ನಿಖಿಲ್ ಪಾಪ ಅಮಾಯಕ, ಮಂಡ್ಯದು ಪ್ರತಿ ದಿನ ಒಂದು ಧಾರಾವಾಹಿ ಇರಲೇಬೇಕು: ಹೆಚ್.ಡಿ.ಕುಮಾರಸ್ವಾಮಿ

Hassan News: ಹಾಸನ : ಹಾಸನ ತಾಲೂಕಿನ, ಚನ್ನಂಗಿಹಳ್ಳಿ ಗ್ರಾಮದಲ್ಲಿ ಮಾಜಿಸಿಎಂ ಎಚ್.ಡಿ‌.ಕುಮಾರಸ್ವಾಮಿ ಮಾತನಾಡಿದ್ದು, ಇತ್ತೀಚಿನ ರಾಜಕೀಯ ಸಂಘರ್ಷ ನಡೆಯುತ್ತಿದೆ. ಕೇಂದ್ರ ರಾಜ್ಯದ ನಡುವೆ ವಾಗ್ದಾಳಿ ನಡೆಯುತ್ತಿದೆ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಇಂದಿನಿಂದ ಜಂಟಿ ಅಧಿವೇಶನ ಆರಂಭವಾಗುತ್ತೆ. ಫೆ.16 ಬಜೆಟ್ ಮಂಡನೆಗರ ಸಮಯ ನಿಗದಿ ಮಾಡಿದ್ದಾರೆ. ವಿಧಾನಸಭೆ ಕಲಾಪದಲ್ಲಿ ಎಲ್ಲಾ ವಿಷಯಗಳ ಬಗ್ಗೆ ಮಾತನಾಡಲು ತೀರ್ಮಾನ ಮಾಡಿದ್ದೇನೆ. ಅಂಕಿ ಅಂಶಗಳ ಜೊತೆ ಚರ್ಚೆ ಮಾಡ್ತಿನಿ ಎಂದು ಹೇಳಿದ್ದಾರೆ.

ಕೇಂದ್ರದಿಂದ ರಾಜ್ಯಕ್ಕೆ ಟ್ಯಾಕ್ಸ್ ಹಣ ಕೊಡುವ ಈ ಸಿಸ್ಟಂ ಪ್ರಾರಂಭ ಆಗಿದ್ದು ಯಾವಾಗ..? ಈಗ ದೊಡ್ಡಮಟ್ಟದಲ್ಲಿ ಕೇಂದ್ರದ ಮೇಲೆ ದಾಳಿ ನಡೆಯುತ್ತಿದೆ. ಈ ರಾಜ್ಯದಲ್ಲಿ ದಾಖಲೆಯ ಬಜೆಟ್ ಮಂಡನೆ ಮಾಡಿರುವ ಮುಖ್ಯಮಂತ್ರಿಗಳು ನೀವೇ. ಈಗ ಕೇಂದ್ರ ಸರ್ಕಾರದಿಂದ ಅನ್ಯಾಯ ಆಗಿದೆ ಎಂದು ಹೇಳಿತ್ತಿದ್ದೀರಿ. 1952 ಸಂವಿಧಾನದಲ್ಲಿ ಸಂಸ್ಥೆಯನ್ನು ಪ್ರಾರಂಭ ಮಾಡಿದ್ರು. ಅಲ್ಲಿಂದ ಚರ್ಚೆ ಮಾಡಲು ಹೀದರೆ ದೊಡ್ಡ ಕಥೆಯಿದೆ. ಎನ್‌ಡಿಆರ್‌ಎಫ್‌‌ನಿಂದ ಬಿಡಿಗಾಸು ಕೊಟ್ಟಿಲ್ಲ ಅಂತಾರೆ. ಇವರಿಗೆ ರಾಜಕೀಯ ಗೊತ್ತಿಲ್ಲದೆ ಇದೆಯಾ..? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ವಿಶೇಷ ಅನುದಾನ ಕೆಲವು ಭಾರಿ ಕೊಟ್ಟಿದ್ದಾರೆ. ಮೈತ್ರಿ ಸೀಟ್ ಬಗ್ಗೆ ಯಾವುದೇ ಸಮಸ್ಯೆ ಇಲ್ಲ. ಕಾಂಗ್ರೆಸ್‌ನ ದುರಾಡಳಿತ ಏನಿದೆ ಅದನ್ನು ತೆಗೆಯಬೇಕು. ಕೆಂಪಣ್ಣ ಆರೋಪ ಮಾಡಿದ್ದಾರೆ, ಸಾಕ್ಷಿ ಕೊಡಲಿ ಅಂತಾರೆ. ಅವರ ಪಕ್ಷದ ಮಾಜಿಸಚಿವರೇ ಬೆಳಿಗ್ಗೆ ಡಂಗುರ ಹೊಡೆಯುತ್ತಿದ್ದಾರೆ. ಇದೇ ಕೆಂಪಣ್ಣನ ಹೇಳಿಕೆ ಇಟ್ಕಂಡು ಪೇ ಸಿಎಂ ಎಂದು ಅಂಟಿಸಿದರು. ಈ ಭ್ರಷ್ಟ ಸರ್ಕಾರ ತೆಗೆಯಬೇಕು, 28 ಕ್ಕೆ 28 ಸೀಟ್ ಗೆಲ್ಲಬೇಕು. ಸೀಟ್ ಹಂಚಿಕೆಯಲ್ಲಿ ಎಷ್ಟು ಅನ್ನೋದು ಮುಖ್ಯವಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಇನ್ನು ಮಂಡ್ಯ ಚುನಾವಣೆ ಬಗ್ಗೆ ಮಾತನಾಡಿದ ಕುಮಾರಸ್ವಾಮಿ, ಮಂಡ್ಯದು ಪ್ರತಿ ದಿನ ಒಂದು ಧಾರಾವಾಹಿ ಇರಲೇಬೇಕು. ನಿಖಿಲ್ ಕುಮಾರಸ್ವಾಮಿ ಅವರ ರಾಜಕೀಯವಾಗಿ ಮುಗಿಸಲೇಬೇಕು ಎಂದು ಯಾವ ರೀತಿ ರಾಜಕೀಯ ಮಾಡಿದ್ರು. ಪಾಪ ಅವನು ಅಮಾಯಕ. ಒಂದು ತಿಂಗಳಿನಿಂದ ಧಾರಾವಾಹಿ ನಡೆಯುತ್ತಿದೆ. ಈ ಜಿಲ್ಲೆಯಲ್ಲೂ ಜೆಡಿಎಸ್ ಅಭ್ಯರ್ಥಿ ಗೆಲ್ಲಬೇಕು. ಸಣ್ಣಪುಟ್ಟ ಸಮಸ್ಯೆಗಳಿವೆ, ಸರಿಪಡಿಸಿಕೊಳ್ಳುತ್ತೇವೆ. ನರೇಂದ್ರಮೋದಿಯವರು ಮೂರನೇ ಭಾರಿ ಪ್ರಧಾನಮಂತ್ರಿ ಆಗುವುದನ್ನು ಯಾರು ತಪ್ಪಿಸಲು ಆಗಲ್ಲ ಎಂದು ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.

