Friday, November 22, 2024

Latest Posts

‘ಖುರಾನ್ ಪಠಣ ಮಾಡಬೇಕು ಎಂದು ಎಲ್ಲಿಯೂ ಇಲ್ಲ..’

- Advertisement -

ಹಾಸನ- ಹಾಸನ ಜಿಲ್ಲೆ ಬೇಲೂರಿನ ಐತಿಹಾಸಿಕ ಶ್ರೀ ಚನ್ನಕೇಶವ ಸ್ವಾಮಿ ರಥೋತ್ಸವ ದ ವೇಳೆ ಖುರಾನ್ ಪಠಣ ಬೇಡಾ ಎಂಬ ಹೋರಾಟ ವಿಚಾರಕ್ಕೆ ಸಂಬಂಧಿಸಿದಂತೆ, ಪುರಾತತ್ವ ಇಲಾಖೆಯ ಹಿರಿಯ ಆಗಮ ಪಂಡಿತ, ಜಿ.ಎ.ವಿಜಯ್ ಕುಮಾರ್ ದೇಗುಲಕ್ಕೆ ಭೇಟಿ ನೀಡಿದರು.

ಈ ವೇಳೆ ಮಾತನಾಡಿದ ಅವರು, ರಥೋತ್ಸವ ದಿನ ಯಾರು ಯಾರು ಯಾವ ಕರ್ತವ್ಯ ನಿರ್ವಹಿಸಬೇಕು ಏನೇನು ವ್ಯತ್ಯಾಸ ಆಗಿದೆ. ಜನರಲ್ಲಿ ಏನು ಗೊಂದಲ ಆಗಿದೆ ಅವುಗಳ ಪರಿಶೀಲನೆಗೆ ಮೇಲಾಧಿಕಾರಿಗಳ ಸೂಚನೆ ಇದೆ. ಹಾಗಾಗಿ ಇಂದು ಭೇಟಿ ನೀಡಲಾಗಿದೆ. ದೇವಾಲಯ ದಲ್ಲಿ ಯಾರು, ಯಾವ ಸಂದರ್ಭದಲ್ಲಿ ಯಾವ ಕರ್ತವ್ಯ ಹೇಗೆ ಮಾಡಬೇಕು ಎಂದು ಮ್ಯಾನ್ಯುಯಲ್ ಇದೆ. ಇದು ಮೈಸೂರು ಮಹಾರಾಜರ ಸಂಸ್ಥಾನದಿಂದ ಅದು ಬಿಡುಗಡೆ ಆಗಿದೆ. ಅದರಂತೆ ಎಲ್ಲ ವಿಧಿ ವಿಧಾನ, ಪೂಜಾ ಕೈಂಕರ್ಯ ಕರ್ತವ್ಯ ನಡೆಯುತ್ತಿದೆ. ಮಧ್ಯೆ ಸ್ವಲ್ಪ ವ್ಯತ್ಯಾಸ ಉಂಟಾಗಿ ಜನರಲ್ಲಿ ಗೊಂದಲ ಆಗಿದೆ. ಹಾಗಾಗಿ ನಾವು ಬಂದು ಆ ಗ್ರಂಥ ಪರಿಶೀಲನೆ ಮಾಡಿದ್ದೇವೆ ಎಂದಿದ್ದಾರೆ.

ವ್ಯವಸ್ಥಾಪನಾ ಸಮಿತಿ, ಆಡಳಿತ ಅಧಿಕಾರಿ, ಧಾರ್ಮಿಕ ಪರಿಷತ್ ಸದಸ್ಯರ ಸಮ್ಮುಖದಲ್ಲಿ ಪರಿಶೀಲನೆ ಮಾಡಲಾಗಿದೆ. ಮ್ಯಾನ್ಯುಯಲ್ ನಲ್ಲಿ ಏನು ಹೇಳಿದೆ ಯಾರು ಏನೇನು ಮಾಡುತ್ತಿದ್ದಾರೆ, ಏನು ತಪ್ಪು ಆಗಿದೆ ಎನ್ನೋ ಬಗ್ಗೆ ಪರಿಶೀಲನೆ ಮಾಡಲಾಗಿದೆ. ಈ ಬಗ್ಗೆ ಇನ್ನೂ ಅನೇಕ ಗ್ರಂಥಗಳನ್ನು ಅಧ್ಯಯನ ಮಾಡಿ ಎಲ್ಲವನ್ನೂ ತಿಳಿದು ನಾನು ಹಿರಿಯ ಅಧಿಕಾರಿಗಳಿಗೆ ವರದಿ ಕೊಡಬೇಕಾಗುತ್ತೆ..

