Thursday, December 12, 2024

Latest Posts

ರಾಜ್ಯಾದ್ಯಂತ ಮುಂದಿನ ನಾಲ್ಕು ದಿನ ಭಾರೀ ಮಳೆ : 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ..!

- Advertisement -

ಬೆಂಗಳೂರು : ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೂ ಮುಂದಿನ 4 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಮಾನ ಇಲಾಖೆಯ ಪ್ರಕಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರು ನಗರ ಸೇರಿದಂತೆ ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಮಂಡ್ಯ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಸೇರಿದಂತೆ ರಾಜ್ಯದ ನಾನಾ ಕಡೆಗಳಲ್ಲಿ ಮಳೆ ಮುಂದಿನ 4 ದಿನದಲ್ಲಿ ಇನ್ನೂ ಹೆಚ್ಚುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇದೇ ವೇಳೆ ಮುಂಗಾರು ಮಳೆ ಪೂರ್ಣ ಪ್ರಮಾಣದಲ್ಲಿ ಬೀಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

- Advertisement -

Latest Posts

Don't Miss