
ಎಲ್ಲರನ್ನೂ ರಕ್ಕಸರಂತೆ ಕಾಡುತ್ತಿರುವ ಮಹಾಮಾರಿ ಕರೋನಾ ಸ್ಯಾಂಡಲ್ವುಡ್ನ್ನು ಸಹ ಬಿಟ್ಟಿಲ್ಲ, ಕೆಲ ದಿನಗಳ ಹಿಂದೆ ನಟ ಧ್ರುವ ಸರ್ಜಾ ಮತ್ತು ಪ್ರೇರಣಾಗೂ ಕೂಡ ಕೊರೊನಾ ತಗುಲಿದ್ದು, ಸದ್ಯ ಅವರಿಬ್ಬರು ಕೊರೊನಾವನ್ನ ಗೆದ್ದು ಬಂದಿದ್ದಾರೆ. ಅಲ್ಲದೇ, ಸಾಮಾಜಿ ಜಾಲತಾಣದಲ್ಲಿ ಧ್ರುವ ಸರ್ಜಾ ಕೊರೊನಾ ಬರದಂತೆ ಏನು ಮಾಡಬೇಕು ಅನ್ನೋದರ ಬಗ್ಗೆಯೂ ಸಲಹೆ ನೀಡಿದ್ದರು. ಒಟ್ಟಿನಲ್ಲಿ ಯಾವಾಗ ಈ ಕೊರೊನಾ ಕಾಟ ತಪ್ಪುತ್ತೋ, ಜನ ನೆಮ್ಮದಿಯಾಗಿ ಮತ್ತೆ ಮೊದಲಿನಂತೆ ಕಾಲ ಕಳಿಯುವ ಕಾಲ ಬರುತ್ತೋ ಅಂತಾ ಅನ್ನಿಸಿರೋದಂತೂ ಸುಳ್ಳಲ್ಲ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.




