Friday, March 29, 2024

Latest Posts

ಆಂಧ್ರ ಸಿಎಂ ಭೇಟಿಯಾದ ನಿಖಿಲ್ ಕುಮಾರ್

- Advertisement -

ಬೆಂಗಳೂರು: ರಾಜಕೀಯದ ಆಳಕ್ಕಿಳಿಯೋ ಯತ್ನ ಮಾಡ್ತಿರೋ ನಿಖಿಲ್ ಇದೀಗ ನೆರೆಯ ಆಂಧ್ರಪ್ರದೇಶದ ಸಿಎಂ ಜಗನ್ ಮೋಹನ್ ರೆಡ್ಡಿ ಭೇಟಿಯಾಗಿ ರಾಜಕಾರಣದ ಬಗ್ಗೆ ಚರ್ಚಿಸಿ ಅವರಿಗೆ ಶುಭಾಶಯ ಕೋರಿದ್ದಾರೆ.

ಜಗನ್ ಭೇಟಿಯಾದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರೋ ನಿಖಿಲ್, ಅಭೂತಪೂರ್ವ ಜನಾದೇಶ ಪಡೆದು ಆಡಳಿತದ ಚುಕ್ಕಾಣಿ ಹಿಡಿದಿರುವ ಯುವನಾಯಕ, ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿ ಶ್ರೀ ವೈ.ಎಸ್. ಜಗನ್ ಮೋಹನ್ ರೆಡ್ದಿ ಅವರನ್ನು ವಿಜಯವಾಡಾದಲ್ಲಿ ಭೇಟಿಯಾಗಿ, ಅಭಿನಂದನೆಗಳನ್ನು ಸಲ್ಲಿಸಿ ಶುಭಾಶಯ ಕೋರಿದೆ.

ಅಂಧ್ರದಲ್ಲಿ ’ಜಗನ್ ಅಣ್ಣಾ’ ಎಂದೇ ಜನಪ್ರಿಯರಾಗಿರುವ ಜಗನ್ ಮೋಹನ್ ರೆಡ್ಡಿಯವರ ರಾಜಕೀಯ ಜೀವನ, ರಾಜಕೀಯ ಕ್ಷೇತ್ರದಲ್ಲಿರುವ ಎಲ್ಲ ಯುವಕರಿಗೆ, ಕಾರ್ಯಕರ್ತರಿಗೆ ಪ್ರೇರಣೆ ನೀಡುವಂಥದ್ದು. ಹತ್ತು ವರ್ಷಗಳಿಗೂ ಹೆಚ್ಚು ಸುಧೀರ್ಘ ಕಾಲದ ಅವರ ಹೋರಾಟದ ದಾರಿ ಎಲ್ಲ ಯುವ ರಾಜಕಾರಣಿಗಳಿಗೆ ಮಾದರಿಯಾಗಿದೆ. ಜನರ ಸೇವೆಗಾಗಿ ಅವರ ಬದ್ದತೆ ಮತ್ತು ಎದುರಾದ ಎಲ್ಲ ಅಡೆತಡೆ, ಸೋಲು, ಸವಾಲುಗಳನ್ನು ಮೀರಿ, ಗುರಿಮುಟ್ಟುವವರೆಗೂ ವಿರಮಿಸದ ಅವರ ಛಲ, ದಿಟ್ಟತನ, ಹೋರಾಟಗಳಿಗೆ ಜನ ಆಶೀರ್ವಾದ ಮಾಡಿದ್ದಾರೆ. ಈ ಅವಕಾಶವನ್ನು ಅವರು ಸಂಪೂರ್ಣವಾಗಿ ಬಳಸಿಕೊಂಡು, ಆಂಧ್ರಪ್ರದೇಶದ ಮುಖ್ಯಮಂತ್ರಿಗಳಾಗಿ ಅವರು, ಜನರ ನಿರೀಕ್ಷೆಗೆ ತಕ್ಕಂತೆ ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿಸಲಿ ಎಂದು ಹೃತ್ಪೂರ್ವಕವಾಗಿ ಹಾರೈಸುತ್ತೇನೆ.

ಕರ್ನಾಟಕದ ರಾಜಕಾರಣವನ್ನು ಕೂಡ ಚೆನ್ನಾಗಿ ತಿಳಿದಿರುವ ಜಗನ್ ರವರು ಪ್ರಸಕ್ತ ರಾಜಕೀಯ ಸನ್ನಿವೇಶಗಳನ್ನು ಬಹಳ ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ಹೇಳಿದರು. ಇಂತಹ ಸಂದರ್ಭದಲ್ಲಿ ನನ್ನಂತಹ ಯುವ ರಾಜಕಾರಣಿಗಳಿಗೆ ಉತ್ತಮ ಅವಕಾಶಗಳಿವೆ, ಸಾರ್ವಜನಿಕ ಜೀವನದಲ್ಲಿ, ಯಾವುದಕ್ಕೂ ಹಿಂಜರಿಯದೆ ಜನಸೇವೆಯೊಂದನ್ನೇ ಗುರಿಯಾಗಿಟ್ಟುಕೊಂಡು ಮುಂದುವರಿಯುವಂತೆ ನನಗೆ ಸಲಹೆ ನೀಡಿ, ರಾಜಕೀಯದಲ್ಲಿ ಉತ್ತಮ ಭವಿಷ್ಯವನ್ನು ಹಾಗು ಯಶಸ್ಸನ್ನು ಹಾರೈಸಿದರು ಅಂತ ನಿಖಿಲ್ ಕುಮಾರ್ ಬರೆದುಕೊಂಡಿದ್ದಾರೆ.

ಮೋದಿಯವರನ್ನ ಕಾಪಾಡಿದ್ದು ಈ ಒಂದು ನಿರ್ಧಾರ!! ಮಿಸ್ ಮಾಡದೇ ಈ ವಿಡಿಯೋ ನೋಡಿ

https://www.youtube.com/watch?v=sFbPCYxP-dY
- Advertisement -

Latest Posts

Don't Miss