ಬೆಂಗಳೂರು: ಜೆಡಿಎಸ್ ನ ಯುವ ಮುಖಂಡರಾದ ನಿಖಿಲ್ ಮತ್ತು ಪ್ರಜ್ವಲ್ ರೇವಣ್ಣಾಗೆ ಈಗಾಗಲೇ ಸಾಕಷ್ಟು ಪ್ರಚಾರ ಸಿಕ್ಕಿದೆ. ಹೀಗಾಗಿ ಅವರು ತೆರೆ ಮರೆಯಲ್ಲಿರೋದು ಸೂಕ್ತ ಅನ್ನೋ ಮೂಲಕ ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ವೈ.ಎಸ್.ವಿ ದತ್ತಾ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಕುಟುಂಬ ರಾಜಕಾರಣಕ್ಕೆ ಖ್ಯಾತಿ ಪಡೆದಿರೋ ಜೆಡಿಎಸ್ ನೊಳಗೇ ಕುಟುಂಬ ರಾಜಕಾರಣಕ್ಕೆ ಸಣ್ಣದೊಂದು ಭಿನ್ನರಾಗ ಮೂಡಿ ಬಂದಿದೆ. ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಹಾಗೂ ಸಚಿವ ರೇವಣ್ಣ ಪುತ್ರ ಪ್ರಜ್ವಲ್ ಗೆ ಈಗಾಗಲೇ ಸಾಕಷ್ಟು ಪ್ರಚಾರ ದೊರೆತು ಸಾಕಷ್ಟು ಹೆಸರು ಮಾಡಿದ್ದಾರೆ.ಇಬ್ಬರೂ ಪ್ರಜ್ವಲಿಸುತ್ತಿದ್ದಾರೆ. ಹೀಗಾಗಿ ಅವರಿಬ್ಬರೂ ತೆರೆಮರೆಗೆ ಸರಿಯೋ ಮೂಲಕ ಬೇರೆಯವರಿಗೆ ಅವಕಾಶ ಮಾಡಿಕೊಡಲಿ ಅಂತ ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ವೈ ಎಸ್ ವಿ ದತ್ತಾ ಹೇಳಿದ್ದಾರೆ.
ಇನ್ನು ದತ್ತಾ ಯಾವ ಉದ್ದೇಶದಿಂದ ಈ ರೀತಿ ಹೇಳಿಕೆ ನೀಡಿದ್ದಾರೆ ಅನ್ನೋದು ರಾಜಕೀಯ ವಲಯದಲ್ಲಿ ಗೊಂದಲ ಮೂಡಿಸಿದೆ. ಒಂದು ವೇಳೆ ದತ್ತಾ ಕೂಡ ಕುಟುಂಬ ರಾಜಕಾರಣಕ್ಕೆ ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದ್ರಾ ಅನ್ನೋ ಮಾತು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.
ಜೋಡೆತ್ತುಗಳು ಈಗ ಏನ್ ಮಾಡ್ತಿವೆ ಗೊತ್ತಾ..? ಮಿಸ್ ಮಾಡದೇ ಈ ವಿಡಿಯೋ ನೋಡಿ