ಮೊಮ್ಮಗಳ ಸಾವಿನ ಶೋಕದಲ್ಲಿರುವ ಜಿ.ಟಿ. ದೇವೇಗೌಡರ ಕುಟುಂಬಕ್ಕೆ ಸಾಂತ್ವನ ಹೇಳಿದ ನಿಖಿಲ್ ಕುಮಾರಸ್ವಾಮಿ

ಮೈಸೂರು: ಮಾಜಿ ಸಚಿವರು, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡರ ಮೊಮ್ಮಗಳು, ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಡಿ. ಹರೀಶ್ ಗೌಡ ಅವರ ಪುತ್ರಿ ಗೌರಿಯ ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಿ ಕುಟುಂಬ ವರ್ಗಕ್ಕೆ ನಿಖಿಲ್ ಕುಮಾರಸ್ವಾಮಿ ಧೈರ್ಯ ತುಂಬಿದರು.

ಶನಿವಾರ ತಡರಾತ್ರಿ ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗೌರಿ ನಿಧನರಾಗಿದ್ದರು. ಇಂದು ಗುಂಗ್ರಾಲ್ ಛತ್ರ ತೋಟದ ಮನೆಯಲ್ಲಿ ನಡೆದ ಗೌರಿಯ ಅಂತಿಮ ಸಂಸ್ಕಾರದಲ್ಲಿ ಭಾಗಿಯಾದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರು ಜಿ.ಟಿ. ದೇವೇಗೌಡ ಅವರ ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಿದರು.

About The Author