ಇನ್ನು ಎರಡು ಮೂರು ದಿನದಲ್ಲಿ ನಮ್ಮ ವರದಿಯನ್ನು ನೀಡುತ್ತೇನೆ. ಕೈಪಿಡಿಯಲ್ಲಿ ಏನಿದೆ ಅದನ್ನ ಮಾಡಬೇಕು, ಆಗಿರೊ ಲೋಪದೋಷ ಸರಿಪಡಿಸಿಕೊಳ್ಳಬೇಕು. ಮ್ಯಾನ್ಯುಯಲ್ ಪ್ರಕಾರ  ಎಲ್ಲರಿಗೂ ಹಿಂದು ಧಾರ್ಮಿಕ ದತ್ತಿ ಕಾಯಿದೆ ಸೆಕ್ಷನ್ 58 ರ ಪ್ರಕಾರ ದೇವಾಲಯದ  ಸಂಪ್ರದಾಯ ನಡೆಸಿಕೊಂಡು ಹೋಗಬೇಕು ಎಂದಿದೆ. ಅದರಂತೆ ಸರ್ಕಾರ ಮುಂದಿನ ಕ್ರಮ ವಹಿಸುತ್ತೆ ಎಂದಿದ್ದಾರೆ.

ರಥದ ಮುಂದೆ ಖುರಾನ್ ಪಠಣ ಮಾಡಬೇಕು ಎಂದು ಎಲ್ಲಿಯೂ ಹೇಳಿಲ್ಲ. ನಾನು ಓದಿದ ಪ್ರಕಾರ ರಥದ ಮುಂದೆಯಾಗಲಿ, ದೇವಾಲಯದ ಮುಂದೆಯಾಗಲಿ ಮಾಡಬೇಕು ಎಂದು ಹೇಳಿಲ್ಲ. ಅವರಿಗೆ ಗೌರವ ಸಲ್ಲಿಸಬೇಕು ಅವರು ನಮಸ್ಕರಿಸಬೇಕು ಎಂದು ಹೇಳಲಾಗಿದೆ. ಈ ಬಗ್ಗೆ ಕೈಪಿಡಿ ಪ್ರತಿಯನ್ನು ಪಡೆಯಲಾಗಿದೆ. ಮುಂದೆ ಏನು ಮಾಡಬೇಕು ಎಂದ ಆಯುಕ್ತರು ತೀರ್ಮಾನ ಮಾಡುತ್ತಾರೆ.  ಖುರಾನ್ ಪಠಣ ಮಾಡಬೇಕು ಎಂದು ಎಲ್ಲಿಯೂ ಇಲ್ಲ. ಇದನ್ನ ನಾನು ವರದಿಯಲ್ಲಿ ಕೊಡುತ್ತೇನೆ ಎಂದಿದ್ದಾರೆ.

ಅಲ್ಲದೇ, ಅವರು ಮರ್ಯಾದೆ ಸಲಾಂ ಮಾಡಬೇಕು ಎಂದಿದೆ. ಅವರು ಮರ್ಯಾದೆ ಮಾಡಬೇಕು ಎಂದು ಉಲ್ಲೇಖ ಇದೆ, ದೇವಸ್ಥಾನಕ್ಕಾಗಲಿ, ಅಧಿಕಾರಿ ಗಳಿಗಾಗಲಿ ಯಾರಿಗೆ ನಮಸ್ಕಾರ ಮಾಡಬೇಕು ಎಂದು ಇಲ್ಲ. ನಮಸ್ಕಾರ ಮಾಡಬೇಕು ಎಂದಿದೆ ಹಾಗಾಗಿ ಅಧಿಕಾರಿಗಳು ತೀರ್ಮಾನ ಮಾಡ್ತಾರೆ ಎಂದು ಹಿರಿಯ ಆಗಮ ಪಂಡಿತ ವಿಜಯ್ ಕುಮಾರ್ ಹೇಳಿದ್ದಾರೆ.

ರೀಲ್ಸ ಕ್ವೀನ್ ಎಂದು ಖ್ಯಾತಿಯಾಗಿದ್ದ ನಾಲ್ಕನೆ ತರಗತಿ ಬಾಲಕಿ ಆತ್ಮಹತ್ಯೆಗೆ ಶರಣು

ಶಿವಣ್ಣ ಜೊತೆ ಸಿನಿಮಾದಲ್ಲಿ ನಟಿಸಲು ಮುಂದಾದ ಬಾಲಿವುಡ್ ನಟ ಅನುಪಮ್ ಖೇರ್

6 ಲಕ್ಷ ಬೆಲೆಯ ಇಡ್ಲಿ ಆರ್ಡರ್ ಮಾಡಿದ ಸ್ವಿಗ್ಗಿ ಯೂಸರ್..

- Advertisement -

Latest Posts

Don't Miss