Thursday, December 12, 2024

Latest Posts

ಇಂದಲ್ಲ ನಾಳೆ ಜನಸೇವೆ ಮಾಡುವ ಅವಕಾಶ ನಿಖಿಲ್‌ಗೆ ಸಿಕ್ಕೇ ಸಿಗುತ್ತದೆ: ಅನಿತಾ ಕುಮಾರಸ್ವಾಮಿ

- Advertisement -

Political News: ಚೆನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಕುಮಾರ್ ಸೋಲನ್ನಪ್ಪಿದ್ದು, ಈ ಬಗ್ಗೆ ಮೊದಲ ಬಾರಿ ತಾಯಿ ಅನಿತಾ ಕುಮಾರಸ್ವಾಮಿ, ಭಾವನಾತ್ಮಕ ಪತ್ರ ಬರೆದಿದ್ದಾರೆ. ಟ್ವೀಟ್ ಮುಖಾಂತರ ತಮ್ಮ ಮನದಾಳದ ಮಾತನ್ನು ಹೇಳಿರುವ ಅನಿತಾ ಕುಮಾರಸ್ವಾಮಿ, ತಮ್ಮ ಮಗನ ಬಗ್ಗೆ ತಮಗಿರುವ ಭಾವನೆ ವ್ಯಕ್ತಪಡಿಸಿದ್ದಾರೆ.

ಎಲ್ಲರಿಗೂ ನಮಸ್ಕಾರ, ನನ್ನ ಮಗ ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಪರಾಜಯ ಹೊಂದಿದ್ದಾನೆ. ಒಪ್ಪುತ್ತೇನೆ. ಚುನಾವಣೆ ವ್ಯವಸ್ಥೆಯಲ್ಲಿ ಸೋಲು ಗೆಲುವು ಇದ್ದೇ ಇರುತ್ತದೆ. ಹಾಗೂ ಒಬ್ಬರು ಗೆಲ್ಲಬೇಕಾದರೆ, ಇನ್ನೊಬ್ಬರು ಸೋಲಲೇಬೇಕಾಗುತ್ತದೆ. ಆದರೆ, ಸೋಲಿಗೆ ಅನೇಕ ಕಾರಣಗಳಿರುತ್ತದೆ. ಹಾಗೆಂದು ನಿಖಿಲ್ ಸೋಲಿನ ಕಾರಣಗಳ ಬಗ್ಗೆ ಚರ್ಚಿಸುವುದು ನನ್ನ ಉದ್ದೇಶವಲ್ಲ. ರಾಜಕಾರಣದಲ್ಲಿ ನನಗಾಗಲಿ, ನನ್ನ ಪತಿಗಾಗಲಿ, ಅಥವಾ ನನ್ನ ಪೂಜ್ಯ ಮಾವನವರಿಗೇ ಆಗಲಿ, ಗೆಲುವು ಸೋಲು ಹೊಸದೇನಲ್ಲ. ಎರಡನ್ನೂ ಸಮಚಿತ್ತದಿಂದ ಸ್ವೀಕರಿಸಿದ್ದೇವೆ. ಗೆದ್ದಾಗ ಬೀಗಿಲ್ಲ, ಸೋತಾಗ ಕುಗ್ಗಿಲ್ಲ. ಸೋತ ಹತಾಷೆಯಲ್ಲಿ ಅನ್ಯರನ್ನು ಹೀಗೆಳೆದಿಲ್ಲ. ನನ್ನ ಮಗನಿಗೂ ಇದೇ ಅನ್ವಯವಾಗುತ್ತದೆ.

ನನ್ನ ಮಗನ ಬಗ್ಗೆ ರಾಜ್ಯದ ಜನರಿಗೆ ಹೆಚ್ಚೇನು ಹೇಳುವ ಅವಶ್ಯಕತೆ ಇಲ್ಲ. ಅವನು ಒಳ್ಳೆಯ ಮಗ, ಒಳ್ಳೆಯ ಪತಿ, ಒಳ್ಳೆಯ ತಂದೆ. ರಾಜಕಾರಣಕ್ಕೆ ಬರುವ ಮುನ್ನ ಒಳ್ಳೆಯ ಗೆಳೆಯ, ಒಳ್ಳೆಯ ನಟ. ಅವನಂಥ ಒಳ್ಳೆಯ ಮಗನನ್ನು ಪಡೆದಿದ್ದಕ್ಕಾಗಿ ನಾನು ನನ್ನ ಪತಿ ಹೆಮ್ಮೆ ಪಡುತ್ತೇವೆ. ತಾಯಿಯಾಗಿ ಅವನ ಯಶಸ್ಸನ್ನು ಸಂಭ್ರಮಿಸುತ್ತೇನೆ. ಅವನಿಗೆ ಕಷ್ಟ ಎದುರಾದಾಗ ಕಣ್ಣೀರಿಟ್ಟಿದ್ದೇನೆ. ನನ್ನ ಕರುಳ ಬಳ್ಳಿಯ ಮೇಲೆ ನನಗಷ್ಟು ಮಮಕಾರ ಇರುತ್ತದಲ್ಲವೇ..? ನನ್ನಂಥ ಎಲ್ಲಾ ತಾಯಂದಿರಿಗೂ ನನ್ನ ಭಾವನೆಗಳು ಅರ್ಥವಾಗುತ್ತದೆ ಎನ್ನುವ ವಿಶ್ವಾಸ ನನ್ನದು.

ನನ್ನ ಮಗ 3ನೇ ಸಲ ಸೋತಿದ್ದಾನೆ. ಅವನು ಚುನಾವಣೆಯಲ್ಲಿ ಮಾತ್ರ ಸೋತಿದ್ದಾನೆ ಹೊರತು, ಮನುಷ್ಯನಾಗಿ ಸೋತಿಲ್ಲ. ಅವನ ಮಾನವೀಯತೆ, ಸಹೃದಯತೆ ಸೋತಿಲ್ಲ. ಅವನು ಮನಸ್ಸು, ಹೃದಯ ವೈಶ್ಯಾಲ್ಯತೆ ಏನೆಂದು ತಾಯಿಯಾಗಿ ನನಗೆ ಚೆನ್ನಾಗಿ ಗೊತ್ತು.

ನಾನು ಸದಾ ಆ ಭಗವಂತನಲ್ಲಿ ನಂಬಿಕೆ ಇಟ್ಟಿದ್ದೇನೆ. ನನ್ನ ಮಗನ ಮೇಲೆ ಆ ದೈವದ ಕರುಣೆ, ಅನುಗ್ರಹವಿದೆ. ಚನ್ನಪಟ್ಟಣದ ಜನರ ಪ್ರೀತಿ, ವಿಶ್ವಾಸವೂ ಸದಾ ಅವನ ಮೇಲಿರುತ್ತದೆ. ಇಂದಲ್ಲ ನಾಳೆ ಜನಸೇವೆ ಮಾಡುವ ಅವಕಾಶ ಅವನಿಗೆ ಸಿಕ್ಕೇ ಸಿಗುತ್ತದೆ ಎನ್ನುವ ಅಚಲ ನಂಬಿಕೆ ನನ್ನದು.

ಧನ್ಯವಾದಗಳು

                          ಶ್ರೀಮತಿ ಅನಿತಾ ಕುಮಾರಸ್ವಾಮಿ

- Advertisement -

Latest Posts

Don't Miss