ಹಾಸನ ಮಂಡ್ಯ ಬಿಜೆಪಿಗೆ ಟಿಕೆಟ್ ನೀಡುವಂತೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಒತ್ತಾಯ ವಿಚಾರದ ಬಗ್ಗೆ ಕುಮಾರಸ್ವಾಮಿ ಮಾತನಾಡಿದ್ದು, ಅವರನ್ನೇ ನಿಲ್ಲಿಸಬೇಕೆಂದರೆ ನಿಲ್ಲಿಸೋಣ. ಅವರೇ ನಿಲ್ಲಬೇಕು ಎನ್ನುವ ಆಸೆ ಇದ್ದರೆ ಚರ್ಚೆ ಮಾಡೋಣ. ನಾವು, ಅವರು ಅಣ್ಣ-ತಮ್ಮಂದಿರ ತರ ಹೋಗಬೇಕಲ್ವಾ. ಪಾಪ ಯಾರ‌್ಯಾರೋ ಅವನ ಮನಸ್ಸಿನ ಮೇಲೆ ಪರಿಣಾಮ ಆಗುವ ಹಾಗೇ ಹೇಳ್ತಾರೆ. ಅವರಿಗೆ ಇನ್ನೂ ಯಂಗ್ ಏಜ್, ಪಾಪ ಮಾತಾಡುತ್ತಾರೆ, ಮಾತಿನ ಬಿರುಸು. ಅವನು ಒಬ್ಬ ನಮ್ಮ ತಮ್ಮ ಅಲ್ವೆ..? ಕುಳಿತು ಸರಿ ಮಾಡೋಣ ಅದೇನ್ ಸಮಸ್ಯೆ ಇಲ್ಲಾ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಸಂಸತ್‌ನತ್ತ ರಜತ್ ಚಿತ್ತ: ವಿವಿಧ ಮಠದ ಸ್ವಾಮೀಜಿಗಳ ಬೆಂಬಲ

‘ಇಂಥವರಿಗೆ ರಾಮನ ದಯೆಯೂ ಇರಲಾರದು, ಚಾಮುಂಡೇಶ್ವರಿ ಆಶೀರ್ವಾದವೂ ಸಿಗಲಾರದು’

ನಮ್ಮ ಊರಿನ ಮತದಾರರಿದ್ದಾರಲ್ಲ ಅವರು ನನಗೆ ಹೈಕಮಾಂಡ್‌: ಸಚಿವ ಕೆ.ಎನ್.ರಾಜಣ್ಣ

About The Author