Friday, April 4, 2025

Latest Posts

ಕುಟುಂಬ ಸಮೇತರಾಗಿ ಕುಕ್ಕೆ, ಧರ್ಮಸ್ಥಳಕ್ಕೆ ಭೇಟಿ ನೀಡಿದ ನಿಖಿಲ್ ಕುಮಾರ್

- Advertisement -

Political News: ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ, ಇಂದು ಪತ್ನಿ ಮತ್ತು ಮಗನ ಸಮೇತರಾಗಿ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳಕ್ಕೆ ಭೇಟಿ ನೀಡಿ, ದೇವರ ದರ್ಶನ ಮಾಡಿ, ಆಶೀರ್ವಾದ ಪಡೆದಿದ್ದಾರೆ.

ಕುಟುಂಬ ಸಮೇತರಾಗಿ ನಿಖಿಲ್ ಕುಮಾರ್, ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀಮಂಜುನಾಥನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ, ಆಶೀರ್ವಾದ ಪಡೆದಿದ್ದಾರೆ. ಆನಂತರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ, ಸುಬ್ರಹ್ಮಣ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ನಿಖಿಲ್, ಸತ್ಯ, ನ್ಯಾಯದ ನೆಲೆವೀಡು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಿ ನಾಡಿನ ಜನತೆಗೆ ಒಳಿತಾಗಲಿ ಎಂದು ಪ್ರಾರ್ಥಿಸಿದೆ. ನಂತರ ಶ್ರೀ ಕ್ಷೇತ್ರದ ಧರ್ಮಾಧಿಕಾರಿಗಳಾದ ಪೂಜ್ಯ ಶ್ರೀ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದೆ. ನಾಗರಾಧನೆಗೆ ಪ್ರಸಿದ್ಧವಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಶ್ರೀ ಕುಕ್ಕೆ ಸುಬ್ರಮಣ್ಯ ಸ್ವಾಮಿಯ ದೇಗುಲಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದೆ ಎಂದು ನಿಖಿಲ್ ಟ್ವೀಟ್ ಮಾಡಿದ್ದಾರೆ.

- Advertisement -

Latest Posts

Don't Miss